ಅಲ್ಪಸಂಖ್ಯಾಕರು ಒಗ್ಗಟ್ಟಾಗಿ ಕಾಂಗ್ರೆಸ್ ಪಕ್ಷವನ್ನು ಬಲಗೊಳಿಸಿ: ಯಾಕೂಬ್
Team Udayavani, Jun 30, 2019, 5:53 AM IST
ಮಡಿಕೇರಿ : ಅಲ್ಪಸಂಖ್ಯಾಕರು ಯಾವುದೇ ಕಾರಣಕ್ಕೂ ವಿಂಗಡಣೆಯಾಗದೆ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸುವ ಮೂಲಕ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಹೆಚ್ಚು ಕಾರ್ಯಪ್ರವೃತ್ತರಾಗಬೇಕು ಎಂದು ಕೊಡಗು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕೆ.ಎ.ಯಾಕುಬ್ ಅವರು ಸಲಹೆ ನೀಡಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಅಲ್ಪಸಂಖ್ಯಾಕರ ಘಟಕದ ಅಧಿಕಾರ ಹಸ್ತಾಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಹಿಂದಿನಿಂದಲೂ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶೇ.98ರಷ್ಟು ಅಲ್ಪಸಂಖ್ಯಾಕರ ಮತಗಳೇ ಕಾರಣವಾಗಿತ್ತು. ಕಾಂಗ್ರೆಸ್ ಸರಕಾರವಿದ್ದಾಗ ಅಲ್ಪಸಂಖ್ಯಾತರ ಏಳಿಗೆಗಾಗಿ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದೆ. ಹಲವರು ಪಕ್ಷದಿಂದ ಫಲವನ್ನು ಪಡೆದಿದ್ದಾರೆ, ಆದರೆ ಪಕ್ಷಕ್ಕೆ ಅವರ ಕೊಡುಗೆ ಕೇವಲ ಶೂನ್ಯ ಎಂದು ಯಾಕುಬ್ ಬೇಸರ ವ್ಯಕ್ತಪಡಿಸಿದರು.
ಪಕ್ಷದ ಕಾರ್ಯಕರ್ತರು ತಮ್ಮಲ್ಲಿರುವ ಗೊಂದಲಗಳನ್ನು ಪಕ್ಷದ ಸಭೆಯಲ್ಲಿ ಮುಕ್ತವಾಗಿ ಚರ್ಚಿಸುವ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎಂದರು.
ಅಲ್ಪಸಂಖ್ಯಾಕರಿಗಾಗಿ ಸರಕಾರ ಜಾರಿಗೆ ತಂದಿರುವ ಎಲ್ಲ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.
ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ಅವರು ಮಾತನಾಡಿ, ಪಕ್ಷದ ಬಲವರ್ಧನೆಗೆ ಪ್ರತಿಯೊಬ್ಬರು ಅಧ್ಯಕ್ಷರೊಂದಿಗೆ ನಿಕಟ ಸಂಪರ್ಕವನ್ನು ಹೊಂದಬೇಕು, ಆ ಮೂಲಕ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದರು.
ಅಲ್ಪಸಂಖ್ಯಾಕರ ಘಟಕದ ನೂತನ ಅಧ್ಯಕ್ಷ ಎ.ಕೆ.ಹ್ಯಾರಿಸ್ ಅವರು ಮಾತನಾಡಿ, ಪಕ್ಷದ ಹಿರಿಯ ಮುಖಂಡರ ಸಲಹೆ ಸೂಚನೆಯಂತೆ ತಾನು ಪಕ್ಷದಲ್ಲಿ ಕಾರ್ಯನಿರ್ವಹಿಲಿದ್ದೇನೆ ಎಂದು ಹೇಳಿದರು.
ತನ್ನ ಬಾಲ್ಯವನ್ನು ಹೆಚ್ಚಾಗಿ ಗ್ರಾಮದಲ್ಲಿ ಕಳೆದಿರುವುದರಿಂದ ಗ್ರಾಮಗಳ ಸಮಸ್ಯೆಗಳ ಬಗ್ಗೆ ಅರಿವಿದೆ. ಆ ನಿಟ್ಟಿನಲ್ಲಿ ಗ್ರಾಮಗಳಿಗೆ ತೆರಳಿ ಕಾಂಗ್ರೆಸ್ ಪಕ್ಷದ ಯೋಜನೆಗಳನ್ನು ಮನೆ ಮನೆಗಳಿಗೆ ತಲುಪಿಸಿ ಪಕ್ಷದ ಗೆಲುವಿಗೆ ಶ್ರಮಿಸುವುದಾಗಿ ಅವರು ತಿಳಿಸಿದರು.
ಅಲ್ಪಸಂಖ್ಯಾತರ ಘಟಕದ ನೂತನ ಪದಾಧಿಕಾರಿಗಳಿಗೆ ಇದೇ ಸಂದರ್ಭ ಅಧಿಕಾರ ಹಸ್ತಾಂತರಿಸಲಾಯಿತು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಲ್ಪಸಂಖ್ಯಾಕರ ಘಟಕದ ಉಪಾಧ್ಯಕ್ಷ ಹ್ಯಾರಿಸ್ ಎಡಪಾಲ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಸುರಯ್ಯ ಅಬ್ರಾರ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಮ್ಯಾಥ್ಯು, ಸೋಮವಾರಪೇಟೆ ಪ.ಪಂ ಸದಸ್ಯರಾದ ಶೀಲಾ ಡಿಸೋಜ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.