“ಅಧಿಕಾರ ದಾಹದಿಂದ ವ್ಯವಸ್ಥೆ ಹಾಳು’
Team Udayavani, Aug 11, 2017, 7:25 AM IST
ಮಡಿಕೇರಿ: ಬಿಜೆಪಿಯ ಅಧಿಕಾರ ದಾಹ ಮಿತಿ ಮೀರಿರುವುದರಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗುತ್ತಿದೆ ಎಂದು ಟೀಕಿಸಿರುವ ಜಿಲ್ಲಾ ಕಾಂಗ್ರೆಸ್ ವಕ್ತಾರ ಟಾಟೂ ಮೊಣ್ಣಪ್ಪ, ಗುಜರಾತ್‌ನಲ್ಲಿ ಅಹಮ್ಮದ್ ಪಟೇಲ್ ಅವರಿಗೆ ದೊರೆತ್ತಿರುವ ಗೆಲುವು ಪ್ರಜಾಪ್ರಭುತ್ವ ವ್ಯವಸ್ಥೆಯ ಗೆಲುವು ಎಂದು ಅಭಿಪ್ರಾಯಪಟ್ಟಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು ಗುಜರಾತ್‌ನಲ್ಲಿ ನಡೆದ ರಾಜ್ಯಸಭಾ ಚುನಾಚಣೆಯಲ್ಲಿ ಕೇವಲ 2 ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಶಕ್ತವಾಗಿದ್ದ ಬಿಜೆಪಿ ಹಣಬಲ ಮತ್ತು ತೋಳ್ಬಲ ಪ್ರದರ್ಶಿಸುವ ಮೂಲಕ ಕೀಳು ಮಟ್ಟದ ರಾಜಕಾರಣವನ್ನು ಪ್ರದರ್ಶಿಸಿದೆ. ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಬೇಕೆಂದು ಕುತಂತ್ರ ನಡೆಸಿ ಇದೀಗ ಫಲಿತಾಂಶ ಬಂದ ಅನಂತರ ಹತಾಶಗೊಂಡಿದೆ ಎಂದು ಟೀಕಿಸಿದ್ದಾರೆ.
ಮೂರನೇ ಅಭ್ಯರ್ಥಿಯನ್ನು ಗೆಲ್ಲಿಸಲೇಬೇ ಕೆಂದು ವಾಮಮಾರ್ಗದಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿ ರಾಜಕೀಯ ಸ್ಥೆ „ರ್ಯ ವನ್ನು ಕುಗ್ಗಿಸುವ ಪ್ರಯತ್ನವನ್ನು ಬಿಜೆಪಿ ಮಂದಿ ಮಾಡಿದರು. ಈ ಕುತಂತ್ರ ರಾಜಕಾರಣ ಇನ್ನು ಮುಂದೆ ನಡೆಯುವುದಿಲ್ಲ ಎನ್ನುವುದನ್ನು ಗುಜರಾತ್ ಚುನಾವಣೆಯ ಫಲಿತಾಂಶ ಸಾಬೀತು ಪಡಿಸಿದೆ.
ಕಾಂಗ್ರೆಸ್ ಪಕ್ಷದ ನೇತೃತ್ವ ವಹಿಸಿದ್ದ ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಆಸ್ತಿಗಳ ಮೇಲೆ ಐಟಿ ದಾಳಿ ನಡೆಸುವ ಮೂಲಕ ರಾಜಕೀಯ ಷಡ್ಯಂತ್ರ ನಡೆಸಲಾಯಿತು. ಈ ಸಂದಿಗ್ಧ ಪರಿಸ್ಥಿತಿಯ ನಡುವೆಯೂ ಅಹಮ್ಮದ್ ಪಟೇಲ್ ಅವರು ಗೆಲುವು ಸಾಧಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಿಕ್ಕ ಜಯವಾಗಿದೆ ಮತ್ತು ಬಿಜೆಪಿಗೆ ತಕ್ಕ ಪಾಠವಾಗಿದೆ ಎಂದು ಟಾಟೂ ಮೊಣ್ಣಪ್ಪ ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ
Kasaragod: ನಗ-ನಗದು ಕಳವು; ಆರೋಪಿ ಬಂಧನ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್ ಮೂಲಕ ನಕ್ಸಲ್ ಸೋಮನ್ ವಿಚಾರಣೆ
Kasaragod: 300 ಪವನ್ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.