ಸರಕಾರೇತರ ಸಂಸ್ಥೆ ,ಸಂತ್ರಸ್ತರೊಂದಿಗೆ ಜಿಲ್ಲಾಧಿಕಾರಿ ಚರ್ಚೆ
ನೆರೆ ಸಂತ್ರಸ್ತರಿಗೆ ಪರಿಹಾರ
Team Udayavani, Nov 8, 2019, 5:37 AM IST
ಮಡಿಕೇರಿ : ಪ್ರಕೃತಿ ವಿಕೋಪದಿಂದ ಕೊಡಗಿನಲ್ಲಿ ಉಂಟಾದ ಹಾನಿ ಮತ್ತು ಪುನರ್ ನಿರ್ಮಾಣದ ಧ್ಯೇಯದೊಂದಿಗೆ ಸ್ಥಿತಿ ಸ್ಥಾಪಕ ಸಮುದಾಯವನ್ನು ನಿರ್ಮಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ವತಿಯಿಂದ ಸರ್ಕಾರೇತರ ಸಂಸ್ಥೆಗಳು ಉದಾರ ದಾನಿಗಳು ಹಾಗೂ ಇತರ ಪಾಲುದಾರರನ್ನು ಒಳಗೊಂಡ ಸಮಿತಿ ಸಭೆಯು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸಭೆ ನಡೆಯಿತು.
ಪ್ರವಾಹ ಪೀಡಿತ ಗ್ರಾಮಗಳು, ನೆರೆ ಸಂತ್ರಸ್ತರಿಗೆ ಪರಿಹಾರ, ಪುನರ್ ವಸತಿ ಮತ್ತು ಚೇತರಿಕೆ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾನಿಗೊಳಗಾದ ಕಟ್ಟಡಗಳ ದುರಸ್ತಿ, ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮಕೈಗೊಂಡು ಉತ್ತಮ ಆರೋಗ್ಯ ಸೌಲಭ್ಯ ದೊರಕಿಸಿಕೊಡುವುದು. ಈಗಾಗಲೇ ಜಿಲ್ಲೆಯ 14 ಸಾವಿರ ರೈತರಿಗೆ ಬೆಳೆ ಪರಿಹಾರ ಬಾಬ್ತು 57 ಕೋಟಿ ಪರಿಹಾರ ತಲುಪಿರುವುದಾಗಿ ಸಭೆಯಲ್ಲಿ ತಿಳಿಸಿದರು. ಎಲ್ಲರನ್ನು ಒಳಗೊಂಡು ಮೂಲ ಸೌಕರ್ಯ, ಬೆಳೆ ನಷ್ಟ ಪರಿಹಾರ, ವೈಜ್ಞಾನಿಕ ಕ್ರಮಗಳಡಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಿಕೆ, ಸ್ವಯಂ ಉದ್ಯೋಗಕ್ಕೆ ತರಬೇತಿ ಹೀಗೆ ಹಲವು ಆಯಾಮಗಳಲ್ಲಿ ಕೊಡಗು ಜಿಲ್ಲೆಯ ಪುನರ್ ನಿರ್ಮಾಣಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಜಿಲ್ಲಾ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಎಂ.ಬಿ.ದೇವಯ್ಯ ರೋಟರಿ ಅಧ್ಯಕ್ಷ ರತನ್ ತಮ್ಮಯ್ಯ ಕೊಡಗು ಸೇವಾ ಕೇಂದ್ರದ ಪ್ರಮೋದ್ ತುಮೊRàಸ್ ಸಂಸ್ಥೆಯ ಪ್ರತಿನಿಧಿ ವಿಶ್ವನಾಥ, ರೈತ ಕಾಳಪ್ಪ ಶಾಂತೆಯಂಡ ರವಿಕುಶಾಲಪ್ಪ ಮೊದಲಾದವರು ಸಲಹೆ ಸೂಚನೆಗಳನ್ನು ನೀಡಿ ದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ| ಸ್ನೇಹಾ ಅವರು ಸಭೆಯ ಉದ್ದೇಶದ ಬಗ್ಗೆ ತಿಳಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಸುಮನ್ ಡಿ.ಪಿ., ಯುನಿಸೆಫ್ ಪ್ರತಿನಿಧಿ ಮನೋಹರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಯ ಪ್ರತಿನಿಧಿಗಳು, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.
ಅಹವಾಲು ಆಲಿಕೆ
ಸಭೆಯ ಕೊನೆಯಲ್ಲಿ ಅಹವಾಲು ಗಳನ್ನು ಆಲಿಸಿ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಇಂದಿನ ಸಭೆಯಿಂದ ಉತ್ತಮ ಮಾಹಿತಿಗಳನ್ನು ಎಲ್ಲರೂ ಹಂಚಿಕೊಂಡಿದ್ದಾರೆ. ಯುನೆಸೆಫ್ ಪ್ರತಿನಿಧಿಗಳು, ಸರಕಾರೇತರ ಸಂಸ್ಥೆಗಳು, ನೀಡುವಂತಹ ಸಹಕಾರವನ್ನು ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಪುನರ್ ವಸತಿ ಕಾರ್ಯದಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ಎಲ್ಲರ ಸಹಕಾರ ಅಗತ್ಯವಿದೆ ಎಂದರು. ಸರಕಾರ ಈಗಾಗಲೇ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಾಣ ಮಾಡಿಕೊಡುತ್ತಿದ್ದು, ಇದಕ್ಕೆ ಸಂಘ ಸಂಸ್ಥೆಗಳು ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.