15 ದಿನಗಳಲ್ಲಿ ಪರಿಹಾರ: ಸಚಿವ ಆರ್‌.ಅಶೋಕ್‌

ಕೊಡಗು ಜಿಲ್ಲೆಯ ಬೆಳೆ ಹಾನಿ ಪ್ರದೇಶಕ್ಕೆ ಕಂದಾಯ ಸಚಿವರ ಭೇಟಿ

Team Udayavani, Nov 23, 2021, 5:45 AM IST

15 ದಿನಗಳಲ್ಲಿ ಪರಿಹಾರ: ಸಚಿವ ಆರ್‌.ಅಶೋಕ್‌

ಸೋಮವಾರಪೇಟೆ: ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಅತೀ ಹೆಚ್ಚಿನ ನಷ್ಟವಾಗಿದ್ದು, ಮರು ಸಮೀಕ್ಷೆ ಮಾಡಿಸಿ 15 ದಿನಗಳ ಒಳಗೆ ಸರಕಾರಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದರು.

ಸೋಮವಾರಪೇಟೆ ತಾಲೂಕು ಕಚೇರಿಯಲ್ಲಿ ಸೋಮವಾರ ಸಂಜೆ ನಡೆದ ಅಕಾಲಿಕ ಮಳೆಯಿಂದ ಬೆಳೆಹಾನಿ ಪರಿಶೀಲನ ಸಭೆಯಲ್ಲಿ ಅವರು ಮಾತನಾಡಿದರು.

ಕೊಡಗಿನಲ್ಲಿ ರೈತರೇ ಕಾಫಿ ಬೆಳೆಯುತ್ತಿದ್ದು, ಅಕಾಲಿಕ ಮಳೆಯಿಂದ ಪ್ರತೀ ವರ್ಷ ನಷ್ಟ ಅನುಭವಿಸುತ್ತಿರುವ ಬಗ್ಗೆ ಬೆಳೆಗಾರರು ಮನವರಿಕೆ ಮಾಡಿದ್ದಾರೆ. ಬೆಳೆಗಾರರ 10 ಎಚ್‌.ಪಿ. ವಿದ್ಯುತ್‌ ಚಾಲಿತ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್‌ ಕಲ್ಪಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ತೀರ್ಮಾನ ಕೈಗೊಳ್ಳುತ್ತೇವೆ. ಕಾಫಿಯನ್ನು ಕೃಷಿಬೆಳೆ ಎಂದು ಪರಿಗಣಿಸುವ ಬಗ್ಗೆ ಕೇಂದ್ರ ಸರಕಾರಕ್ಕೆ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆದಿದೆ ಎಂದರು.

ಇದನ್ನೂ ಓದಿ:ಪ್ರವಾಹ ಪೀಡಿತ ಪ್ರದೇಶಗಳಿಗೆ ಇಲಾಖಾ ಸಚಿವರ ಭೇಟಿ: ಸಿಎಂ

ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.
ಕೊಡಗಿನಲ್ಲಿ 3 ಜೀವಹಾನಿಯಾಗಿದೆ. ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಒಟ್ಟು 40,878 ಹೆಕ್ಟೇರ್‌ನಲ್ಲಿ ಬೆಳೆಹಾನಿಯಾಗಿದೆ. ಅದರಲ್ಲಿ 38,500 ಹೆಕ್ಟೇರ್‌ನಲ್ಲಿ ಕಾಫಿ ಫ‌ಸಲು ಹಾನಿಯಾಗಿದೆ ಎಂದು ಹೇಳಿದರು. ಶೇ. 30ಕ್ಕಿಂತ ಹೆಚ್ಚಿನ ಹಾನಿಯಾಗಿದ್ದರೆ ಸೂಕ್ತ ಪರಿಹಾರ ಕಲ್ಪಿಸಲಾಗುವುದು. ಕೊಡಗಿನಲ್ಲಿ ಮುಂಗಾರಿನಲ್ಲಿ 127 ಕೋಟಿ ರೂ. ಹಾನಿಯಾಗಿದೆ ಎಂದು ಹೇಳಿದರು.

ರಾಜ್ಯದ ಯಾವುದೇ ಭಾಗದಲ್ಲಿ ರೈತರಿಗೆ ತಾವು ಬೆಳೆದ ಬೆಳೆ ನಷ್ಟವಾದಲ್ಲಿ ತತ್‌ಕ್ಷಣವೇ ಸರಕಾರದ ವತಿಯಿಂದ ಅವರ ಖಾತೆಗೆ ಹಣ ಜಮೆಯಾಗಬೇಕು ಎಂದರು.

ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ್‌, ತಹಶೀಲ್ದಾರ್‌ ಗೋವಿಂದರಾಜು, ವಿವಿಧ ಇಲಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Suside-Boy

Kasaragodu: ರೈಲಿನಿಂದ ಬಿದ್ದು ವ್ಯಕ್ತಿ ಸಾವು

14

Kasaragod: ಕೇರಳದಿಂದ ಕರ್ನಾಟಕಕ್ಕೆ ಪಲಾಯನಗೊಂಡಿದ್ದ ನಕ್ಸಲರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.