ಅಲ್ಪಸಂಖ್ಯಾಕರ ಘಟಕದ ಅಧ್ಯಕ್ಷ ಹ್ಯಾರಿಸ್ ಅಧಿಕಾರ ಸ್ವೀಕಾರ
Team Udayavani, Jun 3, 2019, 6:10 AM IST
ಮಡಿಕೇರಿ:ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾಕರ ಘಟಕದ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಎ.ಕೆ.ಹ್ಯಾರಿಸ್ ಅಧಿಕಾರ ಸ್ವೀಕರಿಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜ್ಯ ಹಾಗೂ ಜಿಲ್ಲಾ ನಾಯಕರಿಂದ ಕಾಂಗ್ರೆಸ್ ಧ್ವಜ ಸ್ವೀಕರಿಸುವ ಮೂಲಕ ಹ್ಯಾರಿಸ್ ಅಧಿಕಾರ ಪಡೆದರು. ಅಲ್ಪಸಂಖ್ಯಾಕ ಘಟಕಗಳನ್ನು ಸಂಘಟಿಸುವ ಮೂಲಕ ಪಕ್ಷಕ್ಕೆ ಬಲ ತುಂಬುವುದಾಗಿ ತಿಳಿಸಿದರು. ಹಿರಿಯರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುವುದಾಗಿ ಅವರು ತಿಳಿಸಿದರು. ಅಲ್ಪಸಂಖ್ಯಾತ ಘಟಕದ ನಿರ್ಗಮಿತ ಅಧ್ಯಕ್ಷ ಹಾಗೂ ವಕ್ಫ್ ಮಂಡಳಿಯ ಅಧ್ಯಕ್ಷ ಕೆ.ಎ.ಯಾಕುಬ್ ಮಾತನಾಡಿ ಅಲ್ಪಸಂಖ್ಯಾಕರಿಗಾಗಿ ಸರ್ಕಾರದ ಮೂಲಕ ಲಭ್ಯವಿರುವ ಯೋಜನೆಗಳ ಲಾಭವನ್ನು ತಮ್ಮ ಅಧಿಕಾರವಧಿಯಲ್ಲಿ ಅರ್ಹ ಫಲಾನುಭವಿಗಳಿಗೆ ದೊರಕಿಸಿ ಕೊಡುವಲ್ಲಿ ಯಶಸ್ವಿಯಾಗಿರುವುದಾಗಿ ತಿಳಿಸಿದರು. ರಾಜ್ಯ ಉಪಾಧ್ಯಕ್ಷ ಹ್ಯಾರಿಸ್ ಎಡಪಾಲ, ಸಂಯೋಜಕ ಎಂ.ಎಉಸ್ಮಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಕೆಪಿಸಿಸಿ ಸದಸ್ಯ ಟಿ.ಪಿ.ರಮೇಶ್, ಸಂಯೋಜಕ ಮಹಮ್ಮದ್ ಶಫಿ, ಪ್ರಮುಖರಾದ ಶೌಕತ್ ಅಲಿ, ಬಷೀರ್, ನಾಪೋಕ್ಲು ಗ್ರಾ.ಪಂ ಅಧ್ಯಕ್ಷ ಇಸ್ಮಾಯಿಲ್, ಅಲ್ಪಸಂಖ್ಯಾತರ ಘಟಕದ ಮ್ಯಾಥ್ಯು, ಫ್ಯಾಟ್ರಿಕ್, ವಾಹಿದ್, ಕೆಪಿಸಿಸಿ ಕಾರ್ಯದರ್ಶಿ ನಾರಾಯಣ ಮತ್ತಿತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರುಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.