“ಸರ್ವ ಸಮಸ್ಯೆ ನಿವಾರಣೆಗೆ ಜನಸಂಖ್ಯೆ ನಿಯಂತ್ರಣ ಅಗತ್ಯ’
Team Udayavani, Jul 13, 2018, 6:50 AM IST
ಮಡಿಕೇರಿ : ಸಾಮಾಜಿಕ ಮತ್ತು ಆರ್ಥಿಕ ಸಮಸ್ಯೆಗಳ ನಿವಾರಣೆಗೆ ಜನಸಂಖ್ಯೆಯನ್ನು ನಿಯಂತ್ರಿಸುವುದು ಅನಿವಾರ್ಯವೆಂದು ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಅಭಿಪ್ರಾಯಪಟ್ಟಿದ್ದಾರೆ.
ಜಿಲ್ಲಾ ಆಡಳಿತ ಮತ್ತು ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆ/ ಬೋಧಕ ಆಸ್ಪತ್ರೆ, ಜಿಲ್ಲಾ ಕಾನೂನು ಮತ್ತು ಸೇವಾ ಪ್ರಾಧಿಕಾರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಫ್.ಎಂ.ಕೆ.ಎಂ.ಸಿ. ಕಾಲೇಜು, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜು, ಸ್ವಯಂ ಸೇವಾ ಸಂಸ್ಥೆಗಳು, ರೋಟರಿ ಕ್ಲಬ್ ಮತ್ತು ಕಿ.ಮ.ಆ.ಸ. ತರಬೇತಿ ಕೇಂದ್ರ, ನೆಹರು ಯುವಕ ಕೇಂದ್ರ, ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ “ವಿಶ್ವ ಜನಸಂಖ್ಯಾ ದಿನಾಚರಣೆ’ಯನ್ನು ಕಾವೇರಿ ಕಲಾಕ್ಷೇತ್ರದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.
ಜನಸಂಖ್ಯೆ ಏರಿಕೆಯಿಂದಾಗಿ ದೇಶದ ಅಭಿವೃದ್ಧಿ ಕುಂಠಿತವಾಗುವ ಕಾರಣ ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕೆಂದರು.ಕೊಡಗು ಜಿಲ್ಲೆಯಲ್ಲಿ ಸಮತೋಲಿತ ಜನಸಂಖ್ಯೆಯಿದ್ದು ಕುಟುಂಬ ಕಲ್ಯಾಣ ಯೋಜನೆಗಳು ಉತ್ತಮವಾಗಿ ಅನುಷ್ಠಾನ ಗೊಂಡಿರುವುದಕ್ಕೆ ನಿದರ್ಶನವಾಗಿದೆ ಎಂದು ತಿಳಿಸಿದರು.
ನಗರಸಭೆ ಅಧ್ಯಕ್ಷರಾದ ಕಾವೇರಿ ಸೋಮಣ್ಣ, ಜಿ.ಪಂ. ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ| ಕೆ.ಸಿ. ದಯಾನಂದ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜನಸಂಖ್ಯಾ ನಿಯಂತ್ರಣಾ ಯೋಜನೆಯ ಕಾರ್ಯಕ್ರಮದ ಅನುಷ್ಠಾನದಲ್ಲಿ ಉತ್ತಮ ಕಾರ್ಯರ್ವಹಿಸಿದ ವೆÏದ್ಯರಾದ ಡಾ| ಚೇತನ್, ಶುಶ್ರೂಷಕಿಯರಾದ ಆಶಾ, ಸುಶೀಲಾ ಡಿ.ಎಂ., ವನಿತಾ ಹಾಗೂ ಆಶಾ ಕಾರ್ಯಕರ್ತರಾದ ರಮ್ಯಾ ಮತ್ತು ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಪದವಿ ಕಾಲೇಜುಗಳಲ್ಲಿ ನಡೆಸಿದ ಪ್ರಬಂಧ ಸ್ಪರ್ಧೆ ಹಾಗೂ ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಾದ ಅನ್‌ಸಿàರ, ಅಮರ್‌ಜಿತ್ ಎಚ್.ಜಿ., ಗಗನಾ ಬಿ.ಬಿ., ದೇವಯ್ಯ, ಸಭಾಸಂರಿನ್ ಇವರಿಗೆ ಜಿ.ಪಂ. ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ಆನಂದ್, ಆರ್. ಸಿ.ಎಚ್. ಅಧಿಕಾರಿ ಡಾ| ನೀಲೇಶ್ ಮಡಿಕೇರಿ ತಾಲೂಕು ಆರೋಗ್ಯಾಧಿಕಾರಿ ಡಾ| ಪಾರ್ವತಿ, ವೈದ್ಯರಾದ ಡಾ| ಮಂಜುನಾಥ್, ಆರೋಗ್ಯ ಇಲಾಖಾ ಸಿಬಂದಿ, ಆಶಾ ಕಾರ್ಯಕರ್ತೆಯರು ಇತರರು ಉಪಸ್ಥಿತರಿದ್ದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ| ಆನಂದ್ ಸ್ವಾಗತಿಸಿದರು. ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ರಮೇಶ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಭಾರತದ ಪ್ರಸ್ತುತ ಜನಸಂಖ್ಯೆ 135.42 ಕೋಟಿಯಾಗಿದ್ದು ವಿಶ್ವದ ಜನಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿದ್ದು, ವಿಶ್ವದ ಜನಸಂಖ್ಯೆಯ ಶೇ.17.74ರಷ್ಟು ಜನಸಂಖ್ಯೆ ಭಾರತದಲ್ಲಿದೆ. ಇದೇ ರೀತಿ ಜನಸಂಖ್ಯೆ ಏರಿಕೆಯಾಗುತ್ತಾ ಹೋದರೆ 2050ಕ್ಕೆ ಜನಸಂಖ್ಯೆಯಲ್ಲಿ ಚೀನಾವನ್ನು ಮೀರಿಸುತ್ತದೆ. ಆದ್ದರಿಂದ ಜನಸಂಖ್ಯಾ ಕುಟುಂಬ ಕಲ್ಯಾಣ ಯೋಜನೆಗಳ ಸುರಕ್ಷಿತ ವಿಧಾನಗಳನ್ನು ಅನುಸರಿಸಿ ಜನಸಂಖ್ಯೆಯನ್ನು ನಿಯಂತ್ರಿಸಲು ಮುಂದಾಗಬೇಕಿದೆ .
– ಡಾ| ರಾಜೇಶ್ ಸುರಗೀಹಳ್ಳಿ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.