ಕೊಡಗು ಜಿಲ್ಲೆಯಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Team Udayavani, Sep 28, 2020, 11:15 PM IST
ಮಡಿಕೇರಿ: ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಮಸೂದೆ ವಿರುದ್ಧ ರೈತ, ಕಾರ್ಮಿಕ ಮತ್ತು ದಲಿತ ಪರ ಸಂಘಟನೆಗಳು ಕರೆ ನೀಡಿದ್ದ “ಕರ್ನಾಟಕ ಬಂದ್’ಗೆ ಕೊಡಗು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಹೆಚ್ಚಿನೆಲ್ಲೆಡೆ ಜನಜೀವನ ಎಂದಿನಂತೆಯೇ ಇತ್ತು.
ಪ್ರತಿಭಟನಕಾರರು ಬಂದ್ ಮಾಡಿ ಸಹಕರಿಸುವಂತೆ ಮನವಿ ಮಾಡಿದ್ದರೂ ಬಹುತೇಕ ವರ್ತಕರು ವ್ಯವಹಾರ ನಡೆಸಿದರು. ಕೆಲವು ಅಂಗಡಿ, ಹೊಟೇಲ್‌ಗಳು ಮುಚ್ಚಿದ್ದವು. ಸರಕಾರಿ ಕಚೇರಿಗಳು ಕಾರ್ಯನಿರ್ವಹಿಸಿದವು. ಬಸ್‌ಗಳ ಸಂಚಾರ ಎಂದಿನಂತೆ ಇತ್ತು. ಬಿಜೆಪಿಯೇತರ ಪಕ್ಷಗಳು, ರೈತ ಪರ ಸಂಘಟನೆಗಳು ಬೆಳಗ್ಗೆ ನಗರದ ಜ| ತಿಮ್ಮಯ್ಯ ವೃತ್ತದಲ್ಲಿ ಸಮಾವೇಶ ಗೊಂಡು, ಕೃಷಿ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದವು. ಪೊಲೀಸರು ಹಲವರನ್ನು ಬಂಧಿಸಿ ಅನಂತರ ಬಿಡುಗಡೆ ಮಾಡಿದರು.
ಪರ-ವಿರೋಧ ಪ್ರತಿಭಟನೆ!
ರೈತ ವಿರೋಧಿ ನೀತಿಯನ್ನು ಖಂಡಿಸಿ ವೀರಾಜಪೇಟೆ ಪಟ್ಟಣದಲ್ಲಿ ಮಾಜಿ ಎಂಎಲ್‌ಸಿ ಅರುಣ್ ಮಾಚಯ್ಯ ನೇತೃತ್ವದಲ್ಲಿ ಮೆರವಣಿಗೆ ನಡೆಯಿತು. ಇದೇ ಸಂದರ್ಭ ಬಿಜೆಪಿ ಪ್ರಮುಖರು ಕೂಡ ಕೇಂದ್ರ ಸರಕಾರದ ಪರ ಘೋಷಣೆಗಳನ್ನು ಕೂಗುತ್ತಾ ಬಂದರು. ಪರಿಸ್ಥಿತಿ ಕಾವೇರು ತ್ತಿದ್ದಂತೆ ಪೊಲೀಸರು ಹತೋಟಿಗೆ ತಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.