ಅತ್ಯಾಚಾರಗೈದು ಕೊಲೆ: ಇಬ್ಬರ ಬಂಧನ

Team Udayavani, Feb 14, 2019, 12:30 AM IST

z-crime.jpg

ಮಡಿಕೇರಿ: ಎಮ್ಮೆಗುಂಡಿ ಎಸ್ಟೇಟ್‌ ಬಾಲಕಿಯ ನಾಪತ್ತೆ ಪ್ರಕರಣವನ್ನು ಭೇದಿಸಿರುವ ಕೊಡಗು ಪೊಲೀಸರು ಇಬ್ಬರರನ್ನು ಬಂಧಿಸಿ ದ್ದಾರೆ.  ಬಾಲಕಿ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿ ಶವವನ್ನು ಬಂಡೆಕಲ್ಲಿನ ಬಳಿ ಅಡಗಿ ಸಿಟ್ಟಿದ್ದ ಪಶ್ಚಿಮಬಂಗಾಳ ಮೂಲದ ಕೂಲಿ ಕಾರ್ಮಿಕರಾದ ರಂಜಿತ್‌ ಹಾಗೂ ಸಂದೀಪ್‌ ಬಂಧಿತರು. 

ಕೊಡಗು ಜಿಲ್ಲೆಯ ಸಿದ್ದಾಪುರ  ಠಾಣಾ ವ್ಯಾಪ್ತಿಯ ಎಮ್ಮೆಗುಂಡಿ ಎಸ್ಟೇಟ್‌ನಿಂದ ಬಾಲಕಿ ಅಪಹರಣವಾಗಿದ್ದ ಬಗ್ಗೆ ಸಿದ್ದಾಪುರ  ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಜಿಲ್ಲಾ ಪೊಲೀಸರು ಸ್ಥಳೀಯ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ವಿಚಾರಣೆಗೆ ಒಳಪಡಿಸಿದ್ದರು.

ಅಪಹರಣಕ್ಕೊಳಗಾದ ಬಾಲಕಿ ಯೊಂದಿಗೆ ಪಶ್ಚಿಮ ಬಂಗಾಳದ ರಂಜಿತ್‌ ಮತ್ತು ಆತನ ಸ್ನೇಹಿತನೊಂದಿಗೆ ಜಗಳವಾಡಿದ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿದರು. ಬಳಿಕ  ಸಮೀಪದ ಕರಡಿಕಾಡು ಎಸ್ಟೇಟ್‌ನಲ್ಲಿ ಕಾರ್ಮಿಕನಾಗಿದ್ದ ರಂಜಿತ್‌ನನ್ನು ವಶಕ್ಕೆ ಪಡೆದು  ವಿಚಾರಣೆಗೊಳಪಡಿಸಿದರು. 

ಅವಮಾನಿಸಿದ್ದು ಕಾರಣ 
ಈ ಸಂದರ್ಭ ಆತನು, ತಮ್ಮನ್ನು ಅವಮಾನಿಸಿದ್ದ ಬಾಲಕಿ ಮೇಲೆ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ   ಸಂದೀಪನೊಂದಿಗೆ ಸೇರಿ ಫೆ. 4ರಂದು  ಆಕೆಯನ್ನು ಅಪಹರಣ ಮಾಡಿ ಅತ್ಯಾಚಾರವೆಸಗಿದ ವಿಷಯ ತಿಳಿಸಿದ.  ಅತ್ಯಾಚಾರದ ವಿಷಯವನ್ನು ಯಾರಿಗಾದರೂ ಹೇಳಿ ತಮಗೆ ತೊಂದರೆ ಯಾಗಬಹುದೆಂದು ಹಗ್ಗದಿಂದ ಆಕೆಯ ಕುತ್ತಿಗೆ ಬಿಗಿದು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು  ಎಸ್‌ಪಿ ಡಾ| ಸುಮನ್‌ ಪನ್ನೇಕರ್‌ ಸುದ್ದಿಗೋಷ್ಠಿ ಯಲ್ಲಿ ಮಾಹಿತಿ ನೀಡಿದರು.

ಬಳಿಕ ಸಂದೀಪನನ್ನು ಕೂಡ ವಶಕ್ಕೆ ಪಡೆಯಲಾಗಿದ್ದು, ಆತನೂ ತಪ್ಪೊಪ್ಪಿ ಕೊಂಡಿದ್ದಾನೆ. ಎಮ್ಮೆಗುಂಡು ಎಸ್ಟೇಟಿನ ಗಣಪತಿ ದೇವಸ್ಥಾನದ ಕೆಳಭಾಗ ದ ಕಲ್ಲುಗುಡ್ಡದ ಬಂಡೆಯ ಬಳಿ ಮೃತ ದೇಹವನ್ನು ಬಚ್ಚಿಡಲಾಗಿತ್ತು. ಎಸ್‌ಪಿ  ನಿರ್ದೇಶನದಂತೆ ಡಿವೈ ಎಸ್‌ಪಿ  ಸುಂದರ್‌ರಾಜ್‌  ಮಾರ್ಗ ದರ್ಶನದಲ್ಲಿ ಜಿಲ್ಲಾ ಅಪರಾಧ ಪತ್ತೆ ದಳದ ಇನ್‌ ಸ್ಪೆಕ್ಟರ್‌ ಎಂ.ಮಹೇಶ್‌, ಮಡಿಕೇರಿ ನಗರ ವೃತ್ತ ನಿರೀಕ್ಷಕ ಅನೂಪ್‌ ಮಾದಪ್ಪ, ಸಿದ್ದಾಪುರ  ಎಸ್‌ಐ ದಯಾನಂದ್‌, ಸಿಬಂದಿ ವರ್ಗದ ಯೋಗೇಶ್‌ ಕುಮಾರ್‌, ವೆಂಕಟೇಶ್‌, ಅನಿಲ್‌, ವಸಂತ, ನಿರಂಜನ್‌, ಸಿಡಿಆರ್‌ ಸೆಲ್‌ನ ಎಂ.ಎ.ಗಿರೀಶ್‌, ಸಿ.ಕೆ.ರಾಜೇಶ್‌ ಮತ್ತು ಮಂಜುನಾಥ್‌, ಲವ ಕುಮಾರ್‌, ಪೃಥ್ವೀಶ, ಮಲ್ಲಪ್ಪ ಹಾಗೂ ಚಾಲಕರಾದ ಶಶಿಕುಮಾರ್‌, ಪೂವಯ್ಯ, ಮೋಹನ  ಅವರು ಕಾರ್ಯಾ ಚರಣೆ  ನಡೆಸಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

12

Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.