ಗಣರಾಜ್ಯೋತ್ಸವ ಪಥ ಸಂಚಲನ: ನಾಲ್ವರು ವಿದ್ಯಾರ್ಥಿಗಳಿಗೆ ಸಮ್ಮಾನ
Team Udayavani, Mar 3, 2019, 1:00 AM IST
ಮಡಿಕೇರಿ: ಇತ್ತೀಚೆಗೆ ಹೊಸದಿಲ್ಲಿಯಲ್ಲಿ ನಡೆದ ಗಣರಾಜ್ಯೋ ತ್ಸವ ಪಥಸಂಚಲನದಲ್ಲಿ ಪ್ರಥಮ ಸ್ಥಾನ ಪಡೆದ ಕರ್ನಾಟಕ-ಗೋವಾ ಡೈರೆಕ್ಟರೇಟನ್ನು ಪ್ರತಿನಿಧಿಸಿದ್ದ ನಾಲ್ವರು ಎನ್‌ಸಿಸಿ ಕೆಡೆಟ್‌ಗಳನ್ನು 19 ಕರ್ನಾಟಕ ಬೆಟಾಲಿಯನ್ ವತಿಯಿಂದ ಮೆರವಣಿಗೆ ನಡೆಸಿ ಸನ್ಮಾನಿಸಲಾಯಿತು.
ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳಾದ ಬಿ.ಎಸ್. ತೇಜಸ್ (ದ್ವೀತಿಯ ಬಿ.ಕಾಂ.), ಎನ್.ಎನ್. ಪೊನ್ನಣ್ಣ (ದ್ವೀತಿಯ ಬಿಎ ಇಜೆಎಸ್) ಕೊಡಗು ವಿದ್ಯಾಲಯದ ದಬಾಯನ, ಪುತ್ತೂರು ವಿವೇಕಾನಂದ ಕಾಲೇಜಿನ ಪ್ರೀತಿ ಅವರನ್ನು ತೆರೆದ ವಾಹನದ ಮೂಲಕ ಗಾಂಧಿ ಮೈದಾನದಿಂದ ಜನರಲ್ ತಿಮ್ಮಯ್ಯ ವೃತ್ತ ಬಳಸಿ ಎಸ್‌ಪಿ ಕಚೇರಿ ಬಳಿಯಿರುವ ಎನ್‌ಸಿಸಿ ಕಚೇರಿವರೆಗೆ ಮೆರವಣಿಗೆ ಮೂಲಕ ಕರೆತರಲಾಯಿತು.
ಕಳೆದ ಹದಿನೈದು ವರ್ಷಗಳ ನಂತರ ದೇಶದ ಎಲ್ಲಾ ಬೆಟಾಲಿಯನ್‌ಗಳ ಪೈಕಿ ಗಣರಾಜ್ಯೋತ್ಸವ ಪಥ
ಸಂಚಲನದಲ್ಲಿ ಈ ವರ್ಷ ಕರ್ನಾಟಕ-ಗೋವಾ ಡೈರಕ್ಟರೇಟ್ ಪ್ರಥಮ ಸ್ಥಾನಗಳಿಸಿದೆ.
ಈ ಸಂದರ್ಭ ಕೊಡಗು ಘಟಕದ ಮುಖ್ಯಸ್ಥ ಕರ್ನಲ್ ವಿ.ಎಂ. ನಾಯಕ್, ಲೆಫ್ಟಿನೆಂಟ್ ಕರ್ನಲ್ ಸಂಜಯ್ ಆಪ್ಟೆ, ಮೇಜರ್ ಡಾ| ಬಿ. ರಾಘವ್, ಸುಭೇದಾರ್ ಮೇಜರ್ ರಾಜೇಶ್, ಸುಭೇದಾರ್ ರಮೇಶ್, ಲೆಫ್ಟಿನೆಂಟ್ ಕಾವೇರಪ್ಪ, ಕೊಡಗು ವಿದ್ಯಾಲಯದ ದಾಮೋದರ, ಮೂರ್ನಾಡು ಹೈಸ್ಕೂಲಿನ ಗಣೇಶ್ ಹಾಗೂ ಪುತ್ತೂರು, ಮೂರ್ನಾಡು, ಸುಳ್ಯದ ಎನ್‌ಸಿಸಿ ಕೆಡೆಟ್‌ಗಳು ಸ್ವಾಗತಿಸಿ ಅಭಿನಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.