“ನಾವಿರುವ ಕ್ಷೇತ್ರದಲ್ಲೇ ದೇಶಪ್ರೇಮ ಮೆರೆಯಬೇಕು’
Team Udayavani, Aug 31, 2019, 5:16 AM IST
ಮಡಿಕೇರಿ: ನಾವೆಲ್ಲರೂ ಸೈನಿಕರಾಗಲು ಸಾಧ್ಯವಿಲ್ಲ ಆದರೆ, ನಮ್ಮ ನಮ್ಮ ಕ್ಷೇತ್ರಗಳಲ್ಲಿ ಸೈನಿಕರಂತೆಯೇ ದೇಶ ಮೊದಲು ಎಂಬ ಭಾವನೆಯಿಂದ, ಶ್ರದ್ಧೆಯಿಂದ, ಪ್ರಾಮಾಣಿಕತೆಯಿಂದ ಕೆಲಸ ಮಾಡಿದಾಗ ಅದು ಕೂಡ ದೇಶ ಸೇವೆ ಎನಿಸಿಕೊಳ್ಳುತ್ತದೆ ಎಂದು ಮಂಡ್ಯದ ಸ್ತ್ರೀ ರೋಗ ತಜ್ಞ ಮತ್ತು ಶಸ್ತ್ರಚಿಕಿತ್ಸಕರೂ ಆಗಿರುವ ಡಾ| ಬಿ.ಕೆ.ಸುರೇಶ್ ಅವರು ಹೇಳಿದರು.
ಪ್ರಜ್ಞಾ ಕಾವೇರಿ ಮಡಿಕೇರಿ ಮತ್ತು ಅಖೀಲ ಭಾರತೀಯ ಸಾಹಿತ್ಯ ಪರಿಷತ್ ಕೊಡಗು ಘಟಕದ ಆಶ್ರಯದಲ್ಲಿ ನಗರದ ಕೊಡವ ಸಮಾಜ ಆವರಣದಲ್ಲಿ ಬುಧವಾರ ಸಂಜೆ ಆಯೋಜಿಸಲಾಗಿದ್ದ ಪತ್ರಕರ್ತ ಮಾಣಿಪಂಡ ಸಂತೋಷ್ ತಮ್ಮಯ್ಯ ಅವರ ಸಮರ ಭೈರವಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಕೃತಿ ಪರಿಚಯ ಮಾಡಿ ಅವರು ಮಾತನಾಡಿದರು.
ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಫೋರಂನ ಅಧ್ಯಕ್ಷ ನಿವೃತ್ತ ಕರ್ನಲ್ ಕಡ್ರತಂಡ ಸುಬ್ಬಯ್ಯ ಅವರು, ಈ ಪುಸ್ತಕ ಎಲ್ಲರಿಗೂ ಪ್ರಿಯವಾಗಬೇಕು. ಎರಡು ವರ್ಷಗಳ ಅಧ್ಯಯನದಲ್ಲಿ ಸೇನಾಧಿಕಾರಿಗಳನ್ನು ಸೈನಿಕರನ್ನು ಸಂದರ್ಶಿಸಿ ಅವರ ಜೀವನ ಕಥೆಯನ್ನು ವಿಮರ್ಶಿಸಿ ಬರೆದ ಕೃತಿ ಇದಾಗಿದ್ದು, ಈ ಪುಸ್ತಕವನ್ನು ನಮ್ಮ ಯುವ ಪೀಳಿಗೆ ಓದಿ ಪ್ರೇರಿತರಾಗಿ ಸೈನ್ಯಕ್ಕೆ ಸೇರುವಂತಾಗಲಿ ಎಂದು ಆಶಿಸಿದರು.
ಮುಖ್ಯ ಅತಿಥಿಯಾಗಿದ್ದ ಅಜಿತ್ ಹನಮಕ್ಕನವರ್, ನಾವು ಯುದ್ಧವಲ್ಲದ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿದ್ದು, ನಮ್ಮ ಸಂಸ್ಕೃತಿ, ಪರಂಪರೆ, ಹಬ್ಬ, ಹರಿದಿನಗಳನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸುವುದು ಮಾತ್ರವಲ್ಲದೆ, ನಮ್ಮ ಯುವ ಪೀಳಿಗೆಗೆ ನಮ್ಮ ಪರಂಪರೆ, ಪದ್ಧತಿಗಳನ್ನು ಹೇಳಿಕೊಡುವ ಮೂಲಕ ಇದನ್ನು ಎದುರಿಸಬೇಕಾಗಿದೆ ಎಂದು ನುಡಿದರು.
ಅಧ್ಯಕ್ಷತೆ ವಹಿಸಿದ್ದ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೊಂಗಂಡ ಎಸ್.ದೇವಯ್ಯ ಮಾತನಾಡಿ, ಈ ಪುಸ್ತಕ ದೇಶದ ಎಲ್ಲಾ ಭಾಷೆಗಳಲ್ಲಿ ಪ್ರಕಟಗೊಳ್ಳಬೇಕು. ಸಂತೋಷ್ ತಮ್ಮಯ್ಯ ಅವರಂತಹ ಸಮವಸ್ತ್ರ ಇಲ್ಲದ ಸೈನಿಕರು ಹೆಚ್ಚು ಸಂಖ್ಯೆಯಲ್ಲಿ ಕಂಡು ಬರಬೇಕು. ಸಮರ ಭೈರವಿ ಕೂಡ ದೇಶ ಸೇವೆಯ ಒಂದು ಭಾಗವೇ ಆಗಿದ್ದು ಇದನ್ನು ವಿಶೇಷವಾಗಿ ನಮ್ಮ ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಪ್ರಚುರಪಡಿಸಬೇಕೆಂದು ಕರೆ ನೀಡಿದರು.
ಬಹಳಷ್ಟು ವರ್ಷಗಳಿಂದ ನಮ್ಮ ದೇಶದ ಆಡಳಿತ ವ್ಯವಸ್ಥೆ ಸಾಕಷ್ಟು ಸುಳ್ಳುಗಳನ್ನು ಹೇಳುತ್ತಾ, ನಮ್ಮನ್ನೂ ಕತ್ತಲ್ಲೆಯಲ್ಲಿಟ್ಟಿತ್ತು ಈಗ ಒಂದೊಂದೇ ಸತ್ಯಗಳು ಹೊರ ಬರುತ್ತಿದ್ದು ಈಗಲಾದರೂ ನಾವು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಹೇಳಿದರು.
ಅತಿಥಿ ಗಣ್ಯರು ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವ ಸಲ್ಲಿಸಿದರು. ರಮ್ಯಾ ಪ್ರಸಾದ್ ಮತ್ತು ರಾಧಿಕಾ ಪ್ರಾರ್ಥಿಸಿ¨ರು. ಲೇಖಕ ಮಾಣಿಪಂಡ ಸಂತೋಷ್ ತಮ್ಮಯ್ಯ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಚಿನ್ ಅವರು ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್
Social Media A/c: ಮಕ್ಕಳ ಸೋಷಿಯಲ್ ಮೀಡಿಯಾ ಖಾತೆಗೆ ಹೆತ್ತವರ ಒಪ್ಪಿಗೆ ಕಡ್ಡಾಯ?
Jagdeep Singh: ಈ ಸಿಇಒ ಪ್ರತಿದಿನ ಪಡೆಯುವ ಸಂಬಳ 48 ಕೋಟಿ ರೂ!…ಯಾರೀತ ಜಗದೀಪ್ ಸಿಂಗ್?
Punjalakatte: ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Anandapura: ಅಪರಿಚಿತ ವ್ಯಕ್ತಿಯ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.