ಕಸ ಎಸೆಯುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಬೋಪಯ್ಯ
ಚೆನ್ನಯ್ಯನಕೋಟೆಯಲ್ಲಿ ಕಸ ವಿಂಗಡಣೆ ಘಟಕಕ್ಕೆ ಚಾಲನೆ
Team Udayavani, Dec 20, 2019, 5:47 AM IST
ಮಡಿಕೇರಿ: ಕಳೆದ ನಾಲ್ಕು ವರ್ಷಗಳ ಹಿಂದೆಯೇ ಕೊಡಗನ್ನು ಫ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಘೋಷಣೆ ಮಾಡಲಾಗಿದೆ. ಹೀಗಿದ್ದೂ ಎಲ್ಲೆಂದರಲ್ಲಿ ಪ್ಲಾಸ್ಟಿಕ್, ಒಣಕಸವನ್ನು ಎಸೆಯುವ ಅಭ್ಯಾಸವನ್ನು ಬಿಟ್ಟಿಲ್ಲ. ಇದರ ನಿಯಂತ್ರಣಕ್ಕೆ ಅಂತಹವರನ್ನು ಗುರುತಿಸಿ ದಂಡ ವಿಧಿಸುವದೇ ಉತ್ತಮ. ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಕಸ ಎಸೆಯುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿದಲ್ಲಿ ಮಾತ್ರ ನಿಯಂತ್ರಣ ಸಾಧ್ಯ ಎಂದು ಶಾಸಕ ಕೆ.ಜಿ.ಬೋಪಯ್ಯ ಅಭಿಪ್ರಾಯಪಟ್ಟಿದ್ದಾರೆ.
ಚೆನ್ನಯ್ಯನಕೋಟೆಯಲ್ಲಿ ಈಚೆಗೆ ಗ್ರಾ.ಪಂ.ವತಿಯಿಂದ ಜರುಗಿದ ಸ್ವಚ್ಛ ಭಾರತ್ ಮಿಷನ್ ಯೋಜನೆಯಲ್ಲಿ ನಿರ್ಮಾಣಗೊಂಡಿರುವ ಒಣ ಕಸ ವಿಂಗಡಣಾ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ಭಾರತವನ್ನು ಕಸಮುಕ್ತ ರಾಷ್ಟ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಸ್ವತ್ಛ ಭಾರತ್ ಮಿಷನ್ ಮೂಲಕ ಎಲ್ಲ ಗ್ರಾಮ ಪಂಚಾಯಿತಿಗಳಿಗೂ ತಲಾ 15 ಲಕ್ಷ ರೂ. ಅನುದಾನ ನೀಡಲಾಗುತ್ತಿದೆ.ಇದರ ಸದ್ಬಳಕೆಯಾಗಬೇಕು.ಗ್ರಾಮಸ್ಥರು ಹಸಿ ತ್ಯಾಜ್ಯ ಹಾಗೂ ಒಣ ಕಸವನ್ನು ವಿಂಗಡಿಸಿ ನೀಡುವಂತೆ ಜಾಗೃತಿ ಮೂಡಿಸಬೇಕಾಗಿದೆ.ಇಲ್ಲವೆ ದಂಡ ವಿಧಿಸುವ ಮೂಲಕ ಶಿಸ್ತುಕ್ರಮ ಜರುಗಬೇಕು. ಚೆನ್ನಯ್ಯನಕೋಟೆ ಗ್ರಾಮ ಕಸಮುಕ್ತ ಗ್ರಾಮವಾಗಿಸುವ ನಿಟ್ಟಿನಲ್ಲಿ ಎಲ್ಲರ ಸಹಕಾರವೂ ಅಗತ್ಯ ಎಂದು ನುಡಿದರು.
ತಾ.ಪಂ.ಉಪಾಧ್ಯಕ್ಷ ನೆಲ್ಲೀರ ಚಲನ್ ಅವರು ನೂತನ ಕಸ ಸಂಗ್ರಹ ವಾಹನವನ್ನು ಚಾಲನೆ ಮಾಡುವ ಮೂಲಕ ಉದ್ಘಾಟಿಸಿದರು.ಜಿ.ಪಂ.ಸದಸ್ಯರಾದ ಮೂಕೊಂಡ ವಿಜು ಸುಬ್ರಮಣಿ,ತಾ.ಪಂ.ಸದಸ್ಯರಾದ ಕಾವೇರಮ್ಮ, ಕುಟ್ಟಂಡ ಅಜಿತ್ ಕರುಂಬಯ್ಯ, ಗ್ರಾ.ಪಂ.ಉಪಾಧ್ಯಕ್ಷೆ ಎನ್.ಜಿ.ಗಾಯತ್ರಿ ಮೊದಲಾದವರಿದ್ದರು.
15 ಲ. ರೂ.ಬಿಡುಗಡೆ
ತಾ.ಪಂ ಕಾರ್ಯನಿರ್ವಹಣಾಧಿಕಾರಿ ಎಚ್.ಎ.ಷಣ್ಮುಗ ಮಾತನಾಡಿ, ವಿರಾಜಪೇಟೆ ತಾ.ಪಂ.ವ್ಯಾಪ್ತಿಗೆ ಒಳಪಡುವ ಸುಮಾರು 38 ಗ್ರಾ.ಪಂ.ಗಳಿಗೂ ಸ್ವತ್ಛ ಭಾರತ್ ಮಿಷನ್ ಯೋಜನೆಯನ್ವಯ ತಲಾ 15 ಲಕ್ಷ ರೂ.ಬಿಡುಗಡೆ ಮಾಡಲಾಗಿದೆ. ಗ್ರಾಮಸ್ಥರು ಫ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು. ಕಸವನ್ನು ವಿಂಗಡಿಸಿ ನೀಡುವಂತಾಗಬೇಕು ಎಂದು ಹೇಳಿದರು. ಚೆನ್ನಯ್ಯನಕೋಟೆ ಗೆ ರೂ.15 ಲಕ್ಷದಲ್ಲಿ ಮೊದಲ ಕಂತು 7.50 ಲಕ್ಷ ಬಿಡುಗಡೆಯಾಗಿದ್ದು, 4 ಲಕ್ಷ ವೆಚ್ಚದಲ್ಲಿ ಘಟಕ ನಿರ್ಮಾಣ ಹಾಗೂ 3.70 ಲಕ್ಷ ಮೊತ್ತದ ವಾಹನ ಖರೀದಿಸಲಾಗಿದೆ. ವೈಜ್ಞಾನಿಕ ಕಸ ವಿಲೇವಾರಿ ಕ್ರಮ ಕೈಗೊಳ್ಳಲಾಗುವದು ಎಂದು ಗ್ರಾ.ಪಂ.ಅಧ್ಯಕ್ಷೆ ಗೀತಾ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.