ಮೊಬೈಲ್ ಸಂಪರ್ಕ ಕಡಿತ: ಸರಿಪಡಿಸಲು ಮನವಿ
Team Udayavani, Jun 13, 2019, 6:10 AM IST
ಸೋಮವಾರಪೇಟೆ: ಸಮೀಪದ ಬೇಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರೆಕೊಪ್ಪ, ಬಸವನಳ್ಳಿ ಗ್ರಾಮಗಳಲ್ಲಿ ಮೊಬೈಲ್ ಸಂಪರ್ಕ ಕಡಿತಗೊಂಡಿದ್ದು, ಕೂಡಲೇ ಸರಿಪಡಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.
ಗ್ರಾಮಸ್ಥರಾದ ಮಂಜು ಮಾತನಾಡಿ, ಕಳೆದ ಎಂಟು ದಿನಗಳಿಂದ ಈ ಭಾಗದಲ್ಲಿ ಮೊಬೈಲ್ ಸಂಪರ್ಕ ಕಡಿತಗೊಂಡಿದ್ದು, ಟವರ್‌ನ ನಿರ್ವಹಣಾ ಕಚೇರಿಗೆ ಬೀಗ ಜಡಿಯಲಾಗಿದೆ. ಇದರಿಂದ ಈ ಭಾಗದಲ್ಲಿ ಸಾಕಷ್ಟು ತೊಂದರೆಯಾಗಿದ್ದು, ಸಂಬಂಧಿಸಿದ ಅಧಿಕಾರಿಗಳನ್ನು ಕೇಳಿದರೆ ಉಡಾಫೆ ಉತ್ತರ ನೀಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಮರಬಿದ್ದು ಸಂಪರ್ಕ ಕಡಿತಗೊಂಡಿದೆ ಇನ್ನಿತರ ಉತ್ತರ ನೀಡುತ್ತಿದಾರೆ. ಐವರ್ ನಿರ್ವಹಣೆಯನ್ನು ಖಾಸಗಿ ಯವರಿಗೆ ವಹಿಸಲಾಗಿದೆ. ಇವರ ಸಂಬಳ ಪಾವತಿಸುತ್ತಿಲ್ಲ, ಡಿಸೆಲ್ಗೆ ಹಣ ನೀಡುತ್ತಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ. ಆದುದ್ದರಿಂದ ಸಂಬಂಧಿಸಿದವರು ಕೂಡಲೇ ಸಮಸ್ಯೆಯನ್ನು ಬಗೆಹರಿಸಬೇಕೆಂದು ಆಗ್ರಹಿಸಲಾಗಿದೆ.
ದೂರವಾಣಿ ಇಲಾಖೆಯ ಎಂಜಿನಿಯರ್‌ರಿಗೆ ಸೋಮವಾರ ಮನವಿ ಸಲ್ಲಿಸಿ ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ವಿನಂತಿಸಿದರು.
ಮನವಿ ಸ್ವೀಕರಿಸಿದ ಬಿಎಸ್‌ಎನ್‌ಎಲ್ ಗ್ರಾಮೀಣ ವಿಭಾಗದ ಕಿರಿಯ ಎಂಜಿನಿಯರ್ ಶ್ರೀನಿವಾಸ್ ಅವರು ಅನಂತರ ಮಾತನಾಡಿ, ಈಗಾಗಲೇ ಕಾರೆಕೊಪ್ಪ ಬಸವನಳ್ಳಿ ಮೊಬೈಲ್ ಟವರ್ ಜಿಎಸ್‌ಟಿ ಕಂಪೆನಿಗೆ ವಹಿಸಲಾಗಿದೆ ಎಂದು ತಿಳಿಸದರು.
ಬಿಎಸ್‌ಎನ್‌ಎಲ್ ನಿಂದ ನಿರ್ವಹಣಗೆ ಹಣ ಪಾವತಿಯಾಗಿಲ್ಲ ಎಂದು ತಾತ್ಕಾಲಿಕವಾಗಿ ಬೀಗ ಹಾಕಲಾಗಿದೆ. ಹಣ ಪಾವತಿಯಾದ ತಕ್ಷಣ ಕೆಲಸ ಪ್ರಾರಂಭಿಸಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.
ಮನವಿ ನೀಡಿದ ಸಂದರ್ಭ ಗ್ರಾಮಸ್ಥರಾದ ಕೆ.ಎನ್. ಶರತ್‌ಕುಮಾರ್ ಮಂಜುನಾಥ್, ಕೆ.ಎ. ಪೂವಯ್ಯ, ಕೆ.ಈ. ರಾಜು, ನವೀನ, ನಾಗೇಶ್, ರವಿ, ಶ್ರೀ ನಿವಾಸ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.