ಬೇಸಿಗೆ ರೋಗಗಳ ಮುನ್ನೆಚ್ಚರಿಕೆ ಅಗತ್ಯ: ಡಾ| ಮೋಹನ್
Team Udayavani, Mar 1, 2019, 1:00 AM IST
ಮಡಿಕೇರಿ: ಬೇಸಿಗೆ ಅವಧಿಯಲ್ಲಿ ನೀರಿನಿಂದ ಹರಡುವ ಕಾಲರಾ, ಕರುಳು ಬೇನೆ, ವಾಂತಿಬೇಧಿ, ಅತಿಸಾರ ಭೇದಿ, ಕಾಮಾಲೆ ಮತ್ತಿತರ ರೋಗಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘ ಸಹಕಾರದಲ್ಲಿ ನಗರದ ಡಿಎಚ್‌ಒ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಮಾಧ್ಯಮದವರಿಗೆ ಏರ್ಪಡಿಸಲಾಗಿದ್ದ ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರ್.ಸಿ.ಎಚ್. ಅಧಿಕಾರಿ ಡಾ.ಆನಂದ್ ಅವರು ಮಾತನಾಡಿ ಪ್ರತಿಯೊಬ್ಬರೂ ಸುರಕ್ಷಿತ ಆರೋಗ್ಯದ ಕಡೆ ಗಮನಹರಿಸಬೇಕು ಎಂದರು. ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ| ಎಂ.ಶಿವಕುಮಾರ್ ಅವರು ಮಾತನಾಡಿ ಮಲೇರಿಯಾ, ಡೆಂಗ್ಯೂ ಹಾಗೂ ಚಿಕನ್‌ಗುನ್ಯಾ ನಿಯಂತ್ರಣ ಬಗ್ಗೆ ಗಮ® ಹರಿಸಬೇಕು. ಎಂದು ತಿಳಿಸಿದರು. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎ.ಸಿ.ಶಿವಕುಮಾರ್ ಅವರು ಮಾಹಿತಿ ನೀಡಿ ಎಚ್.ಐ.ವಿ. ಏಡ್ಸ್ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದರು. ಮನೋವೈದ್ಯ ಡೆವಿನ್ ಅವರು ಮಾಹಿತಿ ನೀಡಿ ಮಾನಸಿಕ ಆರೋಗ್ಯದ ಬಗ್ಗೆ ಪ್ರತಿಯೊಬ್ಬರಲ್ಲೂ ತಿಳುವಳಿಕೆ ಇರಬೇಕು ಎಂದರು.
ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಆಯುಷ್ಮಾನ್ ಭಾರತ ಹಾಗೂ ಆರೋಗ್ಯ ಕರ್ನಾಟಕ ಕಾರ್ಯಕ್ರಮ ಜಾರಿಗೊಳಿಸಿದೆ ಎಂದು ಸಮನ್ವಯಾಧಿಕಾರಿ ತೇಜಸ್ ಅವರು ಮಾಹಿತಿ ನೀಡಿದರು.
ಗರ್ಭಿಣಿಯರು ಹಾಗೂ ಮಕ್ಕಳಿಗೆ ಸಿಗುವ ಸೇವಾ ಸೌಲಭ್ಯಗಳು, ಪ್ರಧಾನ ಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ, ತಾಯಿ ಮಗುವಿನ ಆರೋಗ್ಯಕ್ಕೆ ಆಧಾರ, ಅಪೌಷ್ಠಿಕ ಮಕ್ಕಳ ಪುನಶ್ಚೇತನ ಕೇಂದ್ರ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ, ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ, ಗರ್ಭಿಣಿಯರಿಗೆ, ಶಿಶುಗಳಿಗೆ ಹಾಗೂ ಮಕ್ಕಳಿಗೆ ರಾಷ್ಟ್ರೀಯ ಚುಚ್ಚು ಮದ್ದಿನ ವೇಳಾಪಟ್ಟಿ, ಮಲೇರಿಯಾ ವಿರೋಧ ದಿನ ಮಾಸಾಚರಣೆ, ಡೆಂಗ್ಯೂ ಜ್ವರ ನಿಯಂತ್ರಣ, ಆರೋಗ್ಯ ಭಾರತ, ಕ್ಷಯ ಮುಕ್ತ ಭಾರತ, ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನ ಕಾರ್ಯಕ್ರಮ, ದಂತ ಭಾಗ್ಯ ಯೋಜನೆ ಹೀಗೆ ಹಲವು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷೆ ಸವಿತಾ ರೈ , É ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್ ವಾರ್ತಾಧಿಕಾರಿ ಚಿನ್ನಸ್ವಾಮಿ ದೇವರಾಜು, ಸುನಿತಾ, ಉಪಸ್ಥಿತರಿದ್ದರು. ರಮೇಶ್ ಸ್ವಾಗತಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.