Madikeri ಪೋಕ್ಸೋ ಪ್ರಕರಣದಡಿ ಅತ್ಯಾಚಾರಿಗೆ 20 ವರ್ಷ ಜೈಲು ಶಿಕ್ಷೆ
Team Udayavani, Dec 6, 2023, 8:02 PM IST
ಮಡಿಕೇರಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪೋಕೊÕà ಪ್ರಕರಣದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ವಿರಾಜಪೇಟೆಯ 2ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ 20 ವರ್ಷ ಕಠಿನ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಶ್ರೀಮಂಗಲ ಠಾಣಾ ವ್ಯಾಪ್ತಿಯ ಪೂಜೆಕಲ್ಲು ನಿವಾಸಿ ಆನಂದ್ ಕುಮಾರ್ ಶಿಕ್ಷೆಗೆ ಒಳಗಾದ ಅಪರಾಧಿಯಾಗಿದ್ದಾನೆ.
ಆನಂದ್ ಕುಮಾರ್ ಅಲಿಯಾಸ್ ಕುಶಾ ಅರುಣ 2017ರ ಜನವರಿಯಿಂದ ಜೂನ್ 30ರ ಅವಧಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದನು. ಅಲ್ಲದೆ ಬಾಲಕಿಯ ತಂದೆ ತಾಯಿ ಇಲ್ಲದ ಸಮಯದಲ್ಲಿ ಬಾಲಕಿಯ ಮನೆಗೆ ಪ್ರವೇಶಿಸಿ ಶ್ರೀಮಂಗಲಕ್ಕೆ ಬರುವಂತೆ ಕರೆದಿದ್ದನು. ಇದಕ್ಕೆ ಬಾಲಕಿ ಒಪ್ಪದಾಗ ಕೊಲೆ ಮಾಡುವುದಾಗಿ ಬೆದರಿಸಿ ಜತೆಯಲ್ಲಿ ಕರೆದುಕೊಂಡು ಹೋಗಿ ಅವನ ಮನೆಯಲ್ಲಿ ಬಾಲಕಿ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿ ಗಾಯಗೊಳಿಸಿ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಿ ದೂರು ದಾಖಲಾಗಿತ್ತು.
ಈ ಕುರಿತು ಶ್ರೀಮಂಗಲ ಪೊಲೀಸರು ಪೋಕೊÕà ಕಾಯಿದೆ ಅಡಿ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿ ಆನಂದ್ ಕುಮಾರ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪ್ರಕರಣದ ತನಿಖೆ ನಡೆಸಿದ ಶ್ರೀಮಂಗಲ ಪೊಲೀಸರು ಆರೋಪಿ ವಿರುದ್ಧ ವಿರಾಜಪೇಟೆ 2ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.
ತೀರ್ಪು ಪ್ರಕಟ
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿ ಆನಂದ್ ಕುಮಾರ್ ಅಲಿಯಾಸ್ ಕುಶಾ ಅರುಣನಿಗೆ ಪೋಕ್ಸೋ ಕಾಯಿದೆ ಅಡಿ ¿20 ವರ್ಷ ಕಠಿನ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 2 ವರ್ಷ ಜೈಲು ಶಿಕ್ಷೆಯ ವಿಸ್ತರಣೆ ಮತ್ತು ಕಲಂ 506 ಐಪಿಸಿ ಅಡಿಯಲ್ಲಿ 1 ವರ್ಷ ಜೈಲು ಶಿಕ್ಷೆ ಮತ್ತು 5 ಸಾವಿರ ದಂಡ ಮತ್ತು ಕಲಂ 376(2)(ಎನ್) ಐಪಿಸಿ ಅಡಿಯಲ್ಲಿ 10 ವರ್ಷ ಕಠಿನ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.