ಮಡಿಕೇರಿ:ಕೊಡಗು ವಿಕಸನ ಲಾಂಛನ ಬಿಡುಗಡೆ
Team Udayavani, Jan 8, 2020, 8:32 PM IST
ಮಡಿಕೇರಿ: ಶೈಕ್ಷಣಿಕ ಚಟುವಟಿಕೆಗಳ ಆಯೋ ಜನೆ ಉದ್ದೇಶದಿಂದ ಆರಂಭವಾಗಿರುವ ಕೊಡಗು ವಿಕಸನ ಸಂಸ್ಥೆಯ ಲಾಂಛನವನ್ನು ಬಿಡುಗಡೆಗೊಳಿಸಲಾಯಿತು.
ಬೆಂಗಳೂರಿನ ರಾಜಾಜಿನಗರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಲೋಗೋ ಬಿಡುಗಡೆ ಮಾಡಿದರು. ತಮ್ಮ ಕ್ಷೇತ್ರದಲ್ಲಿ ಕೂಡಾ ವಿಕಸನ ಸಂಸ್ಥೆ ಹಲವು ವರ್ಷದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಗೆ ಕೊಡುಗೆ ನೀಡುತ್ತಿದೆ. ಅದರಲ್ಲೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಶಾರೀರಿಕ ಹಾಗೂ ಬೌದ್ಧಿಕ ವಿಕಸನಕ್ಕೆ ವಿಶೇಷವಾಗಿ ನೆರವಾಗುತ್ತಿದೆ. ಈ ಕಾರ್ಯದಲ್ಲಿ ಉತ್ತಮ ಯಶಸ್ಸನ್ನೂ ಕಾಣುತ್ತಿದ್ದೇವೆ. ಅದೇ ಸದುದ್ದೇಶದಿಂದ ಕೊಡಗಿನಲ್ಲಿ ಸಂಸ್ಥೆ ಹುಟ್ಟು ಹಾಕಿರುವುದು ಸ್ವಾಗತಾರ್ಹ ನಡೆ ಎಂದರು.
ಶಾಲಾ ವಿದ್ಯಾರ್ಥಿಗಳು ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸುವಂತೆ ಮಾಡಬೇಕು. ಪರೀಕ್ಷೆ ರಣಾಂಗಣವಲ್ಲ, ಅದೊಂದು ಕ್ರೀಡಾಂಗಣದಂತೆ. ಲವಲವಿಕೆ, ಉತ್ಸಾಹದಿಂದ ಪರೀಕ್ಷೆಯಲ್ಲಿ ಪಾಲ್ಗೊಳ್ಳಬೇಕೆಂಬುದು ನಮ್ಮ ಅಭಿಲಾಷೆ. ಆ ದಿಸೆಯಲ್ಲಿ ಕೊಡಗು ವಿಕಸನ ಕೂಡಾ ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದೆ. ರಾಜಾಜಿನಗರದ ವಿಕಸನ ಸಂಸ್ಥೆಯಿಂದ ಕೂಡಾ ಅಗತ್ಯ ನೆರವಾಗುವುದಾಗಿ ಸಚಿವರು ತಿಳಿಸಿದರು.
ಮಡಿಕೇರಿಯ ರೋಹಿತ್ ಕಲ್ಲೇಗ ಲೋಗೋ ವಿನ್ಯಾಸ ಮಾಡಿದ್ದಾರೆ. ಬಿಡುಗಡೆ ಸಂದರ್ಭ ಕೊಡಗು ವಿಕಸನ ಬಳಗದ ಚೈಯ್ಯಂಡ ಸತ್ಯ ಗಣಪತಿ, ಅಜ್ಜಮಾಡ ರಮೇಶ್ ಕುಟ್ಟಪ್ಪ, ಕಿಶೋರ್ ರೈ ಕತ್ತಲೆಕಾಡು, ಶೇಖರ್, ರಾಜಾಜಿನಗರ ವಿಕಸನ ಪದಾಧಿಕಾರಿಗಳಾದ ಯುವ ಮೋರ್ಚಾ ಲಿಂಗರಾಜು, ಸುನೀಲ್ ಶಿವಾನಂದ ಹಾಜರಿದ್ದರು.
ಜ.11ಕ್ಕೆ ಮೊದಲ ಕಾರ್ಯಕ್ರಮ:- ಕೊಡಗು ವಿಕಸನ ಸಂಸ್ಥೆಯ ಮೊದಲ ಕಾರ್ಯಕ್ರಮ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜನವರಿ 11 ರಂದು ನಡೆಯಲಿದೆ. ನಗರದ ಸಂತ ಜೋಸೆಫರ ವಿದ್ಯಾಸಂಸ್ಥೆ ಸಭಾಂಗಣ ಮತ್ತು ನಾಪೋಕ್ಲುವಿನಲ್ಲಿ ಈ ಎರಡು ಕಡೆಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಅಂದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ಅಂತರಾಷ್ಟ್ರೀಯ ಅಥ್ಲೀಟ್ ಹಾಗೂ ವ್ಯಕ್ತಿತ್ವ ವಿಕಸನ ಮಾರ್ಗದರ್ಶಕ ತೀತಮಾಡ ಅರ್ಜುನ್ ದೇವಯ್ಯ ಉಪನ್ಯಾಸ ಹಾಗೂ ಸಂವಾದ ನಡೆಸಲಿದ್ದಾರೆ. ನಂತರದಲ್ಲಿ ಪ್ರತಿ ಫೆಬ್ರವರಿ ಅಂತ್ಯದವರೆಗೆ ಪ್ರತಿ ಶನಿವಾರ ಬೆಂಗಳೂರಿನ ವಿಷಯ ತಜ್ಞರಿಂದ ವಿಶೇಷ ತರಗತಿ ಹಮ್ಮಿಕೊಳ್ಳಲಾಗಿದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕಾರ್ಯಕ್ರಮದ ಸದ್ಬಳಕೆ ಮಾಡಿಕೊಳ್ಳುವಂತೆ ಪ್ರಕಟನೆತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.