ಸಮಸ್ಯೆಗಳಿಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸಿ: ಸಿಎಂ ಸೂಚನೆ
Team Udayavani, Jul 22, 2018, 7:00 AM IST
ಮಡಿಕೇರಿ: ಅಧಿಕಾರಿಗಳು ಸ್ಥಳೀಯ ಸಮಸ್ಯೆಗಳನ್ನು ಅರಿತು ಸೂಕ್ಷ್ಮವಾಗಿ ಹಾಗೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಲಹೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಳೆಹಾನಿ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಗುರುವಾರ ಮಾಹಿತಿ ಪಡೆದು ಮುಖ್ಯಮಂತ್ರಿ ಅವರು ಮಾತನಾಡಿದರು.ಅಧಿಕಾರಿಗಳು ಶ್ರದ್ಧೆಯಿಂದ ಕೆಲಸ ಮಾಡಿದ್ದಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸೇವೆ ನೀಡಲು ಸಾಧ್ಯ. ಆ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ನಿರ್ದೇಶ ನೀಡಿದರು.
ಕಾಫಿ ಬೆಳೆಗಾರರಿಗೆ ಪರಿಹಾರ ವಿತರಣೆ ಮಾಡಬೇಕು. ಮಳೆಯಿಂದಾಗಿರುವ ನಷ್ಟ ಸಂಬಂಧ ಕಾಫಿ ಬೆಳೆಗಾರರನ್ನು ರಕ್ಷಣೆ ಮಾಡಬೇಕು. ಪರಿಸರ ಸಂರಕ್ಷಣೆಯು ಸಹ ಮಾಡಬೇಕು ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ತಿಳಿಸಿದರು. ಮಳೆಹಾನಿ ಪರಿಹಾರ ಸಂಬಂಧಇಸಿದಂತೆ ತಹಶೀಲ್ದಾರರು ನೇರವಾಗಿ ಪರಿಹಾರ ವಿತರಣೆ ಮಾಡುವಂತಾಗಬೇಕು. ಉಪವಿಭಾಗಾಧಿಕಾರಿಯವರ ನೇತƒತ್ವದಲ್ಲಿ ಸಮಿತಿ ಅಗತ್ಯವಿಲ್ಲ ಎಂದು ಶಾಸಕ ಕೆ.ಜಿ.ಬೋಪಯ್ಯ ಸಲಹೆ ಮಾಡಿದರು.
ಪ್ರಥಮ ದರ್ಜೆ ಕಾಲೇಜುಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಪ್ರೌಢಶಾಲೆಗಳಿಗೆ ಸರ್ಕಾರ ಹೆಚ್ಚಿನ ಅನುದಾನ ನೀಡಿದೆ. ಆ ನಿಟ್ಟಿನಲ್ಲಿ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೂ ಅನುಮತಿ ನೀಡಲಾಗಿದೆ ಎಂದು ಎಚ್.ಡಿ.ರೇವಣ್ಣ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ನೂತನ ಭವನ ನಿರ್ಮಾಣ ಕಾಮಗಾರಿಯನ್ನು ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸು ವಂತೆ ಎಚ್.ಡಿ.ರೇವಣ್ಣ ಸಲಹೆ ಮಾಡಿದರು.
ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಕೊಡವ ಹೆರಿಟೇಜ್ ಕಟ್ಟಡ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಮುಖ್ಯಮಂತ್ರಿ ಅವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಅವರು ಕೊಡವ ಹೆರಿಟೇಜ್ ಕಟ್ಟಡ ಸಂಬಂಧ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿದರು,ಈ ಸಂಬಂಧ ವರದಿ ಕಳುಹಿಸಿ ಕೊಡುವಂತೆ ಲೋಕೋಪಯೋಗಿ ಇಲಾಖೆಯ ಇಇಗೆ ಅವರು ಸೂಚನೆ ನೀಡಿದರು.
ಮೈಸೂರು-ಮಡಿಕೇರಿ-ಮಾಣಿ ಮಾರ್ಗದ ರಸ್ತೆ ಕಾಮಗಾರಿಗೆ ಡಿಪಿಆರ್. ಕರೆದು ಟೆಂಡರ್ ಆಹ್ವಾನಿಸುವಂತೆ ಲೋಕೋಪಯೋಗಿ ಎಂಜಿನಿಯರ್‌ಗಳಿಗೆ ಎಚ್.ಡಿ.ರೇವಣ್ಣ ಅವರು ಸೂಚನೆ ನೀಡಿದರು. ಕೊಡ್ಲಿಪೇಟೆ- ಮಾಕುಟ್ಟ ರಸ್ತೆ ನಿರ್ಮಾಣ ಮಾಡಲು ಕೈಗೆತ್ತಿಕೊಳ್ಳಬೇಕಿದೆ. ಹಾಗೆಯೇ ಪಾಣತ್ತೂರು- ಕರಿಕೆ-ಭಾಗ ಮಂಡಲ ರಸ್ತೆ ಕಾಮಗಾರಿಯನ್ನು ಶೀಘ್ರ ಆರಂಭಿಸಬೇಕು ಎಂದು ಕೆ.ಜಿ.ಬೋಪಯ್ಯ ಅವರು ಮುಖ್ಯಮಂತ್ರಿ ಗಮನಕ್ಕೆ ತಂದರು.
ಹಮ್ಮಿಯಾಲ-ಮುಟ್ಲು ಭಾಗದಲ್ಲಿ ಭತ್ತ ಬೆಳೆ ನಾಶವಾಗಿದ್ದು, ಈ ಪ್ರದೇಶಗಳಿಗೆ ಭೇಟಿ ನೀಡಿದ್ದೀರಾ ಎಂದು ಕೃಷಿ ಇಲಾಖೆ ಅಧಿಕಾರಿಗಳನ್ನು ಶಾಸಕರು ಪ್ರಶ್ನಿಸಿದರು.
ತಹಶೀಲ್ದಾರರು, ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ಹಾನಿಗೆ ಸಂಬಂಧಿಸಿದಂತೆ ಪರಿಶೀಲನೆ ಮಾಡಬೇಕು ಎಂದು ಸಚಿವ ಎಚ್..ಡಿ.ರೇವಣ್ಣ ಅವರು ಸೂಚನೆ ನೀಡಿದರು.
ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಬೋಜೇಗೌಡ, ಜಿಲ್ಲಾ ಪಂಚಾ ಯತ್ ಅಧ್ಯಕ್ಷ ಬಿ.ಎ.ಹರೀಶ್ ಅವರು ಮಾತನಾಡಿದರು.
ಜಿ.ಪಂ.ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಇತರರು ಇದ್ದರು. ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಮಳೆ ಹಾನಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿ ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ 108 ಲಕ್ಷ ರೂ., ಟೌನ್ ಪಂಚಾಯಿತಿ ವ್ಯಾಪ್ತಿಯಲ್ಲಿ 75 ಲಕ್ಷ ರೂ. ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ 4,822 ಲಕ್ಷ ರೂ. ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ 1263 ಲಕ್ಷ ರೂ., ಸಣ್ಣ ನೀರಾವರಿ 1190 ಲಕ್ಷ ರೂ., ಸೆಸ್ಕ್ ವ್ಯಾಪ್ತಿಯಲ್ಲಿ 131 ಲಕ್ಷ ರೂ., ಪಿಎಂಜಿ ಎಸ್‌ವೈ ವ್ಯಾಪ್ತಿಯಲ್ಲಿ 7 ಲಕ್ಷ ರೂ., ರಾಷ್ಟ್ರೀಯ ಹೆದ್ದಾರಿ ವಿಭಾಗದಲ್ಲಿ 113 ಲಕ್ಷ ರೂ., ಒಟ್ಟಾರೆ ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಸುಮಾರು 326 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಅವರು ಮಾಹಿತಿ ನೀಡಿದರು.
326 ಕೋಟಿ ರೂ. ಅಂದಾಜು ನಷ್ಟ
ಮಳೆಯಿಂದ ಹಾನಿಯಾಗಿರುವ ರಸ್ತೆ, ಸೇತುವೆ, ವಾಸದ ಮನೆ, ಬೆಳೆಹಾನಿ, ವಿದ್ಯುತ್, ಹಾಗೆಯೇ ಸರ್ಕಾರಿ ಕಟ್ಟಡಗಳು ನಷ್ಟ ಸಂಬಂಧಿ ಸಿದಂತೆ ಈಗಾಗಲೇ 326 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಅಂದಾಜು ಮಾಡಲಾಗಿದೆ. ಪರಿಹಾರ ಸಂಬಂಧ ಅಗತ್ಯ ಹಣ ಬಿಡುಗಡೆ ಮಾಡಲಾಗುವುದು. ರಸ್ತೆ, ಸೇತುವೆ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಳೆಯಿಂದ ಹಾನಿಯಾಗಿರುವುದನ್ನು ಸರಿಪಡಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡು ಸರ್ಕಾರಕ್ಕೆ ಕಳುಹಿಸಿಕೊಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಅವರು ಸೂಚಿಸಿದರು.
ಜೂನ್, ಜುಲೆ„ ಎರಡು ತಿಂಗಳು ಕೃಷಿ ಅಧಿಕಾರಿಗಳು ಗ್ರಾಮೀಣ ಪ್ರದೇಶಗಳಿಗೆ ತೆರಳಿ ರೈತರಿಗೆ ಸಲಹೆ, ಮಾರ್ಗದರ್ಶನ ಹಾಗೂ ನೆರವು ನೀಡಬೇಕು. ಈ ಎರಡು ತಿಂಗಳುಗಳನ್ನು ಗಂಭೀರವಾಗಿ ಪರಿಗಣಿಸಿ ಕರ್ತವ್ಯ ಪ್ರಜ್ಞೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.