40ಕ್ಕೂ ಅಧಿಕ ಕಲಾತಂಡಗಳಿಂದ ಜಾನಪದ ಕಲೆಗಳ ಅನಾವರಣ

ಅ. 3: ಕೊಡಗು ಜಾನಪದ ಉತ್ಸವ

Team Udayavani, Sep 30, 2019, 5:25 AM IST

KODAGU

ಮಡಿಕೇರಿ : ಕರ್ನಾಟಕ ಜಾನಪದ ಪರಿಷತ್ತಿನ ಕೊಡಗು ಜಿಲ್ಲಾ ಘಟಕ ಹಾಗೂ ಮಡಿಕೇರಿ ನಗರ ದಸರಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ಇದೇ ಪ್ರಥಮ ಬಾರಿಗೆ ಮಡಿಕೇರಿಯಲ್ಲಿ ಕೊಡಗು ಜಾನಪದ ಉತ್ಸವ ನಡೆಯಲಿದೆ.

ಶನಿವಾರ ನಗರದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಿ.ಅನಂತಶಯನ ಅವರು, ಅಕ್ಟೋಬರ್‌ 3ರಂದು ನಡೆಯಲಿರುವ ಜಾನಪದ ಉತ್ಸವದಲ್ಲಿ ರಾಜ್ಯದ ವಿವಿಧೆಡೆಯ ಸುಮಾರು 40 ಕಲಾ ತಂಡಗಳು ಭಾಗವಹಿಸಲಿದ್ದು, ಅಂದು ಬೆಳಗ್ಗೆ 9.30ಕ್ಕೆ ನಗರದ ಮಂಗಳೂರು ರಸ್ತೆಯಲ್ಲಿರುವ ಪ್ರವಾಸಿ ಮಂದಿರದ ಬಳಿಯಿಂದ ಕಲಾ ಜಾಥಾ ನಡೆಯಲಿದೆ.
ಅಧ್ಯಕ್ಷತೆಯನ್ನು ಕರ್ನಾಟಕ ಜಾನಪದ ಪರಿಷತ್‌ನ ಅಧ್ಯಕ್ಷ ಟಿ.ತಿಮ್ಮೇಗೌಡ ವಹಿಸಲಿದ್ದು, ಪುತ್ತೂರಿನ ಖ್ಯಾತ ವಾಗ್ಮಿ ಕೃಷ್ಣ ಉಪಾಧ್ಯಾಯ ಅವರು ಮುಖ್ಯ ಭಾಷಣ ಮಾಡಲಿದ್ದಾರೆ. ಅತಿಥಿಗಳಾಗಿ ಸಂಸದ ಪ್ರತಾಪ್‌ಸಿಂಹ, ವಿಧಾಣಪರಿಷತ್‌ ಸದಸ್ಯರಾದ ಎಂ.ಪಿ.ಸುನಿಲ್‌ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾ ಪೊಲೀಸ್‌ ಅಧೀಕ್ಷಕಿ ಡಾ. ಸುಮನ್‌ ಡಿ. ಪೆನ್ನೇಕರ್‌ ಭಾಗವಹಿಸದ್ದಾರೆ ಎಂದರು.

ಪಾಲ್ಗೊಳ್ಳುವ ತಂಡಗಳು: ರಾಮನಗರದ ಚಿಕ್ಕನರಸಯ್ಯ ತಂಡದಿಂದ ಪಟಕುಣಿತ, ಪಾಂಡವಪುರದ ಶಿವಮಾದು ತಂಡದಿಂ¨ ಪೂಜಾಕುಣಿತ, ಕೃಷ್ಣೇ ಗೌಡ ಮತ್ತು ತಂಡದಿಂದ ಚಿಲಿಪಿಲಿ ಗೊಂಬೆ, ರಾಮನಗರದ ಪಾರ್ಥಸಾರಥಿ ತಂಡದಿಂದ ಡೊಳ್ಳು ಕುಣಿತ, ಮದ್ದೂರಿನ ಸಂತೋಷ್‌ ಮತ್ತು ತಂಡದಿಂದ ವೀರಗಾಸೆ, ಉತ್ತರ ಕರ್ನಾಟಕದ ಗೊಂದಳ್ಳಿ ಅಂಬಾಜಿ ಸುಗತೇಕರ ತಂಡದಿಂದ ಗೊಂದಳ್ಳಿ ಹಾಡು, ಮಡಿಕೇರಿಯ ನಾಟ್ಯ ಗಣಪತಿ ತಂಡದಿಂದ ಸುಗ್ಗಿಕುಣಿತ, ಸ್ಪೂರ್ತಿ ಮಹಿಳಾ ತಂಡದಿಂದ ಜಾನಪದ ಹಾಡು, ಸೋಮವಾರಪೇಟೆಯ ಕಾವೇರಿ ಕಲಾತಂಡದಿಂದ ಜನಪದ ನೃತ್ಯ, ಮೆಹರ್‌ ಮತ್ತು ತಂಡದಿಂದ ಜಾನಪದ ಗೀತೆ, ಹಿರಿಯ ಕಲಾವಿದೆ ರಾಣಿಮಾಚಯ್ಯ ತಂಡದಿಂದ ಉಮ್ಮತ್ತಾಟ್‌, ವೀರಾಜಪೇಟೆಯ ವಿಲಿನಾ ಮತ್ತು ತಂಡದಿಂದ ಕ್ರೆçಸ್ತ ಧರ್ಮದ ಜಾನಪದ ನೃತ್ಯ, ರಾಜ್ಯ ಪ್ರಶಸ್ತಿ ವಿಜೇತ ಬಾಳೆಲೆಯ ಜೇನುಕುರುಬರ ಮರಿ ಮತ್ತು ದಾಸಿ ತಂಡದಿಂದ ಸೋರೆಬುರುಡೆ ನೃತ್ಯ, ತೋರ ಗ್ರಾಮದ ಶಾರದಾ ಮತ್ತು ತಂಡದಿಂದ ಉರ್‌ಟಿ ಕೊಟ್ಟ್ ನೃತ್ಯ, ಬಿ.ಆರ್‌.ಸತೀಶ್‌ , ಟಿ.ಡಿ.ಮೋಹನ್‌ ತಂಡದಿಂದ ಜಾನಪದ ಕಲಾಕುಂಚ ಗಾನ, ಸಂಪಾಜೆಯ ಚಡಾವುನ ನೇತಾಜಿ ಗೆಳೆಯರ ಬಳಗದಿಂದ ಕಂಗೀಲು ನೃತ್ಯ, ಪುತ್ತೂರಿನ ಕೊಂಬೆಟ್ಟುವಿನ ಮರಾಠೆ ಯುವ ವೇದಿಕೆಯಿಂದ ಕಂಸಾಳೆ ನೃತ್ಯ, ಶಾಂತಳ್ಳಿಯ ಬಿ.ಎ.ಗಣೇಶ್‌ ಅವರಿಂದ ಜಾನಪದ ಹಾಡು, ಸೋಮವಾರಪೇಟೆಯ ಪ್ರಗತಿ ಪರ ಮಹಿಳಾ ವೇದಿಕೆಯಿಂದ ವಾಲಗ ನೃತ್ಯ, ಕಡಗದಾಳು ಸರ್ಕಾರಿ ಶಾಲಾ ಮಕ್ಕಳಿಂದ ಕೊಡವ ಜಾನಪದ ನೃತ್ಯ, ಮಡಿಕೇರಿಯ ಹ್ಯಾರೀಸ್‌ ಮತ್ತು ತಂಡದಿಂದ ದಫ್ ನೃತ್ಯ ಭಾಗಮಂಡಲದ ಮಿಲನಾ ಮತ್ತು ತಂಡದಿಂದ ಜಾನಪದ ವೈಭವ, ಮಡಿಕೇರಿಯ ಸೋನು ಪ್ರೀತಂ ತಂಡದಿಂದ ಜಾನಪದ ಗೀತಗಾಯನ, ಮಡಿಕೇರಿಯ ಜನರಲ್‌ ತಿಮ್ಮಯ್ಯ ಪಬ್ಲಿಕ್‌ ಶಾಲಾ ಮಕ್ಕಳಿಂದ ಸುಗ್ಗಿ ನೃತ್ಯ, ಭಾಗಮಂಡಲದ ಜ್ಞಾನೋದಯ ಶಾಲಾ ತಂಡದಿಂದ ಸೋಲಿಗರ ನೃತ್ಯ, ಮಾಲ್ದಾರೆಯ ಮುತ್ತಪ್ಪ ತಂಡದಿಂದ ಚಂಡೆವಾದ್ಯ ಸೇರಿದಂತೆ ಮತ್ತಷ್ಟು ತಂಡಗಳಿಂದ ಅಂದು ಮಧ್ಯಾಹ್ನ 12.30 ರಿಂದ ಸುಮಾರು 4 ಗಂಟೆಗಳ ಜಾನಪದ ವೈಭವ ಪ್ರದರ್ಶನ ನೀಡಲಿವೆ ಎಂದರು.ಎಚ್‌.ಟಿ.ಅನಿಲ್‌ ಅಂಬೆಕಲ್‌ ಕುಶಾಲಪ್ಪ, ಮುನೀರ್‌ ಅಹ್ಮದ್‌, ಚಂದ್ರಮೋಹನ್‌ ಪಸ್ಥಿತರಿದ್ದರು.

ಸಾಧಕರಿಗೆ ಸನ್ಮಾನ
ಇದೇ ಸಂದರ್ಭ ಸಂಗೀತ ಕ್ಷೇತ್ರದ ಸಾಧಕ ಚೆಕ್ಕೇರ ತ್ಯಾಗರಾಜ್‌, ಕನ್ನಡ ಭಾಷಾ ಸಾಧಕ ಬಿ.ಎಸ್‌. ಲೋಕೇಶ್‌ಸಾಗರ್‌ ಹಾಗೂ ಸಾಹಿತ್ಯ ಸೇವೆಗಾಗಿ ಮನೆಮನೆ ಕವಿಗೋಷ್ಠಿ ಖ್ಯಾತಿಯ ವೈಲೇಶ್‌ ಅವರನ್ನು ಸಮ್ಮಾನಿಸಲಾಗುವುದು ಎಂದು ತಿಳಿಸಿದರು.ಸಂಜೆ ತಿಮ್ಮೇಗೌಡ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಹಾಗೂ ರಂಗಭೂಮಿ ಕಲಾವಿದ ಅಡ್ಡಂಡ ಸಿ.ಕಾರ್ಯಪ್ಪ ಅವರು ಮುಖ್ಯ ಭಾಷಣ ಮಾಡಲಿದ್ದಾರೆ. ಜಾನಪದ ಉತ್ಸವಕ್ಕೆ ಸುಮಾರು 4.50 ಲಕ್ಷ ರೂ. ವೆಚ್ಚವಾಗುವ ನಿರೀಕ್ಷೆಯಿದ್ದು, ಮಡಿಕೇರಿ ನಗರ ದಸರಾ ಸಮಿತಿಯು 1.50 ಲಕ್ಷ ರೂ.ಅನುದಾನ ನೀಡುವ ಭರವಸೆಯಿತ್ತಿದೆ ಎಂದು ಅನಂತಶಯನ ನುಡಿದರು.

ಟಾಪ್ ನ್ಯೂಸ್

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Man enters church and chants Jai Shri Ram in Meghalaya: Case registered

Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್‌ ಘೋಷಣೆ: ಕೇಸು ದಾಖಲು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

Central government approves land for Manmohan Singh memorial

Memorial: ಮನಮೋಹನ್‌ ಸಿಂಗ್‌ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Man enters church and chants Jai Shri Ram in Meghalaya: Case registered

Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್‌ ಘೋಷಣೆ: ಕೇಸು ದಾಖಲು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.