ಕುಶಾಲನಗರದ ವರೆಗೆ ಮಾತ್ರ ರೈಲು: ಪ್ರತಾಪ್ ಸಿಂಹ
Team Udayavani, Sep 1, 2017, 7:30 AM IST
ಮಡಿಕೇರಿ: ಈಗಾಗಲೇ ಸಮೀಕ್ಷೆ ನಡೆಸಿರುವಂತೆ ಕುಶಾಲನಗರ ದವರೆಗೆ ಮಾತ್ರ ರೈಲು ಮಾರ್ಗ ನಿರ್ಮಾ ಣವಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ಸ್ಪಷ್ಟ ಪಡಿಸಿದ್ದಾರೆ. ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊಡಗು ಮಾರ್ಗವಾಗಿ ಕೇರಳಕ್ಕೆ ರೈಲು ಸಂಪರ್ಕವನ್ನು ಕಲ್ಪಿಸಲಾಗುತ್ತಿದೆ ಎಂಬ ಸುಳ್ಳು ಮಾಹಿತಿ ಹರಡುತ್ತಿದ್ದು, ಇದರಿಂದ ಕೆಲವು ಕಡೆ ಪ್ರತಿಭಟನೆ ನಡೆಯುತ್ತಿದೆ. ಈಗಾಗಲೇ ಸಮೀಕ್ಷೆ ಮಾಡಲಾಗಿರುವಂತೆ ಕುಶಾಲನಗರದವರೆಗೆ ಮಾತ್ರ ರೈಲು ಬರಲಿದೆ ಎಂದು ಸಂಸದರು ಹೇಳಿದರು.
ಮೈಸೂರು-ಬಂಟ್ವಾಳ ರಸ್ತೆಯನ್ನು ರಾಜ್ಯ ಹೆದ್ದಾರಿಯಿಂದ ರಾಷ್ಟ್ರೀಯ ಹೆದ್ದಾರಿ ಎಂದು ಪ್ರಕಟಿಸಲಾಗಿದೆ. ಈ ರಸ್ತೆಯನ್ನು ಮೈಸೂರಿನಿಂದ ಮಡಿಕೇರಿ ವರೆಗೆ ನಾಲ್ಕು ಪಥ, ಹಾಗೆಯೇ ಚೆನ್ನರಾಯಪಟ್ಟಣ, ಸೋಮವಾರಪೇಟೆ, ಮಡಿಕೇರಿ, ವಿರಾಜಪೇಟೆ, ಮಾಕುಟ್ಟ ಮಾರ್ಗ ರಸ್ತೆ ಮತ್ತು ಮಡಿಕೇರಿ-ಭಾಗಮಂಡಲ ರಸ್ತೆಯನ್ನು ಸಹ ಮೇಲ್ದರ್ಜೆಗೇರಿಸಲು ಪರಿಶೀಲಿಸಲಾಗುತ್ತಿದೆ ಎಂದು ಸಂಸದರು ತಿಳಿಸಿದರು.
ಸೂಕ್ಷ್ಮ ಪರಿಸರ ತಾಣ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ಸದ್ಯದಲ್ಲೇ ಕಂದಾಯ, ಅರಣ್ಯ ಹಾಗೂ ಜಿಲ್ಲೆಯ 53 ಗ್ರಾಮಗಳ ವ್ಯಾಪ್ತಿಯ ಸಾರ್ವಜನಿಕರ ಸಭೆಯನ್ನು ಶೀಘ್ರ ಆಹ್ವಾನಿಸಲಾಗುವುದು ಎಂದು ಸಂಸದರು ಇದೇ ಸಂದರ್ಭದಲ್ಲಿ ಪ್ರಕಟಿಸಿದರು.
ಕೊಡಗು ಜಿಲ್ಲೆ ಬೆಟ್ಟಗುಡ್ಡ ಪ್ರದೇಶವಾಗಿರುವುದರಿಂದ ಇನ್ನೂ ಕೆಲವು ಗ್ರಾಮಗಳಿಗೆ ದೂರ ಸಂಪರ್ಕ ಸೌಲಭ್ಯ ಕಲ್ಪಿಸಿಲ್ಲ. ಆದ್ದರಿಂದ ಹಮ್ಮಿಯಾಲ, ಮುಟ್ಲು ಮತ್ತಿತರ ಕಡೆಗಳಲ್ಲಿ ಕೂಡಲೇ ಮೊಬೈಲ್ ಟವರ್ ಅಳವಡಿಸುವಂತೆ ಭಾರತ ಸಂಚಾರ ನಿಗಮ ನಿಯಮಿತ ಅಧಿಕಾರಿಗಳಿಗೆ ತಿಳಿಸಿದರು.
ದಿಡ್ಡಳ್ಳಿ ಗಿರಿಜನರಿಗೆ ತ್ವರಿತವಾಗಿ ಮನೆ ನಿರ್ಮಿಸಿ ಕೊಡಬೇಕು. ಇತರ ಆದಿವಾಸಿಗಳಿಗೂ ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ತಿಳಿಸಿದರು. ದಿಡ್ಡಳ್ಳಿಯ ಆದಿವಾಸಿಗಳಿಗೆ ಒದಗಿಸಲಾಗಿರುವ ಸೌಲಭ್ಯ ಪರಿಶೀಲನೆಗಾಗಿ ಸಮಿತಿ ಸದಸ್ಯರ ಜೊತೆ ಭೇಟಿ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ತೊಡಿಕಾನ-ಭಾಗಮಂಡಲ ರಸ್ತೆ ಸಂಪರ್ಕವನ್ನು ಶೀಘ್ರವಾಗಿ ಪೂರ್ಣ ಗೊಳಿಸುವಂತೆ ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ಗೆ ಸಂಸದರು ಸ್ಪಷ್ಟ ನಿರ್ದೇಶನ ನೀಡಿದರು. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಷ್ಟಾಗಿ ಪ್ರಗತಿ ಸಾಧಿಸದಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿದ ಸಂಸದರು, ಈ ಯೋಜನೆಯಡಿ ಹೆಚ್ಚಿನ ಹಣ ಬಳಕೆ ಮಾಡಿಕೊಂಡು ಅಭಿವೃದ್ಧಿಯತ್ತ ಕಾರ್ಯ ಕ್ರಮಗಳನ್ನು ರೂಪಿಸಬೇಕಿದೆ ಎಂದರು.
ಯಾವ ಯಾವ ಗ್ರಾ.ಪಂ.ಗಳಲ್ಲಿ ಸ್ವಂತ ಕಟ್ಟಡವಿಲ್ಲ ಅಲ್ಲಿ ಜಾಗ ಗುರುತಿಸಿ ಸ್ವಂತ ಕಟ್ಟಡ ನಿರ್ಮಾಣ ಮಾಡಿಕೊಳ್ಳುವುದು. ಇನ್ನೂ ಸರ್ಕಾರದ ವಿವಿಧ ಕಾರ್ಯಕ್ರಮಗಳಿಗೆ ಸ್ವಂತ ಜಾಗ ಮಾಡಿಕೊಳ್ಳುವತ್ತ ಗಮನ ಹರಿಸಬೇಕಿದೆ ಎಂದು ಲೋಕಸಭಾ ಸದಸ್ಯರು ಹೇಳಿದರು.
ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ| ರಿಚರ್ಡ್ ವಿನ್ಸೆಂಟ್ ಡಿ’ಸೋಜಾ ಅವರು ಜಿಲ್ಲೆ
ಯಲ್ಲಿ ವಸತಿ ಯೋಜನೆಗೆ ಪ್ರಥಮ ಆದ್ಯತೆ ನೀಡಲಾಗಿದೆ. ನಿವೇಶನದ ಕೊರತೆ ಇಲ್ಲ. ಆದರೆ ತಾ.ಪಂ.ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಪಿಡಿಒ ಗಳು ಕಂದಾಯ ಇಲಾಖೆ ಅಧಿಕಾರಿ ಗಳೊಂದಿಗೆ ಸೇರಿ ಜಾಗ ಗುರುತಿಸುವತ್ತ ಗಮನಹರಿಸಬೇಕಿದೆ ಎಂದು ಅವರು ನಿರ್ದೇಶನ ನೀಡಿದರು.
ಈ ಸಂಬಂಧ ಮಾತನಾಡಿದ ಪ್ರತಾಪ್ ಸಿಂಹ ಅವರು ಜಿಲ್ಲೆಯಲ್ಲಿ ನಿವೇಶನಕ್ಕಾಗಿ ಬೇಡಿಕೆ, ಮನೆ ನಿರ್ಮಾಣ ಹಾಗೂ ಶೌಚಾಲಯ ನಿರ್ಮಾಣ ಸಂಬಂಧಿಸಿದಂತೆ ಎಷ್ಟು ಪ್ರಗತಿಯಾಗಿದೆ, ಎಷ್ಟು ಬೇಕಿದೆ, ಬಾಕಿ ಇರುವ ಕಾಮಗಾರಿ ಎಷ್ಟು ಎಂಬ ಬಗ್ಗೆ ಕೂಡಲೇ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಮಿತಿ ಸದಸ್ಯರಾದ ತೆಕ್ಕಡೆ ಶೋಭಾ ಮೋಹನ್, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕೆ.ರಾಮಪ್ಪ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಬಿ.ಆರ್.ಗಿರೀಶ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಾಯಾ ದೇವಿ ಗಲಗಲಿ, ಉಪ ಅರಣ್ಯ ಸಂರಕ್ಷಣಾ ಧಿಕಾರಿಗಳಾದ ಕ್ರಿಸ್ತರಾಜ, ಜಯ, ಆಹಾರ ಇಲಾಖೆ ಉಪ ನಿರ್ದೇಶಕರಾದ ಪುಟ್ಟಸ್ವಾಮಿ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಇಬ್ರಾಹಿಂ, ನಾನಾ ಇಲಾಖೆ ಅಧಿಕಾರಿಗಳು ತಮ್ಮ ಇಲಾಖಾ ವ್ಯಾಪ್ತಿಯ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.