ದೊರೆಯದ ಮಳೆಹಾನಿ ಪರಿಹಾರ ಆರೋಪ, ಪ್ರತಿಭಟನೆ ಎಚ್ಚರಿಕೆ
Team Udayavani, May 16, 2019, 6:10 AM IST
ಮಡಿಕೇರಿ: ಕಳೆದ ವರ್ಷ ಸುರಿದ ಮಳೆಯಿಂದಾಗಿ ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ಬೆಳೆ ಹಾಗೂ ಆಸ್ತಿಪಾಸ್ತಿ ಹಾನಿಯಾಗಿದೆ. ಬೆಳೆಗಾರರು ತೀವ್ರ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಆದರೆ ಇದುವರೆಗೆ ಸಂತ್ರಸ್ತ ಬೆಳೆಗಾರರಿಗೆ ಸಮರ್ಪಕವಾಗಿ ಪರಿಹಾರ ವಿತರಿಸಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿರುವ ರೈತಪರ ಹಾಗೂ ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿ ಗಳು ಪರಿಹಾರ ನೀಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ ಅವರ ನೇತೃತ್ವದಲ್ಲಿ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರನ್ನು ಭೇಟಿ ಮಾಡಿದ ಪದಾಧಿಕಾರಿಗಳು, ಭೂಕುಸಿತ, ಪ್ರವಾಹದಿಂದ ಕಾಫಿ ತೋಟ. ಏಲಕ್ಕಿ ತೋಟ, ಭತ್ತದ ಗದ್ದೆಗಳನ್ನು ಕಳೆದುಕೊಂಡವರಿಗೆ ಪರಿಹಾರ ಹಾಗೂ ಬದಲಿ ಜಾಗ ನೀಡಬೇಕು. ಮನೆ ಕಳೆದುಕೊಂಡವರಿಗೆ ಮನೆಗಳನ್ನು ಕೂಡಲೆ ನಿರ್ಮಿಸಿಕೊಡಬೇಕು. ಏಲಕ್ಕಿ, ಕಾಫಿ ತೋಟಗಳಲ್ಲಿ ಬಿದ್ದಿರುವ ಮರಗಳನ್ನು ತೋಟದ ಮಾಲಿಕರು ತೆರವುಗೊಳಿಸಲು ಅರಣ್ಯ ಇಲಾಖೆ ಅನುಮತಿ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಮನವಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು. ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ, ಕಬೆರಳಣಿಕೆ ಮಂದಿಗೆ ಒಂದೆರಡು ಸಾವಿರ ಪರಿಹಾರ ನೀಡಲಾಗಿದೆ. ಇಂತಹ ಅವೈಜ್ಞಾನಿಕ ಪರಿಹಾರದಿಂದ ರೈತಾಪಿ ವರ್ಗಕ್ಕೆ ಪ್ರಯೋಜನವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು ಮೇ 23 ರ ಬಳಿಕ ಬೆಳೆಗಾರರನ್ನು ಒಗ್ಗೂಡಿಸಿ ಹೋರಾಟಹಮ್ಮಿಕೊಳ್ಳಲಾಗುವುದೆಂದು ಎಚ್ಚರಿಸಿದರು. ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಬೋಪಣ್ಣ, ಉಪಾಧ್ಯಕ್ಷ ಕೆ.ಪಿ.ಬಸಪ್ಪ, ಕಾಫಿ ಬೆಳೆಗಾರರ ಹೋರಾಟ ಸಮಿತಿ ಅಧ್ಯಕ್ಷ ಎಂ.ಸಿ.ಮುದ್ದಪ್ಪ, ಬೆಳೆಗಾರರ ಸಂಘದ ಉಪಾಧ್ಯಕ್ಷ ಬಿ.ಎಂ.ಲವ, ಪದಾಧಿಕಾರಿಗಳಾದ ಸೋಮಶೇಖರ್, ಲಕ್ಷ್ಮಣ್, ರಾಮಚಂದ್ರ, ದಿನೇಶ್, ಕುಶಾಲಪ್ಪ, ಸುರೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.