ಇಂದಿನಿಂದ ಕುಶಾಲನಗರದಲ್ಲಿ 11ನೇ ಕನ್ನಡ ಸಾಹಿತ್ಯ ಸಮ್ಮೇಳನ


Team Udayavani, Jan 10, 2017, 3:40 AM IST

KA-SA-PA-9-1.jpg

ಮಡಿಕೇರಿ: ಗಡಿನಾಡು ಕೊಡಗಿನಲ್ಲಿ ಕನ್ನಡದ ಕಂಪನ್ನು ಪಸರಿಸುವ 11ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲೆಯ ಹೆಬ್ಟಾಗಿಲೆಂದೇ ಖ್ಯಾತಿಯನ್ನು ಪಡೆದಿರುವ ಕುಶಾಲನಗರ ಸಜಾjಗುತ್ತಿದ್ದು, ಜ. 10 ಮತ್ತು 11 ರಂದು ಸಮ್ಮೇಳನ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಿ.ಎಸ್‌. ಲೋಕೇಶ್‌ ಸಾಗರ್‌, ವಿವಿಧ ಉಪಸಮಿತಿಗಳ ಮೂಲಕ ಕನ್ನಡದ ಹಬ್ಬಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು. ಜಿಲ್ಲೆಯ ವಿವಿಧೆಡೆಗಳಿಂದ ಬರುವ ಕನ್ನಡಾಭಿಮಾನಿಗಳಿಗೆ ಅಗತ್ಯ ವಸತಿ ಮತ್ತು ಊಟೋಪಚಾರದ ವ್ಯವಸ್ಥೆಗಳ ಸಿದ್ಧತೆ ಅಂತಿಮ ಹಂತದಲ್ಲಿದೆ ಎಂದು ತಿಳಿಸಿದರು. ರೈತ ಸಹಕಾರ ಭವನದಲ್ಲಿ ನಡೆಯುವ ಸಮ್ಮೇಳನದ ಮೊದಲ ದಿನವಾದ ಜ.10 ರಂದು ಬೆಳಗ್ಗೆ 8 ಗಂಟೆಗೆ ಸೋಮವಾರಪೇಟೆ ತಾಲ್ಲೂಕು ತಹಶೀಲ್ದಾರ್‌ ಜಿ.ಎಸ್‌. ಕೃಷ್ಣ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದು, ಜಿಲ್ಲಾ ಕಸಾಪ ಅಧ್ಯಕ್ಷರಾದ ಬಿ.ಎಸ್‌. ಲೋಕೇಶ್‌ ಸಾಗರ್‌ ಪರಿಷತ್ತಿನ ಧ್ವಜವನ್ನು ಹಾಗೂ ಕುಶಾಲನಗರ ಪ. ಪಂ.ಅಧ್ಯಕ್ಷ ಎಂ.ಎಂ.ಚರಣ್‌ ನಾಡಧ್ವಜಾರೋಹಣ ನೆರವೇರಿಸಲಿದ್ದಾರೆ.

ದ್ವಾರಗಳ ಉದ್ಘಾಟನೆ
ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ದ್ವಾರವನ್ನು ಪ. ಪಂ. ಸದಸ್ಯರಾದ ಕೆ.ಆರ್‌. ರೇಣುಕಾ ಜಗದೀಶ್‌,  ವರದರಾಜ್‌ ಶ್ರೇಷ್ಠಿ ದ್ವಾರವನ್ನು ಸ್ಥಾಯಿ ಸಮಿತಿ ಅಧ್ಯಕ್ಷ‌ ಎಚ್‌.ಎಂ. ಮಧುಸೂದನ್‌, ಚಿಕ್ಕಣ್ಣ ದ್ವಾರವನ್ನು ಪ.ಪಂ. ಸದಸ್ಯ ಡಿ. ತಿಮ್ಮಪ್ಪ, ಗುಡ್ಡೆಮನೆ ಅಪ್ಪಯ್ಯ ಗೌಡ ದ್ವಾರವನ್ನು ಪ.ಪಂ. ಸದಸ್ಯ ಕರಿಯಪ್ಪ, ವಿ.ಎಸ್‌. ರಾಮಕೃಷ್ಣ ಮಹಾದ್ವಾರವನ್ನು ಉಪಾಧ್ಯಕ್ಷ ಟಿ.ಆರ್‌.ಶರವಣ ಕುಮಾರ್‌ ಉದ್ಘಾಟಿಸಲಿದ್ದಾರೆ.

ಭವ್ಯ ಮೆರವಣಿಗೆ 
ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಕೊಪ್ಪ ಗೇಟ್‌ ಬಳಿಯ ಕಾವೇರಿ ಮಾತೆಯ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ದೊರೆಯಲಿದ್ದು, ಜಿಲ್ಲಾಧಿಕಾರಿ ಡಾ| ರಿಚರ್ಡ್‌ ವಿನ್ಸೆಂಟ್‌ ಡಿ’ಸೋಜ ಮೆರವಣಿಗೆ ಉದ್ಘಾಟಿಸಲಿದ್ದಾರೆ. ರೈತಭವನದವರೆಗೆ ನಡೆಯಲಿರುವ ಮೆರವಣಿಗೆಯಲ್ಲಿ ಮಂಗಳ ವಾದ್ಯ, ಪೂರ್ಣ ಕುಂಭ, ವೈವಿಧ್ಯಮಯ ಕಲಾ ತಂಡಗಳು, ಅಲಂಕೃತ ಸ್ತಬ್ಧ ಚಿತ್ರಗಳು, ವಿವಿಧ ಮಹಿಳಾ ಸಂಘಗಳು ಟಿಬೆೇಟಿಯನ್‌ ತಂಡಗಳು, ಕನ್ನಡ ಪರ ಸಂಘಟನೆಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಆಟೋ ಚಾಲಕರು, ವಾಹನ ಚಾಲಕರು, ವಿವಿಧ ಸಂಘ ಸ‌ಂಸ್ಥೆಗಳ ಪ್ರಮುಖರು ಪಾಲ್ಗೊಂಡು ಗಮನ ಸೆಳೆಯಲಿದ್ದಾರೆ. ಸಾವಿರ ಅಡಿ ಉದ್ದದ ಕನ್ನಡ ಧ್ವಜವನ್ನು ಸುಮಾರು 600 ವಿದ್ಯಾರ್ಥಿಗಳ ಸಹಕಾರದೊಂದಿಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುವುದು. ಐನೂರು ಮಂದಿ ಮಹಿಳೆಯರು ಪೂರ್ಣಕುಂಭದೊಂದಿಗೆ ಸಾಗಲಿದ್ದಾರೆ.ಪುಸ್ತಕ, ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಯನ್ನು ಕುಶಾಲನಗರ ಪಟ್ಟಣ ಪಂಚಾಯ್ತಿ ಸದಸ್ಯರಾದ ಎಚ್‌.ಡಿ.ಚಂದ್ರು, ಸುದ್ದಿಮನೆಯನ್ನು ಸೋಮವಾರಪೇಟೆ ತಾ.ಪಂ. ಅಧ್ಯಕ್ಷೆ ಪುಷ್ಪಾ ರಾಜೇಶ್‌, ಆರ್‌.ಗುಂಡೂರಾವ್‌ ಸಭಾಂಗಣವನ್ನು ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್‌, ಎದುರ್ಕಳ ಶಂಕರನಾರಾಯಣ ಭಟ್‌ ಪ್ರಧಾನ ವೇದಿಕೆಯನ್ನು ಜಿ.ಪಂ ಅಧ್ಯಕ್ಷರಾದ ಬಿ.ಎ. ಹರೀಶ್‌ ಉದ್ಘಾಟಿಸಲಿದ್ದಾರೆ.

ಸಮ್ಮೇಳನಾಧ್ಯಕ್ಷ ಎಸ್‌.ಸಿ. ರಾಜಶೇಖರ್‌ ಉಪಸ್ಥಿತಿಯಲ್ಲಿ ಸಮ್ಮೇಳನವನ್ನು ಜಿಲ್ಲಾ ಉಸ್ತು ವಾರಿ ಸಚಿವರಾದ ಎಂ.ಆರ್‌. ಸೀತಾರಾಮ್‌ ಉದ್ಘಾಟಿಸಲಿದ್ದು, ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಬಿ.ಎಸ್‌. ಲೋಕೇಶ್‌ ಸಾಗರ್‌ ಅವರು ಪ್ರಾಸ್ತಾವಿಕ ನುಡಿ, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್‌ ಆಶಯ ನುಡಿ ಹಾಗೂ ನಿಕಟಪೂರ್ವ ಸಮ್ಮೇಳನಾಧ್ಯಕ್ಷ‌ರ ನುಡಿಯನ್ನು 10ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಎನ್‌. ಮಹಾಬಲೇಶ್ವರ ಭಟ್‌ ಅವರು ಮಾಡಲಿದ್ದಾರೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ| ಮನು ಬಳಿಗಾರ್‌ ಲೇಖಕರ ಕೃತಿಯನ್ನು ಮತ್ತು ಸ್ಮರಣ ಸಂಚಿಕೆಯನ್ನು ಪಟ್ಟಣ ಪಂಚಾಯ್ತಿ ಅಧ್ಯಕ್ಷರಾದ ಎಂ.ಎಂ. ಚರಣ್‌ ಬಿಡುಗಡೆ ಮಾಡಲಿದ್ದಾರೆ.

ಮಧ್ಯಾಹ್ನ ಕಲಾವಿದರು ಹಾಗೂ ಹಿರಿಯ ಪತ್ರಕರ್ತರಾದ ಜಿ. ಚಿದ್ವಿಲಾಸ್‌ ಅವರ ನೇತೃತ್ವದಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ. ಕೊಡವ ಅರಿವೋಲೆ ನಿಘಂಟನ್ನು ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿಗಳಾದ ಪೊ›|ಕೆ. ಭೈರಪ್ಪ ಬಿಡುಗಡೆ ಮಾಡಲಿದ್ದಾರೆ. ಅನಂತರ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ರೇವತಿ ಪೂವಯ್ಯ ಅಧ್ಯಕ್ಷತೆಯಲ್ಲಿ  ಮಹಿಳಾ ಗೋಷ್ಠಿ, ಸಂಸದ ಪ್ರತಾಪ ಸಿಂಹ ಅಧ್ಯಕ್ಷತೆಯಲ್ಲಿ ಮಾಧ್ಯಮ ಗೋಷ್ಠಿ ನಡೆಯಲಿದ್ದು, ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮಾಜಿ ಸಚಿವರಾದ ಬಿ.ಎ.ಜೀವಿಜಯ  ಉದ್ಘಾಟಿಸಲಿದ್ದಾರೆ. ಜನವರಿ 11 ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ಮಕ್ಕಳಗೋಷ್ಠಿ ಬಾಲಮಂಗಳ ಪಾಕ್ಷಿಕದ ಸಂಪಾದಕರಾದ ನರೇಂದ್ರ ಪಾರೆಕಟ್ಟೆ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಭಾಷೆ ಮತ್ತು ಬದುಕು ವಿಚಾರದ ಕುರಿತು ನಡೆಯುವ ಗೋಷ್ಠಿಯ ಅಧ್ಯಕ್ಷತೆಯನ್ನು ಲೇಖಕ ಮತ್ತು ಕಲಾವಿದ ಬಂಜಗೆರೆ ಜಯಪ್ರಕಾಶ್‌ ಅಧ್ಯಕ್ಷತೆ ವಹಿಸಲಿದ್ದಾರೆ, ಮಧ್ಯಾಹ್ನ ಕನ್ನಡ ಗೀತ ಗಾಯನ ಕಾರ್ಯಕ್ರಮ ನಡೆಯಲಿದ್ದು, ಇದನ್ನು ಕಲಾವಿದ ಶಾಂತಳ್ಳಿ ಗಣೇಶ್‌ ಉದ್ಘಾಟಿಸಲಿದ್ದಾರೆ. ನಂತರ ನಡೆಯುವ ಶೈಕ್ಷಣಿಕ ಗೋಷ್ಠಿಯ ಅಧ್ಯಕ್ಷತೆಯನ್ನು ಕಸಾಪದ ಪೂರ್ವಾಧ್ಯಕ್ಷರಾದ ಮಾದಂಡ ಎಸ್‌. ಪೂವಯ್ಯ ವಹಿಸಲಿದ್ದಾರೆ. ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ‌ರಾದ ಡಾ| ನಲ್ಲೂರು ಪ್ರಸಾದ್‌ ಅಧ್ಯಕ್ಷ‌ತೆಯಲ್ಲಿ ಕವಿಗೋಷ್ಠಿ ನಡೆಯಲಿದ್ದು, ನಂತರ ನಡೆಯುವ ಬಹಿರಂಗ ಅಧಿವೇಶನದ ಅಧ್ಯಕ್ಷತೆಯನ್ನು ಕಸಾಪದ ಜಿಲ್ಲಾಧ್ಯಕ್ಷರಾದ ಬಿ.ಎಸ್‌. ಲೋಕೇಶ್‌ ಸಾಗರ್‌ ವಹಿಸಲಿದ್ದಾರೆ.

ಸೋಮವಾರಪೇಟೆಯ ವಿರಕ್ತ ಮಠ‌ದ ಶ್ರೀ ವಿಶ್ವೇಶ್ವರ ಮಹಾಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯುವ ಸಮ್ಮಾನ ಹಾಗೂ ಸಮಾರೋಪ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷ ಎಸ್‌.ಸಿ. ರಾಜಶೇಖರ್‌ ಅವರನ್ನು ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್‌ ಸಮ್ಮಾನಿಸಲಿದ್ದಾರೆ. ಹಿರಿಯ ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್‌ ಸಮಾರೋಪ ಭಾಷಣ ಮಾಡಲಿದ್ದಾರೆ. ಸಮ್ಮೇಳನಾಧ್ಯಕ್ಷರ ನುಡಿಯ ನಂತರ ವಿವಿಧ ಕ್ಷೇತ್ರಗಳ ಸಾಧಕರನ್ನು ಸಮ್ಮಾನಿಸಲಾಗುವುದು. ಸಂಜೆ 6.30ಕ್ಕೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿದ್ಯಾ ಇಲಾಖಾ ನೌಕರರ ಸಂಘದ ಅಧ್ಯಕ್ಷರಾದ ಕೆ.ಕೆ. ಮಂಜುನಾಥ್‌ ಕುಮಾರ್‌ ಉದ್ಘಾಟಿಸಲಿದ್ದಾರೆ.

ಎರಡು ದಿನಗಳ ಕಾಲ ಕುಶಾಲನಗರದಲ್ಲಿ ನಡೆಯುತ್ತಿರುವ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸರ್ವರೂ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕಸಾಪ ಅಧ್ಯಕ್ಷ ಲೋಕೇಶ್‌ ಸಾಗರ್‌ ಇದೇ ಸಂದರ್ಭ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಗೌರವ ಕಾರ್ಯದರ್ಶಿ ಕೆ.ಎಸ್‌. ರಮೇಶ್‌, ಖಜಾಂಚಿ ಮುರುಳೀಧರ್‌, ಮೆರವಣಿಗೆ ಸಮಿತಿ ಸದಸ್ಯ ಸುನಿಲ್‌ ಕುಮಾರ್‌, ಸದಸ್ಯರುಗಳಾದ ನಂಜುಂಡಸ್ವಾಮಿ ಹಾಗೂ ಅಶ್ವತ್ಥ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ

ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

Kumbla: ಬುರ್ಖಾಧಾರಿ ಯುವಕ ಪೊಲೀಸ್‌ ವಶಕ್ಕೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ

ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

E-Khata ಇದ್ದರಷ್ಟೇ ಆಸ್ತಿ ನೋಂದಣಿ: ಸಚಿವ ಕೃಷ್ಣ ಬೈರೇಗೌಡ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.