ಕೊಡಗು, ಚಿಕ್ಕಮಗಳೂರಿನಲ್ಲಿ ಮಳೆ
Team Udayavani, Feb 7, 2019, 12:30 AM IST
ಮಡಿಕೇರಿ/ಚಿಕ್ಕಮಗಳೂರು: ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಬುಧವಾರ ಈ ವರ್ಷದ ಮೊದಲ ಮಳೆಯಾಗಿದ್ದು, ಜನತೆ ಹರ್ಷಗೊಂಡಿದ್ದಾರೆ. ಮಡಿಕೇರಿಯಲ್ಲಿ ಸಂಜೆಯ ವೇಳೆ ಹನಿ ಮಳೆಯಾಗಿದ್ದರೆ, ನಾಪೋಕ್ಲು ಸುತ್ತಮುತ್ತ ಸಾಧಾರಣ ಮಳೆಯಾಗುವ ಮೂಲಕ ಕೊಂಚ ತಂಪಿನ ವಾತಾವರಣ ಮೂಡಿತು.
ಚಿಕ್ಕಮಗಳೂರಿನ ಮೂಡಿಗೆರೆ, ಎನ್.ಆರ್. ಪುರ, ಕೊಪ್ಪದ ಕೆಲವು ಕಡೆ ಸಾಧಾರಣ ಮಳೆಯಾಗಿದೆ. ಅಕಾಲಿಕ ಮಳೆಯಿಂದ ಜನಸಾಮಾನ್ಯರ ಮೊಗದಲ್ಲಿ ಹರ್ಷ ಮೂಡಿದರೂ ಕಾಫಿ ಬೆಳೆಗಾರರು ಒಂದಷ್ಟು ಆತಂಕಕ್ಕೆ ಸಿಲುಕಿದ್ದಾರೆ. ಕಣದಲ್ಲಿ ಒಣಗುತ್ತಿರುವ ಕಾಫಿ ಫಸಲು ಒದ್ದೆಯಾಗಿದ್ದರೆ, ಅದಾಗಲೇ ಹಣ್ಣಾಗಿರುವ ಕರಿಮೆಣಸು ಫಸಲು ಉದುರುವುದಕ್ಕೆ ಕಾರಣವಾಗಿದೆ. ಕಳೆದ ಎರಡು ಮೂರು ದಿನಗಳಿಂದ ಮೋಡ ಕವಿದ ವಾತಾವರಣವಿತ್ತಾದರೂ, ಏಕಾಏಕಿ ಮಳೆಯಾಗುತ್ತದೆಂಬ ನಿರೀಕ್ಷೆ ಇರಲಿಲ್ಲ. ಬುಧವಾರ ಅಪರಾಹ್ನ ನಾಪೋಕ್ಲು ವ್ಯಾಪ್ತಿಯಲ್ಲಿ ಗುಡುಗು ಸಹಿತ ಸುರಿದ ಮಳೆಗೆ ಬೆಳೆಗಾರರ ಮುಖದಲ್ಲಿ ಸಂಭ್ರಮದ ಬದಲು, ಆತಂಕ ಮೂಡಿತು.
ಸಾಮಾನ್ಯವಾಗಿ ಮಾರ್ಚ್ ಅಥವಾ ಎಪ್ರಿಲ್ ತಿಂಗಳಿನಲ್ಲಿ ಜಿಲ್ಲೆಯಲ್ಲಿ ಮೊದಲ ಮಳೆಯಾಗುತ್ತಿತ್ತು. ಆ ಮೂಲಕ ಕಾಫಿ ಗಿಡಗಳಲ್ಲಿ ಮುಂದಿನ ವರ್ಷದ ಭವಿಷ್ಯ ಅರಳುತ್ತಿತ್ತು. ಆದರೆ, ಬೆಳೆಗಾರರು ಇನ್ನೂ ಕೊನೇ ಹಂತದ ಪ್ರಕ್ರಿಯೆಯಲ್ಲಿರುವಾಗಲೇ ವರ್ಷಾಧಾರೆಯಾಗಿರುವುದು ಒಂದಿಷ್ಟು ಸಮಸ್ಯೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.