“ಪ್ರಾಕೃತಿಕ ವಿಕೋಪ ನಿರ್ವಹಣೆ: ಮುನ್ನೆಚ್ಚರಿಕೆ ಅಗತ್ಯ’
Team Udayavani, Sep 21, 2019, 5:42 AM IST
ಮಡಿಕೇರಿ: ಪ್ರಾಕೃತಿಕ ವಿಪತ್ತು ಸಂಭವಿಸುವುದಕ್ಕೂ ಮೊದಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಮತ್ತು ಮುನ್ನೆಚ್ಚರಿಕಾ ಕ್ರಮಗಳಿಗೆ ಆದ್ಯತೆ ನೀಡುವುದು ಅಗತ್ಯ. ಹೀಗೆ ಮಾಡಿದಾಗ ಅನಾಹುತಗಳನ್ನು ಸಮರ್ಥವಾಗಿ ನಿಭಾಯಿಸಬಹುದಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ಸಲಹೆ ನೀಡಿದ್ದಾರೆ.
ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಮೈಸೂರು ಆಡಳಿತ ತರಬೇತಿ ಸಂಸ್ಥೆ, ಕೊಡಗು ವಿಪತ್ತು ನಿರ್ವಹಣಾ ಪ್ರಾಧಿಕಾರ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಹಕಾರದಲ್ಲಿ ವಿಕೋಪ ನಿರ್ವಹಣೆಯಲ್ಲಿ ಮಾಧ್ಯಮಗಳ ಪಾತ್ರ ಕುರಿತು ನಡೆದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರದ ತರಬೇತಿ ನಿರ್ದೇಶಕರಾದ ಡಾ.ಎಂ.ದಿಲೀಪ್ ಕುಮಾರ್ ಅವರು ಮಾತನಾಡಿ ವಿಕೋಪ ಸಂದರ್ಭದಲ್ಲಿ ಬಡವರು, ಮಹಿಳೆಯರು, ಮಕ್ಕಳು ಹೆಚ್ಚಾಗಿ ವಿಕೋಪಕ್ಕೆ ತುತ್ತಾಗುತ್ತಾರೆ. ಈ ಸಂದರ್ಭದಲ್ಲಿ ಇವರ ರಕ್ಷಣೆ ಅತ್ಯಂತ ಅಗತ್ಯ. ಆದ್ದರಿಂದ ಮಾಧ್ಯಮ ಮತ್ತು ಅಧಿಕಾರಿಗಳ ನಡುವೆ ಸಮನ್ವಯತೆ ಸಾಧಿಸಿ ನಿರ್ಗತಿಕರ ರಕ್ಷಣೆ ಮಾಡುವಂತಾಗಬೇಕು ಎಂದರು.
ಪ್ರಕೃತಿ ವಿಕೋಪ ಸಂಬಂಧಿಸಿದಂತೆ ಕೆಲವು ವಿಚಾರಗಳು ಮಾಧ್ಯಮ ಗಳ ಮೂಲಕ ಮಾಹಿತಿ ದೊರೆಯುತ್ತವೆ. ಸೇತುವೆಯಂತೆ ಕಾರ್ಯನಿರ್ವ ಹಿಸಬೇಕಿದೆ ಎಂದರು. ಡಿಸಾಸ್ಟರ್ ಮ್ಯಾನೇಜ್‌ಮೆಂಟ್ ಕಾಯಿದೆಯಡಿ ಪ್ರತಿಯೊಬ್ಬರೂ ಕರ್ತವ್ಯ ನಿರ್ವಹಿÓ ಬೇಕಿದ್ದು, ಆ ನಿಟ್ಟಿನಲ್ಲಿ ಮುಂದಿನ ದಿನದಲ್ಲಿ ಪ್ರಾದೇಶಿಕ ಮಟ್ಟದಲ್ಲಿ ಮಾಧ್ಯಮ ಅಕಾಡೆಮಿ ಸಹಯೋಗದಲ್ಲಿ ಕಾರ್ಯಾಗಾರ ಏರ್ಪಡಿಸಲು ಚಿಂತಿಸಲಾಗಿದೆ ಎಂದು ದಿಲೀಪ್ ಕುಮಾರ್ šತಿಳಿಸಿದರು. ಪ್ರಸ್‌ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಪತ್ರಕರ್ತರಾದ ಕೆ.ಎ.ಆದಿತ್ಯ ವಿN°àಶ್ ಭೂತನಕಾಡು ಮಾತನಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ಮಾತನಾಡಿದರು. ಜಿ.ಪಂ.ಉಪ ಕಾರ್ಯದರ್ಶಿ ಗುಡೂರು ಭೀಮಸೇನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇÍಕಿ ಕೆ.ರಾಧ, ಕ್ಷೆಶಿಕ್ಷಣಾಧಿಕಾರಿ ಗಾಯತ್ರಿ, ಉಪ ಪರಿಸರ ಅಧಿಕಾರಿ ಸುಧಾ, ಪತ್ರಕರ್ತರಾದ ಸುನಿಲ್ ಪೊನ್ನಟ್ಟಿ, ರಾಕೇಶ್, ಮಂಜು, ಉಪಸ್ಥಿತರಿದ್ದರು. ಚಿನ್ನಸ್ವಾಮಿ ಸ್ವಾಗತಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.