ಮೀಸಲಾತಿ ವಿವಾದ: ಸೂಕ್ತ ಕ್ರಮಕ್ಕೆ ಬಹುಜನ ವಿದ್ಯಾರ್ಥಿ ಸಂಘ ಒತ್ತಾಯ
Team Udayavani, Feb 24, 2017, 12:15 PM IST
ಮಡಿಕೇರಿ: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಡ್ತಿ ಮೀಸಲಾತಿಯನ್ನು ಸಂರಕ್ಷಿಸಲು ರಾಜ್ಯ ಸರಕಾರ ಸುಪ್ರೀಂ ಕೋರ್ಟ್‌ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕೆಂದು ಬಹುಜನ ವಿದ್ಯಾರ್ಥಿ ಸಂಘ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾ ಸಂಚಾಲಕರಾದ ಸಿ.ಜೆ. ಮೋಹನ್ ಮೌರ್ಯ, ಕಳೆದ 68 ವರ್ಷಗಳ ಕಾಲ ಆಡಳಿತ ನಡೆಸಿದ ಸರಕಾರಗಳು ಒಬಿಸಿ, ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಘೋರ ಅನ್ಯಾಯವನ್ನು ಮಾಡಿವೆ ಎಂದು ಆರೋಪಿಸಿದರು.
ರಾಜ್ಯ ಸರಕಾರ ಸುಪ್ರೀಂಕೋರ್ಟ್ ಮುಂದೆ ಮರು ಪರಿಶೀಲನಾ ಅರ್ಜಿಯನ್ನು ಸಲ್ಲಿಸಿ ಅಗತ್ಯ ಸಾûಾÂಧಾರಗಳನ್ನು ಹಾಜರುಪಡಿಸಬೇಕು, ಸುಪ್ರೀಂಕೋರ್ಟ್ ಆದೇಶದಲ್ಲಿ ಹೇಳಿದ ನ್ಯೂನತೆಗಳನ್ನು ಸರಿಪಡಿಸಲು ಕರ್ನಾಟಕ ರಾಜ್ಯ ಸರಕಾರ ಭಡ್ತಿಯಲ್ಲಿ ಮೀಸಲಾತಿ ಕಲ್ಪಿಸುವ ಹೊಸ ಕಾನೂನನ್ನು ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಮಂಡಿಸಿ ಪಾಸು ಮಾಡಬೇಕು, ಲೋಕಸಭೆಯಲ್ಲಿ ನನೆಗುದಿಗೆ ಬಿದ್ದಿರುವ ಬಡ್ತಿ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸಲು ಕೇಂದ್ರ ಸರಕಾರ ಸಂವಿಧಾನದ 117 ನೇ ತಿದ್ದುಯಪಡಿ ವಿಧೇಯಕವನ್ನು ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಅಂಗೀಕರಿಸಿ ಆದೇಶ ಹೊರಡಿಸಬೇಕು ಮತ್ತು ಮೀಸಲಾತಿಯನ್ನು ಸಂರಕ್ಷಿಸಲು ಮೀಸಲಾತಿ ವಿಧೇಯಕಗಳನ್ನು ಸಂವಿಧಾನದ 9ನೇ ಪರಿಚ್ಛೇದದಲ್ಲಿ ಸೇರಿಸಬೇಕೆಂದು ಮೋಹನ್ ಮೌರ್ಯ ಒತ್ತಾಯಿಸಿದರು.
ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಸಮಾನ ಪ್ರಾತಿನಿಧ್ಯ ನೀಡುವುದು ಪ್ರಜಾಪ್ರಭುತ್ವದ ಮೂಲತತ್ವ. ಸಾವಿರಾರು ವರ್ಷಗಳಿಂದ ಸಾಮಾಜಿಕ ಶೈಕ್ಷಣಿಕ, ಅಸಮಾನತೆಗೆ ತುತ್ತಾಗಿರುವ ಸಮುದಾಯಗಳಿಗೆ ಎಲ್ಲ ಹಂತದಲ್ಲೂ ಸಮಾನ ಪ್ರಾತಿನಿಧ್ಯ ಒದಗಿಸಿಕೊಡುವುದೇ ಮೀಸಲಾತಿಯ ಉದ್ದೇಶ ಮತ್ತು ಸಂವಿಧಾನದ ಆಶಯ. ಆದರೆ ಇಂತಹ ಅನ್ಯಾಯ, ಅಸಮಾನತೆಯನ್ನು ಸರಿಪಡಿಸಬೇಕಾಗಿರುವ ಸಂದರ್ಭಗಳಲ್ಲಿ 2017ರಂದು ಫೆ. 9ರಂದು ಸರ್ವೋಚ್ಚ ನ್ಯಾಯಾಲಯ ಎಸ್‌ಸಿಗಳಿಗೆ ಶೇ.15 ಮತ್ತು ಎಸ್‌ಟಿಗಳಿಗೆ ಶೇ.3ರಷ್ಟು ಭಡ್ತಿಯಲ್ಲಿ ಮೀಸಲಾತಿ ನೀಡುವ ಕರ್ನಾಟಕ ರಾಜ್ಯ ಸರಕಾರದ 2012 ರ ಆದೇಶವನ್ನು ರದ್ದುಪಡಿಸಿದೆ.
ಎಸ್‌ಸಿ, ಎಸ್‌ಟಿ ವರ್ಗಗಳ ನೌಕರರಿಗೆ ಭಡ್ತಿಯಲ್ಲಿ ಮೀಸಲಾತಿ ನೀಡಿದರೆ ಆಡಳಿತದಲ್ಲಿ ದಕ್ಷತೆಗೆ ಧಕ್ಕೆಯಾಗು ವುದಿಲ್ಲ, ಅವರು ಹಿಂದುಳಿದಿದ್ದಾರೆ ಮತ್ತು ಉನ್ನತ ಹುದ್ದೆಗಳಲ್ಲಿ ಅವರ ಪ್ರಾತಿನಿಧ್ಯದ ಕೊರತೆ ಇದೆ ಎಂಬ ಅಂಶಗಳನ್ನು ಸಾಬೀತುಪಡಿಸಲು ರಾಜ್ಯ ಸರಕಾರ ಯಾವ ಸಾûಾÂಧಾರಗಳನ್ನೂ ಹಾಜರುಪಡಿಸಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಇದರ ಪರಿಣಾಮವಾಗಿ 2002 ರಿಂದಲೂ ಮುಂಭಡ್ತಿ ಪಡೆದಿರುವ 36 ವಿವಿಧ ಇಲಾಖೆಗಳ ಸುಮಾರು 10 ಸಾವಿರ ಎಸ್‌ಸಿ, ಎಸ್‌ಟಿ ವರ್ಗಗಳ ನೌಕರರು, ಅಧಿಕಾರಿಗಳು ಹಿಂಭಡ್ತಿ ಪಡೆಯಲಿದ್ದಾರೆ.
ಸಾಮಾಜಿಕ ನ್ಯಾಯ ಮತ್ತು ಸಮಾನ ಪ್ರಾತಿನಿಧ್ಯ ತತ್ವಗಳಿಗೆ ಈ ತೀರ್ಪು ಧಕ್ಕೆ ತರುವ ಮೂಲಕ ಈ ಸಮುದಾಯಗಳ ಆತ್ಮವಿಶ್ವಾಸ ಮತ್ತು ಭರವಸೆಗಳನ್ನೇ ನಾಶಮಾಡುವ ಸಾಧ್ಯತೆಗಳಿದೆ ಎಂದು ಮೋಹನ್ ಮೌರ್ಯ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
Kasaragodu: ಸಿವಿಲ್ ಪೊಲೀಸ್ ಆಫೀಸರ್ ಕೊಲೆ ಪ್ರಕರಣ: ಪತಿಯ ಸೆರೆ
Kasragodu: ನರ್ಸಿಂಗ್ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್ ತನಿಖೆ
Court: ಮಾವೋವಾದಿ ಸೋಮನ್ ಕಾಸರಗೋಡು ಕೋರ್ಟಿಗೆ ಹಾಜರು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.