ಕೊಡವ ಮಕ್ಕಡ ಕೂಟಕ್ಕೆ 4ನೇ ವರ್ಷದ ಸಂಭ್ರಮ


Team Udayavani, Feb 21, 2017, 4:15 PM IST

Z-KODAVA-KUUTA-2.jpg

ಮಡಿಕೇರಿ: ಬದಲಾಗುತ್ತಿರುವ ಸಾಮಾಜಿಕ ಪರಿಸ್ಥಿತಿಗಳ ನಡುವೆ ಉನ್ನತ ಶಿಕ್ಷಣವನ್ನು ಹೊಂದಿ ಕೊಳ್ಳುವ ಸಲುವಾಗಿ ಹೊರ ಜಿಲ್ಲೆಗಳಿಗೆ ತೆರಳುವ ಕೊಡವ ಸಮುದಾಯ ಈ ನೆಲದ ಶ್ರೀಮಂತ ಸಂಸ್ಕೃತಿಯನ್ನು ಮರೆಯುತ್ತಿದೆ ಎಂದು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರಾದ ಕೋದಂಡ ಎಸ್‌. ದೇವಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ.

ನಗರದ ಬಾಲಭವನದಲ್ಲಿ ನಡೆದ ಕೊಡವ ಮಕ್ಕಡ ಕೂಟ ಸಂಘಟನೆಯ ನಾಲ್ಕನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೊಡವ ಸಮುದಾಯದ ಸಂಸ್ಕೃತಿಯ ಬೆಳವಣಿಗೆ ಎಂದರೆ ಅದು ಕೇವಲ ನಡೆ ನುಡಿ, ಊಟೋಪಚಾ ರಕ್ಕಷ್ಟೇ ಅಲ್ಲ, ಸಾಹಿತ್ಯ ಸಂಸ್ಕೃತಿ ಹೀಗೆ ಎಲ್ಲಾ ಕ್ಷೇತ್ರ ಗಳಲ್ಲು ಬೆಳವಣಿಗೆಯನ್ನು ಸಾಧಿಸಬೇಕೆಂದರು. ಪ್ರತಿ ಯೊಬ್ಬ ಕೊಡವರು ನಮ್ಮ ಸಂಸ್ಕೃತಿಯ ಸಂರಕ್ಷಣೆೆಗೆ ಮುಂದಾಗಬೆೇಕೆಂದು ಕರೆ ನೀಡಿದರು.

ಕೊಡವ ಸಂಸ್ಕೃತಿ, ಆಚಾರ ವಿಚಾರಗಳನ್ನು ಸಂರಕ್ಷಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರಸ್ತುತ ಸಂಕಷ್ಟ ಎದುರಾಗಿದೆ. ಕೊಡವ ಸಂಪ್ರದಾಯದ ವಿವಾಹ ಸಮಾರಂಭದಲ್ಲಿ ಗಂಗಾ ಪೂಜೆಗೆ ಪ್ರಧಾನ ಆದ್ಯತೆ ನೀಡಲಾಗುತ್ತಿದೆ. ಕಾರಣ, ನೀರು ತರುವ ವಧುವನ್ನು ತಡೆದು ಗಂಟೆಗಟ್ಟಲೆ ಕುಣಿಯುವ ಕಾರಣಕ್ಕಾಗಿ. ಅದೂ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳುವ ಇತರೆ ಸಮೂಹದ ಸ್ನೇಹಿತರ ಮನೋರಂಜನೆಯ ನೃತ್ಯಕ್ಕಾಗಿ ಎಂದು ಅತೀವ ಬೇಸರ ವ್ಯಕ್ತಪಡಿಸಿದರು. ಇಂದು ಸಂಸ್ಕೃತಿ ಸಂಪ್ರದಾಯದ ಪಾವಿತ್ರ್ಯ ಉಳಿದಿಲ್ಲವೆಂದರು.

ಕೊಡವ ಜನಾಂಗ ಬಾಂಧವರು ಎಂದಿಗೂ ಇತರ ಸಮಾಜ ಬಾಂಧವರ ಬಗ್ಗೆ ಮಾತನಾಡಿಲ್ಲ ಮತ್ತು ಮಾತನಾಡುವ ಅವಶ್ಯಕತೆಯೂ ಇಲ್ಲ. ಸೌಹಾರ್ದ ತೆಯಿಂದ ಬಾಳಬೇಕೆನ್ನುವುದೆ ನಮ್ಮ ಚಿಂತನೆ. ಆದರೆ, ಇದನ್ನೆ ನಮ್ಮ ದೌರ್ಬಲ್ಯವೆಂದು ಯಾರು ಭಾವಿಸುವ ಅಗತ್ಯವಿಲ್ಲವೆಂದು ಸ್ಪಷ್ಟಪಡಿಸಿ, ಕೊಡವ ಸಂಸ್ಕೃತಿಯ ಸಂರಕ್ಷಣೆಗೆ ಕೊಡವ ಮಕ್ಕಡ ಕೂಟದ ಯಾವುದೇ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಕೆ.ಎಸ್‌. ದೇವಯ್ಯ ತಿಳಿಸಿದರು.
    ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರು ಹಾಗೂ ಜಾನಪದ ತಜ್ಞರಾದ ಬಾಚರಣಿಯಂಡ ಅಪ್ಪಣ್ಣ ಅವರು ಮಾತನಾಡಿ ಪಂದ್ಯಂಡ ಬೆಳ್ಯಪ್ಪ ಅವರು ಸ್ವಾತಂತ್ರ್ಯ ಪೂರ್ವದಲ್ಲಿ ಗಾಂಧಿ ತಣ್ತೀಗಳಿಗೆ ಮಾರು ಹೋಗಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ಬೆಳವಣಿಗೆಗೆ ತಮ್ಮ ಅಪೂರ್ವ ಕಾಣಿಕೆ ನೀಡಿದ ಪಂದ್ಯಂಡ ಬೆಳ್ಯಪ್ಪ ಅವರ ನಿಸ್ವಾರ್ಥ ಸೇವೆಯ ಹಿನ್ನೆಲೆಯಲ್ಲಿ 1919 ರಿಂದ 1952 ನಡುವಿನ ಕೊಡಗಿನ ಅವಧಿ ಪಂದ್ಯಂಡ ಬೆಳ್ಯಪ್ಪ ಯುಗವೆಂದು ಬಣ್ಣಿಸಿದರು.

ಕೊಡಗಿಗೆ 1934ರಲ್ಲಿ ಮಹಾತ್ಮಾ ಗಾಂಧೀಜಿ ಯವರನ್ನು ಕರೆತರುವಲ್ಲಿ, ಆನಂತರದ ದಿನಗಳಲ್ಲಿ ಆಚಾರ್ಯ ಕೃಪಲಾನಿ, ಬಾಬು ರಾಜೇಂದ್ರ ಪ್ರಸಾದ್‌, ಮಿರ್ಜಾ ಇಸ್ಮಾಯಿಲ್‌ , ಜಯಪ್ರಕಾಶ್‌ ನಾರಾಯಣ್‌ ಮೊದಲಾದ ಮಹಾನ್‌ ವ್ಯಕ್ತಿಗಳನ್ನು ಕರೆತರುವಲ್ಲಿ ಪಂದ್ಯಂಡ ಬೆಳ್ಯಪ್ಪ ಅವರ ಪ್ರಯತ್ನ ಮರೆಯಲಾಗದ್ದು, ಹಾಗೆಯೇ ಮಡಿಕೆೇರಿಯಲ್ಲಿ ಕಾಲೆೇಜು ಸ್ಥಾಪನೆ ಯಾಗಲು ಅವರು ಕಾರಣೀಭೂತರಾಗಿದ್ದರೆಂದು ಅವರ ಸಾಧನೆಗಳನ್ನು ಸ್ಮರಿಸಿದರು. 

ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜ್ಜಿರ ಅಯ್ಯಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘಟನೆಯ ಮೂಲಕ ಕೊಡವ ಸಂಸ್ಕೃತಿಯ ಬೆಳವಣಿಗೆಗೆ ಹಾಗೂ ಮಕ್ಕಳಿಗೆ ಪೋ›ತ್ಸಾಹ ನೀಡುವ ಕಾರ್ಯವನ್ನು ನಿರಂತರವಾಗಿ ಮಾಡಿಕೊಂಡು ಬರಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಕೊಡವ ವಿರೋಧಿ ಧೋರಣೆಗಳು ಸಮಾಜದಲ್ಲಿ ಕಂಡು ಬರುತ್ತಿದೆ ಎಂದು ಆರೋಪಿಸಿದರು. ಪ್ರಸ್ತುತ ಸಾಕಷ್ಟು ವ್ಯಾಪಾರ ವಹಿವಾಟುಗಳಲ್ಲಿ ಕೊಡವರ ಪೀಚೆಕತ್ತಿ, ವಡಿಕತ್ತಿಯನ್ನು ಚಿಹ್ನೆಯನ್ನಾಗಿ ಬಳಸುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.

“ಚಾಯಿ’ ಪುಸ್ತಕ ಬಿಡುಗಡೆ
ಇದೇ ಸಂದರ್ಭ ಉಳುವಂಗಂಡ ಕಾವೇರಿ ಉದಯ ಅವರು ಬರೆದ ಪುಸ್ತಕ ಚಾಯಿ ಕೃತಿಯನ್ನು ಅತಿಥಿ ಗಣ್ಯರು ಅನಾವರಣಗೊಳಿಸಿದರು.

ಕೂಟದ ಪ್ರಮುಖರಾದ ಪುತ್ತೇರಿರ ಕರುಣ್‌ ಕಾಳಯ್ಯ ಕೂಟ ನಡೆದು ಬಂದ ಹಾದಿಯ ಬಗ್ಗೆ ಮಾಹಿತಿ ನೀಡಿದರು. 
ವೇದಿಕೆಯಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ಎಸ್‌. ತಮ್ಮಯ್ಯ, ಪಂದ್ಯಂಡ ಬೆಳ್ಯಪ್ಪ ಅವರ ಮಗ ಪಂದ್ಯಂಡ ವಿಜು ಬೆಳ್ಯಪ್ಪ, ಕನ್ನಂಡ ನಿರ್ಮಲ ಸೋಮಯ್ಯ, ಕೊಂಗೇಟಿರ ಅಚ್ಚಪ್ಪ, ಅಲ್ಲಾರಂಡ ವಿಠಲ ನಂಜಪ್ಪ ಉಪಸ್ಥಿತರಿದ್ದರು. 

ಇದಕ್ಕೂ ಮೊದಲು ಕೊಡವ ಮಕ್ಕಡ ಕೂಟದಿಂದ ನಗರದ ನಗರಸಭೆಯ ಹಿಂಭಾಗದ ರಸ್ತೆಗೆ ಕೊಡಗಿನ ಗಾಂಧಿ ಎಂದೇ ಖ್ಯಾತನಾಮರಾಗಿರುವ ಪಂದ್ಯಂಡ ಬೆಳ್ಯಪ್ಪ ಅವರ ಹೆಸರನ್ನಿರಿಸಿ ಫ‌ಲಕವನ್ನು ಅನಾವರಣಗೊಳಿಸಲಾಯಿತು.

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Anjani, the female tiger, passed away at Tyavarekoppa sanctuary

Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.