ಶನಿವಾರಸಂತೆ ಗ್ರಾ.ಪಂ. ಮಾಸಿಕ ಸಭೆ: ಅಭಿವೃದ್ಧಿ ನಿರ್ಲಕ್ಷ್ಯಕ್ಕೆ ಅಸಮಾಧಾನ


Team Udayavani, Jul 25, 2019, 5:51 AM IST

23SS1SABHE

ಶನಿವಾರಸಂತೆ: ಶನಿವಾರಸಂತೆ ಗ್ರಾ.ಪಂ.ಆಡಳಿತ ಮಂಡಳಿಯ ಮಾಸಿಕ ಸಾಮಾನ್ಯ ಸಭೆ ಗ್ರಾ.ಪಂ.ಅಧ್ಯಕ್ಷ ಮಹಮದ್‌ಗೌಸ್‌ ಅಧ್ಯಕ್ಷತೆಯಲ್ಲಿ ಗ್ರಾ.ಪಂ.ಕಚೇರಿ ಸಭಾಂಗಣದಲ್ಲಿ ನ‌ಡೆಯಿತು.

ಕಳೆದ ನಾಲ್ಕೂವರೆ ವರ್ಷಗಳಲ್ಲಿ ಸದರಿ ಗ್ರಾ.ಪಂ.ಯು ಯಾವುದೆ ರೀತಿಯಲ್ಲಿ ಅಭಿವೃದ್ದಿಯಾಗದಿರುವುದು ಮತ್ತು ಗ್ರಾ.ಪಂ.ಅಧ್ಯಕ್ಷರ ಕಾರ್ಯವೈಕರ್ಯಗಳಲ್ಲಿ ವೈಫ‌ಲ್ಯ ಬಗ್ಗೆ ಅಧ್ಯಕ್ಷರ ವಿರುದ್ದ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಮೂಲ ಕುಡಿಯುವ ನೀರಿಗೆ ಸಮಸ್ಯೆ ಇಲ್ಲದಿದ್ದರೂ ಕೆಲವು ವಾರ್ಡ್‌ಗಳಲ್ಲಿ ಕುಡಿಯುವನೀರು ಸರಬರಾಜು ಮಾಡಲು ಅಳವಡಿಸುವ ಕೊಳವೆ ಒಡೆದುಹೋಗುವ ಸಂದರ್ಭದಲ್ಲಿ ಅದನ್ನು ದುರಸ್ಥಿ ಪಡಿಸಲು ವಿಫ‌ಲವಾಗಿರುವುದ್ದರಿಂದ ಕುಡಿಯುವ ನೀರಿನ ವ್ಯವಸ್ಥೆಯಲ್ಲಿ ಜನರಿಗೆ ತೊಂದರೆಯಾಗುತ್ತಿದೆ ಕೆಲವು ವಾರ್ಡ್‌ ಬೀದಿಗಳಲ್ಲಿ ಕೆಟ್ಟುಹೋದ ಬೀದಿದೀಪಗಳನ್ನು ಹೊಸದಾಗಿ ಅಳವಡಿಸುತ್ತಿಲ್ಲ ಸದಸ್ಯರ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಸದಸ್ಯೆ ಆದಿತ್ಯ ಅಸಮಾಧಾನ ವ್ಯಕ್ತಪಡಿಸಿದರು ಇದಕ್ಕೆ ಸದಸ್ಯರು ಧ್ವನಿಗೂಡಿಸಿದರು.

ಗುಂಡೂರಾವ್‌ ಬಡಾವಣೆ ಮತ್ತು ಸಂತೆ ಮಾರುಕಟ್ಟೆ ಬೀದಿಯಲ್ಲಿ ಸಮರ್ಪಕವಾಗಿ ಕಸವಿಲೇವಾರಿಯಾಗುತ್ತಿಲ್ಲ, ಇಲ್ಲಿನ ರಸ್ತೆ ಬದಿಯ ಚರಂಡಿಯನ್ನು ದುರಸ್ಥಿಗೊಳಿಸದೆ ಬಹಳ ದಿನಗಳೆ ಕಳೆದುಹೋಗಿದೆ, ಚರಂಡಿಯಲ್ಲಿ ಪೊದೆಗಳು ಬೆಳೆದು ಚರಂಡಿ ಮುಚ್ಚಿಹೋಗುತ್ತಿದೆ ಎಂದು ವಾರ್ಡ್‌ ಸದಸ್ಯ ಸರ್ದಾರ್‌ ಆಹಮದ್‌ ಅಸಮಾಧಾನ ವ್ಯಕ್ತ ಪಡಿಸಿದಾಗ ಇದಕ್ಕೆ ಉತ್ತರಿಸಿದ ಅಧ್ಯಕ್ಷ ಮಹಮದ್‌ಗೌಸ್‌ ಗುಂಡೂರಾವ್‌ ಬಡಾವಣೆ ಮತ್ತು ಸಂತೆ ಮಾರುಕಟ್ಟೆ ಸ್ಥಳದಲ್ಲಿ ನಾಲ್ಕು ರಸ್ತೆಗಳಿರುವುದ್ದರಿಂದ ಹೊಸದಾಗಿ ಸೀಮೆಂಟ್‌ ಕಾಂಕ್ರೀಟ್‌ ಚರಂಡಿ ವ್ಯವಸ್ಥೆ ಮಾಡುವ ಸಲುವಾಗಿ ಇದರ ಕಾಮಗಾರಿಗಾಗಿ ತಕ್ಷಣ ಕ್ರಿಯಾಯೋಜನೆ ರೂಪಿಸೋಣ ಎಂದು ಉತ್ತರಿಸಿದರು.

ಸದರಿ ಗ್ರಾ.ಪಂ.ಗೆ ಹಸಿಮೀನು ಮಾರುಕಟ್ಟೆ ಮಳಿಗೆ ಹರಾಜಿನಿಂದ 8 ಲಕ್ಷ ರು ಕ್ಕಿಂತ ಹೆಚ್ಚಿನ ಆದಾಯ ಬರುತ್ತಿದೆ ಕಳೆದ ತಿಂಗಳ ಮಾಸಿಕ ಸಭೆಯಲ್ಲಿ ಬಾಕಿಯಾಗಿದ್ದ ಹಸಿಮೀನು ಮಾರುಕಟ್ಟೆ ಮಳಿಗೆ ಹರಾಜು ಪ್ರಕ್ರಿಯೆ ನಡೆಸುವಂತೆ ತೀರ್ಮಾನಿಸಲಾಗಿತು ಆದರೆ ಅಧ್ಯಕ್ಷರು ತಿಂಗಳು ಕಳೆದರೂ ಹರಾಜು ಪ್ರಕ್ರಿಯೆ ನಡೆಸುತ್ತಿಲ್ಲ ಏಕೆ? ಎಂದು ಸದಸ್ಯರಾದ ಆದಿತ್ಯ, ಎಸ್‌.ಎನ್‌.ಪಾಂಡು ಆಕ್ಷೇಪ ವ್ಯಕ್ತಪಡಿಸಿದರು ಗ್ರಾ.ಪಂ.ಸೇರಿದ ಆಸ್ತಿಯನ್ನು ಉಳಿಸಿಕೊಳ್ಳಲು ಆಡಳಿತ ಮಂಡಳಿಯಿಂದ ಆಗುತ್ತಿಲ್ಲ ಇದರಿಂದ ಸಾರ್ವಜನಿಕರಿಗೆ ಗ್ರಾ.ಪಂ.ಬಗ್ಗೆ ವಿಶ್ವಾಸ ಇಲ್ಲದಂತಾಗಿದೆ ಇದಕ್ಕೆ ಅಧ್ಯಕ್ಷರ ಅಸಮರ್ಥನೆ ಕಾರಣ ಎಂದು ಸರ್ದಾರ್‌ ಆಹಮದ್‌ ಅಸಮಾಧಾನ ವ್ಯಕ್ತಪಡಿಸಿದರು. ಉಪಾಧ್ಯಕ್ಷೆ ಗೀತಹರೀಶ್‌, ಸದಸ್ಯರಾದ ಎಚ್‌.ಆರ್‌.ಹರೀಶ್‌, , ಸೌಭಾಗ್ಯಲಕ್ಷ್ಮೀ ಉಷಜಯೇಶ್‌, ಹೇಮಾವತಿ, ರಜನಿ ರಾಜು, ಪಿಡಿಒ ಬಾಲಕೃಷ್ಣ ರೈ, ಕಾರ್ಯದರ್ಶಿ ತಮ್ಮಯ್ಯ ಆಚಾರ್‌, ಸಿಬಂದಿ ವಸಂತ್‌, ಪೌಜಿಯಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.