ಮಳೆಗಾಗಿ ಮಳೆ ಮಲ್ಲೇಶ್ವರ ಬೆಟ್ಟಕ್ಕೆ ಪಾದಯಾತ್ರೆ
Team Udayavani, Apr 12, 2017, 5:20 PM IST
ಶನಿವಾರಸಂತೆ: ಸೋಮವಾರಪೇಟೆ ತಾಲೂಕಿನ ಮಾಲಂಬಿ ಗ್ರಾಮದಲ್ಲಿರುವ ಮಳೆ ಮಲ್ಲೇಶ್ವರ ಬೆಟ್ಟವನ್ನೇರಿದರೆ ಮಳೆಯಾಗುತ್ತದೆ ಎಂಬುದು ಇಲ್ಲಿನ ಜನರ ನಂಬಿಕೆ. ಅದರಂತೆ ಸೋಮವಾರ ಶನಿವಾರಸಂತೆ ಪಟ್ಟಣದ ಶ್ರೀ ಮಂಜುನಾಥ ಸ್ವಾಮಿ ಪಾದಯಾತ್ರೆ ಸಮಿತಿ ವತಿಯಿಂದ ಮಾಲಂಬಿ ಮಳೆ ಮಲ್ಲೇಶ್ವರ ಬೆಟ್ಟಕ್ಕೆ ಪಾದಯಾತ್ರೆ ನಡೆಯಿತು.
ಪಟ್ಟಣದಿಂದ 12 ಕಿ.ಮೀ. ದೂರದಲ್ಲಿರುವ ಸಮುದ್ರ ಮಟ್ಟದಿಂದ 5,778 ಅಡಿ ಎತ್ತರದಲ್ಲಿರುವ ಮಾಲಂಬಿ ಮಳೆಮಲ್ಲೇಶ್ವರ ಬೆಟ್ಟವನ್ನೇರಿದ ಪಾದಯಾತ್ರಿಗಳು ಬೆಟ್ಟದ ಮೇಲಿರುವ ಶ್ರೀ ಮಳೆಮಲ್ಲೇಶ್ವರ ದೇವಾಲಯದಲ್ಲಿ ಮಳೆಮಲ್ಲೇಶ್ವರನಿಗೆ ವಿಶೇಷ ಪೂಜಾ ವಿಧಿ ವಿಧಾನವನ್ನು ಸಲ್ಲಿಸಿದರು.
ಮಳೆಯ ಬರುವಿಕೆಗೆ ಈ ಬೆಟ್ಟವನ್ನೇರಿದರೆ ಮಳೆಯಾಗುತ್ತದೆ ಎಂಬುವುದು ಈ ಭಾಗದ ಜನರ ಪ್ರತೀತಿ. ಮಾಲಂಬಿ ಮಳೆಮಲ್ಲೇಶ್ವರ ಬೆಟ್ಟಕ್ಕೆ ಸುಮಾರು 350 ವರ್ಷಗಳ ಇತಿಹಾಸ ಇದ್ದು ಬೆಟ್ಟ ಚಾರಣ ಪ್ರಿಯರಿಗೆ ಹೇಳಿ ಮಾಡಿಸಿದಂತಿದೆ.
ಶನಿವಾರಸಂತೆ ಪಾದಯಾತ್ರೆ ಸಮಿತಿಯಿಂದ ಸೋಮವಾರ ಬೆಳಗ್ಗೆ ಮಾಲಂಬಿ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಪಯಣ ಬೆಳೆಸಿತು. 3ನೇ ವರ್ಷದ ಪಾದಯಾತ್ರೆ ಕಾರ್ಯಕ್ರಮ ಇದಾಗಿದ್ದು ಸೋಮವಾರ ಬೆಳಗ್ಗೆ 8-30 ಕ್ಕೆ ಪಾದಯಾತ್ರೆ ಸಮಿತಿ ಪ್ರಮುಖ ಎ.ಡಿ. ಮೋಹನ್‌ಕುಮಾರ್ ನೇತೃತ್ವದಲ್ಲಿ ಸುತ್ತಮುತ್ತಲಿನ ಗ್ರಾಮಗಳಿಂದ ಬಂದ 50 ಕ್ಕಿಂತ ಹೆಚ್ಚಿನ ಪಾದಯಾತ್ರಿಗಳ ತಂಡ, ಪಟ್ಟಣದ ಶ್ರೀ ಗಣಪತಿ ದೇವಾಲಯದಲ್ಲಿ ಪೂಜೆಯನ್ನು ಸಲ್ಲಿಸಿದ ಬಳಿಕ ವಾದ್ಯಗೋಷ್ಠಿಯೊಂದಿಗೆ ಪಾದಯಾತ್ರೆ ಹೊರಟಿಸಿದರು.
ಭಜನೆ ಮೂಲಕ ಪ್ರಾರ್ಥನೆ
ಪಾದಯಾತ್ರಿಗಳು ಗುಡುಗಳಲೆ ಜಂಕ್ಷನ್ ಮೂಲಕವಾಗಿ ಗೋಪಾಲಪುರ, ರಾಮನಹಳ್ಳಿ, ನಂದಿಗುಂದ ಮಾರ್ಗವಾಗಿ ಮಾಲಂಬಿ ಮಳೆಮಲ್ಲೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಚಾರಣ ಬೆಳೆಸಿದರು. ಮಧ್ಯಾಹ್ನ 1 ಗಂಟೆಗೆ ಬೆಟ್ಟದ ಮೇಲಿರುವ ದೇವಾಲಯವನ್ನು ತಲುಪಿದ ಪಾದಯಾತ್ರಿಗಳು ದೇವಾಲಯದ ಲ್ಲಿರುವ ಶ್ರೀ ಗಣಪತಿಗೆ ವಿಶೇಷ ಪೂಜಾ ಸೇವೆ ಯನ್ನು ಸಲ್ಲಿಸಿದರು. ಬಳಿಕ ಶನಿವಾರಸಂತೆ ಶ್ರೀ ರಾಮಾಂಜನೇಯ ಭಜನೆ ಮಂಡಳಿಯಿಂದ ಮಳೆ ಮಲ್ಲೇಶ್ವರನಿಗೆ ಭಜನೆ ಮೂಲಕ ಮಳೆಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಮಳೆಮಲ್ಲೇಶ್ವರನಿಗೆ ರುದ್ರಾಭಿಷೇಕ, ಮಹಾಮಂಗಳಾರತಿ ಮುಂತಾದ ಪೂಜಾ ವಿಧಿವಿಧಾನವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಪಾದಯಾತ್ರಾ ಸಮಿತಿ ಮತ್ತು ದಾನಿಗಳಿಂದ ಪಾದಯಾತ್ರಿಗಳಿಗೆ ಮತ್ತು ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮತ್ತು ಅನ್ನದಾನವನ್ನು ಏರ್ಪಡಿಸಲಾಯಿತು.
ಈ ಸಂದರ್ಭದಲ್ಲಿ ಮಹಿಳೆಯರು ಮತ್ತು ಮಕ್ಕಳು ಉತ್ಸಾಹದಿಂದ ಪಾದಯಾತ್ರೆ ಕಾರ್ಯ ಕ್ರಮದಲ್ಲಿ ಪಾಲ್ಗೊಂಡಿದ್ದರು. ಪಾದಯಾತ್ರಾ ಕಾರ್ಯಕ್ರಮದಲ್ಲಿ ಪ್ರಮುಖರಾದ ಸಿ.ವಿ. ಜಯಪ್ಪ, ಎ.ಕೆ. ರಾಜಶೇಖರ್, ಅಶೋಕ್ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.