ಕೊಡವ ಒಕ್ಕೂಟದಿಂದ ಸಂತ್ರಸ್ತ ವಿದ್ಯಾರ್ಥಿಗಳಿಗೆ 1.90 ಲಕ್ಷ ರೂ. ನೆರವು
Team Udayavani, Apr 4, 2019, 6:30 AM IST
ಮಡಿಕೇರಿ: ಕಳೆದ ವರ್ಷ ಜಿಲ್ಲೆಯಲ್ಲಿ ಸುರಿದ ಮಹಾಮಳೆಗೆ ಸಿಲುಕಿ ಸಂಕಷ್ಟವನ್ನು ಅನುಭವಿಸುತ್ತಿರುವ ಸಂತ್ರಸ್ತ ಕುಟುಂಬಗಳ ವಿದ್ಯಾರ್ಥಿಗಳಿಗೆ ಕೊಡವ ಸಮಾಜಗಳ ಒಕ್ಕೂಟ ಆರ್ಥಿಕ ನೆರವನ್ನು ನೀಡಿದೆ. ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ 19 ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ರೂ. ಗಳಂತೆ 1.90 ಲಕ್ಷ ರೂ. ಗಳನ್ನು ಇಂದು ವಿತರಿಸಲಾಯಿತು.
ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಕೊಡವ ಸಮಾ ಜಗಳ ಒಕ್ಕೂಟದ ಪೋಷಕ ಸದಸ್ಯ ಎಂ.ಸಿ.ನಾಣಯ್ಯ ಹಾಗೂ ಪ್ರಮುಖರು ವಿದ್ಯಾರ್ಥಿಗಳಿಗೆ ಚೆಕ್ ವಿತರಿಸಿದರು.
ಈ ಸಂದರ್ಭ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಕಾಫಿ, ಕಿತ್ತಳೆ, ಏಲಕ್ಕಿ, ಕಾಳುಮೆಣಸು ನೆಲಕಚ್ಚಿದ್ದು, ಬೆಳೆಗಾರರಾದಿಯಾಗಿ ಪ್ರತಿಯೊಬ್ಬರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯಾರ್ಥಿಗಳ ಮೇಲೂ ಅತಿವೃಷ್ಟಿ ಪರಿಣಾಮ ಬೀರಿದೆ. ಪ್ರಕೃತಿ ವಿಕೋಪದ ಸಂದರ್ಭ ಕೊಡವ ಸಮಾಜಗಳು ಸಂತ್ರಸ್ತರಿಗೆ ನೆರವು ನೀಡಿವೆ.
ಒಕ್ಕೂಟ ಅಗತ್ಯ ಸಹಕಾರ
ಅನೇಕ ಸಂಘ, ಸಂಸ್ಥೆಗಳು ಕೊಡವ ಸಮಾಜದ ಮೂಲಕ ಸಹಾಯ ಹಸ್ತ ಚಾಚಿ ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸಿವೆ. ಮುಂದಿನ ದಿನಗಳಲ್ಲಿಯೂ ಒಕ್ಕೂಟ ಅಗತ್ಯ ಸಹಕಾರವನ್ನು ನೀಡಲಿದೆ ಎಂದು ಅವರು ಭರವಸೆ ನೀಡಿದರು.
ಪೋಷಕರು ತಮ್ಮ ಮಕ್ಕಳಿಗಾಗಿ ಆಸ್ತಿ ಮಾಡುವುದಕ್ಕಿಂತ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನೇ ಆಸ್ತಿಯನ್ನಾಗಿ ಪರಿವರ್ತಿಸಬೇಕು ಹೇಳಿದರು.
ಅನಾಹುತಗಳೇ ಸಾಕ್ಷಿ
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ.ಟಿ.ಡಿ.ತಿಮ್ಮಯ್ಯ, ಪ್ರಕೃತಿಗೆ ವಿರು ದ್ಧವಾಗಿ ನಡೆದುಕೊಂಡರೆ ಏನಾ ಗುತ್ತದೆ ಎನ್ನುವುದಕ್ಕೆ ಕಳೆದ ವರ್ಷ ಸಂಭವಿಸಿದ ಜಲಸ್ಫೋಟದಂತಹ ಅನಾಹುತಗಳೇ ಸಾಕ್ಷಿಯಾಗಿದೆ ಎಂದರು.
ಅತಿವೃಷ್ಟಿ ಸಂಕಷ್ಟದ ಸಂದರ್ಭ ಕಾಲೇಜ್‌ನ ವತಿಯಿಂದ ವಿದ್ಯಾರ್ಥಿಗಳಿಗೆ ವಸತಿ ನಿಲಯದ ವ್ಯವಸ್ಥೆಯನ್ನು ಕಲ್ಪಿಸ ಲಾಗಿತ್ತು. ಮಂಗಳೂರು ವಿಶ್ವವಿದ್ಯಾನಿಲಯವು ಒಂದು ಸಮಿತಿ ಯನ್ನು ರಚಿಸಿ ಅದರ ಮೂಲಕ ಸಂತ್ರಸ್ತ ವಿದ್ಯಾರ್ಥಿಗಳಿಗೆ ಸಹಕಾರ ನೀಡಿದೆ. ಅಲ್ಲದೆ, ವಿದ್ಯಾರ್ಥಿಗಳ ವಸತಿ ನಿಲಯದ ಶುಲ್ಕ ಹಾಗೂ ಪರೀûಾ ಶುಲ್ಕವನ್ನು ಮನ್ನಾ ಮಾಡುವಂತೆ ಮತ್ತು ವಿಶ್ವವಿದ್ಯಾನಿಲಯಗಳ ಶುಲ್ಕದಲ್ಲೂ ವಿನಾಯಿತಿ ನೀಡುವಂತೆ ಕೋರಿ ಕೊಳ್ಳಲಾಗಿದೆ ಎಂದು ಡಾ.ತಿಮ್ಮಯ್ಯ ತಿಳಿಸಿದರು.
ದಾನಿಗಳಾದ ಅನಿತಾಪೂಣಚ್ಚ ಮಾತನಾಡಿ, ವಿದ್ಯಾರ್ಥಿಗಳು ಸತತ ಪರಿಶ್ರ ಮದ ಮೂಲಕ ಶೈಕ್ಷಣಿಕ ಸಾಧನೆಯನ್ನು ಮಾಡಬೇಕೆಂದು ಕರೆ ನೀಡಿದರು.
ಎಂ.ಸಿ.ನಾಣಯ್ಯ ಅವರ ಪತ್ನಿ ರೂಪಾನಾಣಯ್ಯ, ಕೊಡವ ಸಮಾಜಗಳ ಒಕ್ಕೂಟದ ಕಾರ್ಯದರ್ಶಿ ವಾಟೇರಿರ ಶಂಕರಿ ಪೂವಯ್ಯ, ಖಜಾಂಚಿ ಕಳ್ಳಿಚಂಡ ಶಾಲಿನಿ ಕಾರ್ಯಪ್ಪ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಹಾಗೂ ಕಾಲೇಜಿನ ಉಪನ್ಯಾಸಕ ಮಾದೇವಯ್ಯ ಉಪಸ್ಥಿತರಿದ್ದರು.
ಕಾವ್ಯಾ ಪ್ರಾರ್ಥಿಸಿದರು. ಪ್ರೊ| ರವಿ ಶಂಕರ್ ಅವರು ಸ್ವಾಗತಿಸಿ, ಡಾ| ಶ್ರೀàಧರ್ ಹೆಗಡೆ ಅವರು ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.