ಸೂಕ್ಷ್ಮಪರಿಸರ ತಾಣದ ಹೆಸರಿನಲ್ಲಿ ಸಾರ್ವಜನಿಕರಿಗೆ ತೊಂದರೆ
Team Udayavani, Jul 3, 2018, 6:05 AM IST
ಮಡಿಕೇರಿ: ವಸತಿ, ವಿದ್ಯುತ್ ಸಂಪರ್ಕ, ಕುಡಿಯುವ ನೀರು, ರಸ್ತೆ ಮತ್ತಿತರ ಮೂಲ ಸೌಲಭ್ಯವನ್ನು ಪ್ರತಿ ಗ್ರಾಮ ಮತ್ತು ಕುಟುಂಬಕ್ಕೂ ಕಲ್ಪಿಸಬೇಕಾಗಿರುವುದು ಅಧಿಕಾರಿಗಳ ಕರ್ತವ್ಯ. ಆದರೆ ಸೂಕ್ಷ್ಮ ಪರಿಸರ ಹೆಸರಿನಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದು ಸರಿ ಯಾದ ಕ್ರಮವಲ್ಲವೆಂದು ಶಾಸಕ ಕೆ.ಜಿ.ಬೋಪಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನು ಮುಂದೆ ಇಂತಹ ದೂರುಗಳು ಕೇಳಿ ಬಂದಲ್ಲಿ ಸಂಬಂಧಪಟ್ಟ ಗ್ರಾ.ಪಂ ಪಿಡಿಒ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಶಾಸಕರು ಎಚ್ಚರಿಕೆ ನೀಡಿದ್ದಾರೆ. ನಗರದ ಎಸ್.ಜೆ.ಎಸ್.ವೈ ಸಭಾಂಗಣದಲ್ಲಿ ನಡೆದ ತಾ.ಪಂ.ತ್ತೈಮಾಸಿಕ ಕೆ.ಡಿ.ಪಿ. ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮನೆ ನಿರ್ಮಿಸಿಕೊಳ್ಳಬಾರದೆಂದು ಎಲ್ಲಿಯೂ ಹೇಳಿಲ್ಲ. ಮೂಲಸೌಲಭ್ಯ ಕಲ್ಪಿಸಲು ಯಾವುದೇ ಆಕ್ಷೇಪಣೆಗಳು ಸಹ ಇಲ್ಲ. ಸೂಕ್ಷ್ಮ ಪರಿಸರ ತಾಣ ಸಂಬಂಧದ ಸಮಿತಿಯಲ್ಲಿ ನಾವುಗಳು ಸಹ ಇದ್ದು, ಇನ್ನೂ ಅನುಷ್ಠಾನಕ್ಕೆ ಬರದಿದ್ದರೂ ಮನೆ ನಿರ್ಮಿಸಲು ಎನ್‌ಒಸಿ ನೀಡಲು ಪಿಡಿಒಗಳು ಹಿಂದೆ ಸರಿಯುತ್ತಿರುವುದು ಯಾಕೆ ಎಂದು ಶಾಸಕರು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು.
ಮಡಿಕೇರಿ ನಗರ ಪ್ರದೇಶದಲ್ಲಿ ಒಳಚರಂಡಿ ನಿರ್ಮಿಸಿ ಇಡೀ ಮಡಿಕೇರಿ ಜನತೆ ಶಾಪ ಇಡುವಂತಾಗಿದೆ. ಇನ್ನಾದರೂ ಸರಿಪಡಿಸುವ ಕಾರ್ಯವಾಗಲಿ ಎಂದು ಒಳಚರಂಡಿ ಮಂಡಳಿ ಎಂಜಿನಿಯರ್‌ಗೆ ತಾಕೀತು ಮಾಡಿದರು. ಕುಂಡಾಮೇಸ್ತ್ರಿ ಯೋಜನೆಯಡಿ ಇನ್ನೂ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಿಲ್ಲ ಎಂದು ಬೋಪಯ್ಯ ಅಸಮಾಧಾನ ವ್ಯಕ್ತಪಡಿಸಿದರು. ಸರಕಾರಿ ಪೈಸಾರಿ ಜಾಗವನ್ನು ಗುರುತಿಸಿ ನಿವೇಶನ ರಹಿತರಿಗೆ ನಿವೇಶನ ನೀಡಬೇಕು.ಆಶ್ರಯ, ಬಸವ, ಅಂಬೇಡ್ಕರ್ ವಸತಿ ಯೋಜನೆಯಡಿ ವಸತಿ ಕಲ್ಪಿ ಸ ಬೇಕು ಎಂದು ಕೆ.ಜಿ.ಬೋಪಯ್ಯ ಹೇಳಿದರು.
ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆ ಬದಿ ಕಾಡು ಕಡಿಯುವುದು, ರಸ್ತೆ ಅಗಲೀಕರಣ ಮಾಡುವುದು, ಚರಂಡಿಯಲ್ಲಿ ನೀರು ಹೋಗುವಂತೆ ಮಾಡುವುದು ಮತ್ತಿತರ ಕಾರ್ಯವನ್ನು ನಿರ್ವಹಿಸುವಂತೆ ಲೋಕೋಪಯೋಗಿ ಎಂಜಿನಿಯರ್ ಅವರಿಗೆ ಕೆ.ಜಿ.ಬೋಪಯ್ಯ ಸೂಚನೆ ನೀಡಿದರು. ಈ ಸಂಬಂಧ ಮಾತನಾಡಿದ ತಾ.ಪಂ.ಸದಸ್ಯ ರವೀಂದ್ರ ಅವರು ಅರೆಕಾಡು, ಹಾಕತ್ತೂರು ಮಾರ್ಗದ ರಸ್ತೆಯಲ್ಲಿ ಅಪಘಾತಗಳು ಹೆಚ್ಚು ಸಂಭವಿಸುತ್ತಿದೆ. ಆದ್ದರಿಂದ ರಸೆವಿಸ್ತ ರಣೆ ಮಾಡಬೇಕು, ಕಾಡು ಕಡಿಯಬೇಕಿದೆ ಎಂದರು. ಮಾತೃಪೂರ್ಣ ಯೋಜನೆ ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು ಎಂದರು.
ಭಾಗ್ಯಲಕ್ಷ್ಮಿ ಯೋಜನೆಯಡಿ ಬಾಕಿ ಇರುವ ಬಾಂಡ್‌ಗಳನ್ನು ವಿತರಣೆ ಮಾಡುವಂತೆ ಕೆ.ಜಿ.ಬೋಪಯ್ಯ ಅವರು ಸಲಹೆ ಮಾಡಿದರು. ಜೂನ್ ಮೊದಲ ಮತ್ತು ಎರಡನೇ ವಾರದಲ್ಲಿ ಸುರಿದ ಮಳೆಗೆ ವಾಸದ ಮನೆ, ಶಾಲಾ ಕಟ್ಟಡಗಳು, ಅಂಗನವಾಡಿ ಕಟ್ಟಡಗಳ ಹಾನಿ ಬಗ್ಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ತಾಲೂಕು ಆಡಳಿತಕ್ಕೆ ವರದಿ ನೀಡುವಂತೆ ಕೆ.ಜಿ.ಬೋಪಯ್ಯ ತಿಳಿಸಿದರು.
ಮಾಹಿತಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಅರೆಕಾಡು, ಕಾಂಡನಕೊಲ್ಲಿ, ಹೊದವಾಡ ಶಾಲೆಗಳು ಮಳೆಯಿಂದ ಹಾನಿಯಾಗಿದ್ದು, ವರದಿ ನೀಡಲಾಗಿದೆ. ಮಡಿಕೇರಿ ತಾಲ್ಲೂಕಿನ ಹಲವು ಕಡೆಗಳಲ್ಲಿ ಶಾಲಾ ವ್ಯಾಪ್ತಿಯ ಜಾಗವನ್ನು ಒತ್ತುವರಿ ಮಾಡಿದ್ದು, ಅತಿಕ್ರಮಣ ಮಾಡಿರುವುದನ್ನು ತೆರವುಗೊಳಿಸಬೇಕಿದೆ ಎಂದು ಜಿ.ಪಂ.ಸದಸ್ಯೆ ಕವಿತಾ ಪ್ರಭಾಕರ್ ಹೇಳಿದರು. ಸೌಭಾಗ್ಯ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಳ್ಳಲು ಅವಕಾಶವಿದ್ದು, ಒಂದು ವಾರದಲ್ಲಿ ಅರ್ಜಿ ಸಲ್ಲಿಸುವಂತಾಗಬೇಕು ಎಂದು ಸೆಸ್ಕ್ ಎಇಇ ಅವರು ಮನವಿ ಮಾಡಿದರು. ಬಡವರು, ನಿರ್ಗತಿಕರು, ಕೂಲಿ ಕಾರ್ಮಿಕರಿಗೂ ಸಹ 1 ಲಕ್ಷ ರೂ. ವಾರ್ಷಿಕ ಆದಾಯವನ್ನು ನಮೂದಿಸುತ್ತಿದ್ದಾರೆ ಎಂದು ಗಾಳಿಬೀಡು ಗ್ರಾಮ ಪಂಚಾಯತ್ ಅಧ್ಯಕ್ಷ ಸುಭಾಷ್ ಸೋಮಯ್ಯ ಅವರು ದೂರಿದರು. ಇದಕ್ಕೆ ಸದಸ್ಯರಾದ ಸರಸ್ವತಿ ಅವರು ಧ್ವನಿಗೂಡಿಸಿದರು. ಕಿಗ್ಗಾಲು ಶಾಲೆಯಲ್ಲಿ ಟ್ರಾನ್ಸ್‌ಫಾರಂ ಇದ್ದು, ಇದನ್ನು ಸ್ಥಳಾಂತರಿಸಬೇಕು ಎಂದು ಪಿಡಿಒ ವೇಣುಗೋಪಾಲ್ ಮನವಿ ಮಾಡಿದರು. ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಜಿ.ಪಂ. ಅಧ್ಯಕ್ಷ ಹರೀಶ್ ಉಪಸ್ಥಿತರಿದ್ದರು.
ಗ್ರಾ.ಪಂ.ಮಟ್ಟದ ಮಾಹಿತಿಗೆ ಸೂಚನೆ
ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನು ಗಾರಿಕೆ ಇಲಾಖೆ ಗಳು ತಮ್ಮ ಇಲಾಖಾ ವ್ಯಾಪ್ತಿಯ ಕಾರ್ಯಕ್ರಮಗಳ ಬಗ್ಗೆ ಗ್ರಾ.ಪಂ.ಮಟ್ಟದಲ್ಲಿ ಮಾಹಿತಿ ನೀಡುವಂತೆ ಕೆ.ಜಿ.ಬೋಪಯ್ಯ ತಿಳಿಸಿದರು. ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾಕರ ಕಲ್ಯಾಣ ಇಲಾಖಾ ವ್ಯಾಪ್ತಿಯ ಹಾಸ್ಟೆಲ್‌ಗಳ ಸ್ವಂತ ಕಟ್ಟಡಕ್ಕೆ ನಿವೇಶನ. ಆಶ್ರಮ ಶಾಲೆ ಮತ್ತಿತರ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಹಾಸ್ಟೆಲ್‌ಗಳಿಗೆ ಸ್ವಂತ ನಿವೇಶನ ಒದಗಿಸುವಂತೆ ತಹಶೀಲ್ದಾರರಿಗೆ ನಿರ್ದೇಶ ನೀಡಿದರು.
ರಾತ್ರಿ ವೇಳೆ ಗಸ್ತು ತಿರುಗಬೇಕು
ಶಾಲಾ-ಕಾಲೇಜು ಸುತ್ತಮುತ್ತ ಗಾಂಜಾ ಮಾರಾಟ ಬಗ್ಗೆ ವರದಿಗಳು ಕೇಳಿ ಬರುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು.ಪೋಲೀಸರು ರಾತ್ರಿ ವೇಳೆ ಗಸ್ತು ತಿರುಗಬೇಕು ಎಂದು ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್ ಹೇಳಿದರು. ತಾಲೂಕು ಪಂಚಾಯ ತ್‌ಗೆ ಬಿಡುಗಡೆಯಾಗುವ ಅನುದಾನವನ್ನು ಸಕಾಲದಲ್ಲಿ ಖರ್ಚು ಮಾಡಬೇಕು. ಮಳೆಗಾಲದ ಅವಧಿಯಲ್ಲಿ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಮತ್ತಿತರ ಕಾರ್ಯ ಕ್ರಮ ಅನುಷ್ಠಾನದಲ್ಲಿ ಚುರುಕು ಪಡೆಯಬೇಕು ಎಂದು ಅವರು ಸಲಹೆ ಮಾಡಿದರು.
ವಿಳಂಬ ಸಲ್ಲದು
ಸರಕಾರದ ಕಾರ್ಯಕ್ರಮ ಅನುಷ್ಠಾನದಲ್ಲಿ ಇಲಾಖೆ ಅಧಿಕಾರಿಗಳು ವಿಳಂಬ ಮಾಡಬಾರದು. ಆಯಾಯ ಕಾಲದಲ್ಲಿ ಅನುಮೋದನೆ ಪಡೆದು ಕಾರ್ಯಕ್ರಮಗಳನ್ನು ಅನು ಷ್ಠಾನಗೊಳಿಸಬೇಕು
- ಶೋಭಾ ತೆಕ್ಕಡೆ ತಾ.ಪಂ.ಅಧ್ಯಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod Crime News: ರಸ್ತೆಯಲ್ಲಿ ಬಿಯರ್ ಬಾಟ್ಲಿ ಒಡೆದ ಮೂವರ ಬಂಧನ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.