ಹಳ್ಳಿಗಳಿಗೆ ತೆರಳಿ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ: ಮಹೇಶ್‌

Team Udayavani, May 13, 2019, 6:30 AM IST

mahesh

ಮಡಿಕೇರಿ: ಅಧಿಕಾರಿಗಳು ಹಳ್ಳಿಗಳಿಗೆ ತೆರಳಿ ಸಮಸ್ಯೆ ಬಗೆಹರಿಸಲು ಮುಂದಾಗಬೇಕು. ಜಿಲ್ಲೆಯ ಯಾವುದೇ ಕಡೆಗಳಲ್ಲಿ ಕುಡಿಯುವ ನೀರು ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್‌ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಸಂಬಂಧಿಸಿದಂತೆ ಶನಿವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ಈಗಾಗಲೇ ಹಲವು ಉಪ ಸಮಿತಿಗಳು ಹಾಗೂ ನೋಡಲ್‌ ಅಧಿಕಾರಿಗಳನ್ನು ನಿಯೋಜಿಸಿದ್ದು, ತಮಗೆ ವಹಿಸಿರುವ ಜವಾಬ್ದಾರಿಯನ್ನು ಕಟ್ಟು ನಿಟ್ಟಾಗಿ ನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕೇಂದ್ರ ಸ್ಥಾನ ಬಿಟ್ಟು ತೆರಳದಿರಿ
ಸದ್ಯದಲ್ಲೆ ಮುಂಗಾರು ಆರಂಭವಾ ಗುವುದರಿಂದ ಯಾರೂ ಸಹ ಕೇಂದ್ರ ಸ್ಥಾನ ಬಿಟ್ಟು ತೆರಳಬಾರದು. ತುರ್ತು ಸಂದರ್ಭದಲ್ಲಿ ಮಾತ್ರ ಜಿಲ್ಲಾಧಿಕಾರಿಯವರ ಅನುಮತಿ ಪಡೆದು ಹೊರಡಬೇಕು ಎಂದರು.

ಅಧಿಕಾರಿಗಳು ಜನರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರನ್ನು ನೋಯಿಸುವುದು, ತೊಂದರೆ ನೀಡುವುದು ಕೇಳಿ ಬಂದಲ್ಲಿ ಮುಂದಿನ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್‌ ಅವರು ಎಚ್ಚರಿಸಿದರು.

ಈಗಾಗಲೇ ಜಿಲ್ಲಾಡಳಿತ ಪ್ರಕೃತಿ ವಿಕೋಪ ಸಂಬಂಧಿಸಿದಂತೆ ಸಾಕಷ್ಟು ಕುಟುಂಬಗಳಿಗೆ ಪರಿಹಾರ ವಿತರಿಸಿದೆ. ಜಮ್ಮಾ ಹಾಗೂ ಬಾಣೆ ಭೂಮಿಗೆ ಸಂಬಂಧಿಸಿದಂತೆ ಇನ್ನೂ ಕೆಲವು ಕುಟುಂಬಗಳಿಗೆ ಪರಿಹಾರ ನೀಡಬೇಕಿರುವ ಬಗ್ಗೆ ಮಾಹಿತಿ ಇದೆ. ಆದ್ದರಿಂದ ಅಂತಹ ನೊಂದ ಎಲ್ಲ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.

ನಗರದಲ್ಲಿ ಒಳಚರಂಡಿ ನಿರ್ಮಾಣ ದಿಂದಾಗಿ ರಸ್ತೆ ಹದಗೆಟ್ಟಿದೆ ಎಂದು ದೂರುಗಳು ಕೇಳಿ ಬರುತ್ತಿದ್ದು, ಕೂಡಲೇ ಇದನ್ನು ಸರಿಪಡಿಸಬೇಕು. ಮಳೆಗಾಲ ಮುಗಿಯುವವರೆಗೆ ರಸ್ತೆ ಅಗೆಯಲು ಹೋಗಬೇಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ಪ್ರಕೃತಿ ವಿಕೋಪ ಹಾಗೂ ಬರ ನಿರ್ವಹಣೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಮನ್‌ ಡಿ.ಪೆನ್ನೇಕರ್‌, ಜಿ.ಪಂ.ಸಿಇಒ ಕೆ.ಲಕ್ಷಿ¾ಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು. ಉಪ ವಿಭಾಗಾಧಿಕಾರಿ ಟಿ.ಜವರೇಗೌಡ. ನಾನಾ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸೂಚನೆ
ಲೋಕೋಪಯೋಗಿ, ಜಿಲ್ಲಾ ಪಂಚಾಯತ್‌ ಎಂಜಿನಿಯರಿಂಗ್‌ ವಿಭಾಗ, ಪಿಎಂಜಿಎಸ್‌ವೈ, ರಾಷ್ಟ್ರೀಯ ಹೆದ್ದಾರಿ ವಿಭಾಗ, ಸಣ್ಣ ನೀರಾವರಿ ಹಾಗೂ ಬೃಹತ್‌ ನೀರಾವರಿ ಮತ್ತಿತರ ಎಂಜಿನಿಯರಿಂಗ್‌ ವಿಭಾಗದ ಇಲಾಖೆಗಳು ಬಾಕಿ ಇರುವ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸುವಂತೆ ಸಚಿವರು ಸೂಚನೆ ನೀಡಿದರು.

ಟಾಪ್ ನ್ಯೂಸ್

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.