ಮಳೆ ಕೊರತೆ : ಕೊಡಗಿನಲ್ಲಿ ಸಾಂಕ್ರಾಮಿಕ ರೋಗ ಭೀತಿ
Team Udayavani, Aug 12, 2017, 7:20 AM IST
ಮಡಿಕೇರಿ: ರಾಜ್ಯದೆಲ್ಲೆಡೆ ಬರದ ಛಾಯೆ ಮೂಡಿರುವಂತೆ ಕಾವೇರಿ ನಾಡು ಕೊಡಗು ಜಿಲ್ಲೆಯಲ್ಲೂ ಮಳೆ ಕೊರತೆ ಎದುರಾಗಿದ್ದು, ನಿರೀಕ್ಷಿತ ಮುಂಗಾರಿನ ಆಗಮನವಾಗದೆ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗ ಭೀತಿಯೂ ಕಾಡುತ್ತಿದೆ.
ಡೆಂಗ್ಯೂ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ವೈರಾಣುವಿನಿಂದ ಬರುವ ಕಾಯಿಲೆಗಳಾಗಿದ್ದು, ಇವುಗಳು ಈಡಿಸ್ ಜಾತಿಯ ಸೊಳ್ಳೆಗಳಿಂದ ಒಬ್ಬರಿಂದ ಮತ್ತೂಬ್ಬರಿಗೆ ಹರಡುತ್ತದೆ. ಕೊಡಗಿನಲ್ಲಿ ವಾಡಿಕೆಯಂತೆ ಧಾರಾಕಾರ ಮಳೆಯಾಗಿದ್ದರೆ ಅಶುಚಿತ್ವದ ವಾತಾವರಣಕ್ಕೆ ಅವಕಾಶವಿರುತ್ತಿರಲಿಲ್ಲ. ಅಲ್ಲದೆ ಕೊಳಚೆ ನೀರು ಕೊಚ್ಚಿ ಹೋಗುವುದರಿಂದ ಸಾಂಕ್ರಾಮಿಕ ರೋಗ ಕಾಣಿಸಿಕೊಳ್ಳುತ್ತಿರಲಿಲ್ಲ.
ಆದರೆ, ಕಳೆದ ವರ್ಷದಂತೆ ಈ ಬಾರಿಯೂ ಮಳೆಯ ಕೊರತೆ ಉಂಟಾಗಿದೆ. ಅಲ್ಲದೆ ಪ್ರಸಕ್ತ ಸಾಲಿನಲ್ಲಿ ಕಸ ವಿಲೇವಾರಿಯ ಸಮಸ್ಯೆಯೂ ಕಾಡುತ್ತಿದ್ದು, ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ ನಗರ ಪ್ರದೇಶದಲ್ಲಿ ಅಲ್ಲಲ್ಲಿ ಅಶುಚಿತ್ವದ ವಾತಾವರಣ ಕಂಡು ಬಂದಿದೆ. ಕೊಳೆತು ನಾರುತ್ತಿರುವ ತ್ಯಾಜ್ಯದಿಂದ ಸೊಳ್ಳೆಗಳ ಹಾವಳಿ ಹೆಚ್ಚಾಗಿದೆ. ಮಳೆಯ ಪ್ರಮಾಣ ಕಡಿಮೆಯಾಗಿರುವುದು ಮತ್ತು ಬಿಸಿಲಿನ ವಾತಾವರಣ ಸೊಳ್ಳೆಗಳ ವಂಶಾಭಿವೃದ್ಧಿಗೆ ಸಹಕಾರಿಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಕಂಡು ಬರಲು ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.