ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ
Team Udayavani, Sep 1, 2017, 7:20 AM IST
ಮಡಿಕೇರಿ: ನಾಪೋಕ್ಲು ಬಳಿಯ ಕಕ್ಕಬ್ಬೆಯ ನಟ್ಟುಮಾಡು ಶ್ರೀ ಭಗವತೀ ದೇವಸ್ಥಾನದ ಸ್ವಾಗತ ಕಮಾನಿನಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ದನದ ನಾಲ್ಕು ಕಾಲುಗಳನ್ನು ಚೀಲವೊಂದರಲ್ಲಿ ನೇತು ಹಾಕಿದ ಪ್ರಕರಣ ಬೆಳಕಿಗೆ ಬಂದಿದ್ದು, ಗ್ರಾಮಸ್ಥರು ಹಾಗೂ ಹಿಂದೂ ಪರ ಸಂಘಟನೆಗಳ ಪ್ರಮುಖರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ನಟ್ಟುಮಾಡು ಶ್ರೀಭಗವತಿ ದೇವಸ್ಥಾನದ ಸ್ವಾಗತ ಕಮಾನಿನಲ್ಲಿ ಪ್ಲಾಸ್ಟಿಕ್ ಚೀಲ ಕಟ್ಟಿಕೊಂಡಿರುವುದನ್ನು ಬುಧವಾರ ಬೆಳಗ್ಗೆ ಗ್ರಾಮಸ್ಥರು ಗಮನಿಸಿ ಪರಿಶೀಲಿಸಿದಾಗ, ಅದರಲ್ಲಿ ದನದ ನಾಲ್ಕು ಕಾಲುಗಳು ಇರುವುದು ಕಂಡು ಬಂತು. ಈ ಬಗ್ಗೆ ನಾಪೋಕ್ಲು ಪೊಲೀಸರಿಗೆ ಮಾಹಿತಿಯನ್ನು ನೀಡಲಾಯಿತು.ಗ್ರಾಮಸ್ಥರು ದೇವಸ್ಥಾನದ ಬಳಿಯಲ್ಲೆ ನೆರೆದು ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ದುಷ್ಕೃತ್ಯಕ್ಕೆ ಕಾರಣರಾದವರನ್ನು ಬಂಧಿಸುವಂತೆ ಒತ್ತಾಯಿಸಿದರು.
ಕಕ್ಕಬ್ಬೆ ಪೇಟೆಯ ಕೂಡು ರಸ್ತೆಯಲ್ಲಿ ಪ್ರತಿಭಟನ ಸಭೆ ನಡೆಸಿ ಘಟನೆಯನ್ನು ತೀವ್ರವಾಗಿ ಖಂಡಿಸಲಾಯಿತು. ಪ್ರಮುಖರು ಮಾತನಾಡಿ ಹಿಂದೂ ಸಮುದಾಯದವರು ಎಲ್ಲರೊಂದಿಗೂ ಅನ್ಯೋನ್ಯವಾಗಿದ್ದರೂ, ಮತಾಂಧ ಕಿಡಿಗೇಡಿಗಳಿಂದ ಅಶಾಂತಿಗೆ ಕಾರಣ ವಾಗುವ ಘಟನೆಗಳು ನಡೆಯುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಮಾಜದಲ್ಲಿ ಒಡಕು ಮೂಡಿಸಿ ವೈಷಮ್ಯ ಬಿತ್ತಲು ಯತ್ನಿಸುತ್ತಿರುವ ಸಮಾಜ ಘಾತುಕ ವ್ಯಕ್ತಿಗಳನ್ನು ತತ್ಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದರು. ಹಬ್ಬಗಳ ಸಂದರ್ಭದಲ್ಲಿ ಕಿಡಿಗೇಡಿಗಳು ಹೀನ ಕೃತ್ಯಕ್ಕೆ ಮುಂದಾ ಗುತ್ತಿದ್ದು, ಪೊಲೀಸರು ಹೆಚ್ಚಿನ ನಿಗಾ ವಹಿಸಬೇಕೆಂದು ಹೇಳಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ. ಹರೀಶ್, ಜಿಲ್ಲಾ ಪಂಚಾಯತ್ ಸದಸ್ಯ ಪಾಡಿಯಮಂಡ ಮುರುಳಿ, ನೆಲ್ಲಚಂಡ ಕಿರಣ್ ಕಾರ್ಯಪ್ಪ, ತಾ.ಪಂ. ಉಪಾಧ್ಯಕ್ಷ ಬೊಳಿಯಾಡಿರ ಸಂತು ಸುಬ್ರಮಣಿ, ಕಕ್ಕಬ್ಬೆ ಕುಂಜಿಲ ಗ್ರಾ.ಪಂ. ಅಧ್ಯಕ್ಷೆ ಕರ್ತಂಡ ಶೈಲಾ ಕುಟ್ಟಪ್ಪ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.