Madikeri ಕತ್ತಿಯಿಂದ ಹಲ್ಲೆ: 10 ವರ್ಷ ಕಠಿನ ಶಿಕ್ಷೆ
Team Udayavani, Mar 6, 2024, 1:10 AM IST
ಮಡಿಕೇರಿ: ಅರಣ್ಯ ರಕ್ಷಕರೋರ್ವರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿನ ಶಿಕ್ಷೆ ಮತ್ತು 15,500 ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಗಾಳಿಬೀಡು ಕಾನೆಕಂಡಿ ನಿವಾಸಿ ತಿಮ್ಮಯ್ಯ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ.
ಪ್ರಕರಣ ಹಿನ್ನೆಲೆ
2022ರ ಮೇ 11ರಂದು ಗಾಳಿಬೀಡು ಕಾಲೂರು ರಸ್ತೆಯಲ್ಲಿ ಅರಣ್ಯ ರಕ್ಷಕ ಅಪ್ಪಣ್ಣ ರೈ ಅವರು ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಅವರನ್ನು ದಾರಿ ಮಧ್ಯೆ ತಡೆದ ತಿಮ್ಮಯ್ಯ, ಗಾಳಿಬೀಡು ಪಂಚಾಯಿತಿಗೆ ಕಸ ವಿಲೇವಾರಿ ಮಾಡಲು ತಮ್ಮ ಮನೆಯ ಪಕ್ಕದ ಜಾಗವನ್ನು ತೋರಿಸಿಕೊಟ್ಟಿದ್ದೀಯ ಎಂದು ಪ್ರಶ್ನಿಸಿ ಕತ್ತಿಯಿಂದ ಕಡಿಯಲು ಮುಂದಾಗಿದ್ದ. ಈ ವೇಳೆ ಅಪ್ಪಣ್ಣ ರೈ ಅವರು ಎಡಕೈಯಿಂದ ತಡೆದಾಗ ಅವರ ಕೈ ಬೆರಳುಗಳು ತುಂಡಾಗಿದ್ದವು. ತಿಮ್ಮ ಯ್ಯ ಮತ್ತೂಮ್ಮೆ ಹಲ್ಲೆ ಮಾಡಿದಾಗ ಅಪ್ಪಣ್ಣ ರೈ ತಮ್ಮ ಬಲಕೈಯಿಂದ ತಡೆಯಲು ಪ್ರಯತ್ನಿಸಿದಾಗ ಬಲ ಕೈಗೆ ಕೂಡ ಗಂಭೀರ ಗಾಯವಾಗಿತ್ತು ಎಂದು ಆರೋಪಿಸಲಾಗಿತ್ತು.
ಈ ಕುರಿತು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಠಾಣಾಧಿಕಾರಿ ವಾಣಿಶ್ರೀ ಅವರು ನ್ಯಾಯಾಲಯಕ್ಕೆ ದೋಷಾ ರೋಪಣ ಪತ್ರ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾ ಧೀಶರಾದ ಎಚ್. ಸಿ. ಶ್ಯಾಮ್ ಪ್ರಸಾದ್ ಅವರು ಆರೋಪಿಗೆ 10 ವರ್ಷ ಕಠಿನ ಶಿಕ್ಷೆ ಮತ್ತು 15,500 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಕೆ.ಜೆ. ಅಶ್ವಿನಿ ವಾದ ಮಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.