ಸಾಲಬಾಧೆ: ವೃದ್ಧ ದಂಪತಿ ನೇಣಿಗೆ ಶರಣು 


Team Udayavani, Dec 6, 2018, 10:19 AM IST

suicide.jpg

ಸೋಮವಾರಪೇಟೆ: ಸಾಲಬಾಧೆಯಿಂದ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ತಾಕೇರಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಗ್ರಾಮದ ಕಾಫಿ ಬೆಳೆಗಾರರಾದ ಎಸ್‌.ಎಂ. ಅಪ್ಪಯ್ಯ (81), ಪತ್ನಿ ಬೊಳ್ಳಮ್ಮ (75) ಮೃತಪಟ್ಟವರು. ಬುಧವಾರ ಮಧ್ಯಾಹ್ನದ ವೇಳೆಗೆ ಘಟನೆ ನಡೆದಿದೆ. ಏಣಿಯೊಂದಿಗೆ ಪಕ್ಕದ ಕಾಫಿ ತೋಟಕ್ಕೆ ತೆರಳಿದ ದಂಪತಿ ಸಿಲ್ವರ್‌ ಮರ ಹಾಗೂ ಹುಳಿ ಮರಕ್ಕೆ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ.

ವೃದ್ಧ ದಂಪತಿಯೊಂದಿಗೆ ಅವರ ಮಗ-ಸೊಸೆ ವಾಸವಾಗಿದ್ದು, ಬುಧವಾರ ಬೆಳಗ್ಗೆ ಸೋಮವಾರ ಪೇಟೆ ಯಲ್ಲಿನ ಮದುವೆ ಸಮಾರಂಭಕ್ಕೆ ತೆರಳಿದ್ದರು.  ಅನಂತರ ದಂಪತಿ ಈ ಕೃತ್ಯ ಎಸಗಿದ್ದಾರೆ. ಸಂಜೆ ಮರಳಿದ ಮಗ-ಸೊಸೆ ಮನೆ ಯಲ್ಲಿ ಹಿರಿಯರನ್ನು ಕಾಣದಿದ್ದಾಗ ಕುಟುಂಬಿಕರೊಂದಿಗೆ ಸೇರಿ ಹುಡು ಕಾಟ ಆರಂಭಿಸಿದರು. ಆಗ ಸಮೀಪದ ಕಾಫಿ ತೋಟದಲ್ಲಿ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಶವಗಳು ಪತ್ತೆಯಾದವು. ಸೋಮವಾರಪೇಟೆ ವೃತ್ತನಿರೀಕ್ಷಕ ನಂಜುಂಡೇಗೌಡ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಮೃತರು ಓರ್ವ ಪುತ್ರ ಹಾಗೂ  6 ಮಂದಿ ಪುತ್ರಿಯರನ್ನು ಅಗಲಿದ್ದಾರೆ. ಪುತ್ರಿಯರೆಲ್ಲ ವಿವಾಹವಾಗಿ ಬೇರೆಡೆ ನೆಲೆಸಿದ್ದಾರೆ.

ಮಳೆಯಿಂದ  ಹಾನಿ: ಸಾಲ ಮರುಪಾವತಿ ಚಿಂತೆ
ಪ್ರಕೃತಿ ವಿಕೋಪದಿಂದ ಕೃಷಿ ಫ‌ಸಲು ಹಾಳಾಗಿದ್ದು, ಕಾಫಿ, ಕಾಳು ಮೆಣಸು ಫ‌ಸಲು ನಾಶವಾಗಿದೆ. ಐಗೂರು ಕೃಷಿಪತ್ತಿನ ಸಹಕಾರ ಸಂಘದಲ್ಲಿ 4 ಲಕ್ಷ ರೂ. ಸಾಲ ಇದ್ದು, ಸಾಲ ಮರುಪಾವತಿಯ ಬಗ್ಗೆ ತಂದೆ-ತಾಯಿ ಆತಂಕಗೊಂಡಿದ್ದರು ಎಂದು ಪುತ್ರ ಕಾಳಪ್ಪ ಸೋಮವಾರಪೇಟೆ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

1-sun

Goa; ಸನ್ ಬರ್ನ್ ಫೆಸ್ಟಿವಲ್ ನಲ್ಲಿ ಕುಸಿದು ಬಿದ್ದು ಯುವಕ ಸಾ*ವು!

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

1-ewewq

Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್

bsf

2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kasaragodu: ಹೊಳೆಯಲ್ಲಿ ಮುಳುಗಿ ಮೂವರು ಬಾಲಕರ ಸಾವು

arrest-woman

Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ

2

Kasaragod: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Untitled-1

Kasaragod Crime News: ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ

Court-1

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರ ಕೊ*ಲೆ ಪ್ರಕರಣ: 14 ಮಂದಿ ತಪ್ಪಿತಸ್ಥರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

de

Malpe: ತೆಂಕನಿಡಿಯೂರು; ತೀವ್ರ ಅಸ್ವಸ್ಥಗೊಂಡ ವ್ಯಕ್ತಿ ಸಾವು

4

Udupi: ಗಾಂಜಾ ಮಾರಾಟ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.