ನಿಲುವಾಗಿಲು ಗ್ರಾಮಕ್ಕೆ ಅಗತ್ಯ ಸೌಲಭ್ಯ ಒದಗಿಸಿ : ಜಿಲ್ಲಾಧಿಕಾರಿ
Team Udayavani, Jul 12, 2018, 6:10 AM IST
ಮಡಿಕೇರಿ : ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಗ್ರಾಮ ಸ್ವರಾಜ್ ಅಭಿಯಾನದಡಿ ಬೆಸ್ಸೂರು ಗ್ರಾ.ಪಂ.ವ್ಯಾಪ್ತಿಯ ನಿಲುವಾಗಿಲು ಗ್ರಾಮ ಆಯ್ಕೆಯಾಗಿದೆ. ಈ ಗ್ರಾಮದ ಕುಟುಂಬಗಳಿಗೆ ಅಡುಗೆ ಅನಿಲ ಹಾಗೂ ವಿದ್ಯುತ್ ಸಂಪರ್ಕ, ಜನಧನ ಯೋಜನೆಯಡಿ ಪ್ರತಿ ಕುಟುಂಬವು ಬ್ಯಾಂಕ್ ಖಾತೆ ಹೊಂದುವುದು, ಹೀಗೆ ಹಲವು ಕಾರ್ಯಕ್ರಮಗಳನ್ನು ಈ ತಿಂಗಳ ಅಂತ್ಯದೊಳಗೆ ಒದಗಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಲುವಾಗಿಲು ಗ್ರಾಮಕ್ಕೆ ಸರ್ಕಾರದ ಹಲವು ಸೌಲಭ್ಯಗಳನ್ನು ಕಲ್ಪಿಸುವ ಬಗ್ಗೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮಾತನಾಡಿದರು.
ಗ್ರಾಮ ಸ್ವರಾಜ್ ಅಭಿಯಾನ ಯೋಜನೆಯಡಿ ಕೊಡಗು ಜಿಲ್ಲೆಯ ನಿಲುವಾಗಿಲು ಗ್ರಾಮ ಆಯ್ಕೆಯಾಗಿದ್ದು, ಈ ಗ್ರಾಮದಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ, ಸೌಭಾಗ್ಯ, ಜೀವನ್ ಜ್ಯೋತಿ ಭೀಮಾ ಯೋಜನೆ, ಸುರûಾ ಭೀಮಾ ಯೋಜನೆ, ಇಂದ್ರ ಧನುಷ್, ಕಿಶನ್ ಕೌಸಲ್ಯ ಯೋಜನೆ, ಸ್ವತ್ಛ ಭಾರತ ಅಭಿಯಾನ ಹೀಗೆ ನಾನಾ ಕಾರ್ಯಕ್ರಮಗಳನ್ನು ತಲುಪಿಸುವಂತೆ ಅವರು ನಿರ್ದೇಶನ ನೀಡಿದರು. ಈ ತಿಂಗಳ ಅಂತ್ಯದವರೆಗೆ ನಿಲುವಾಗಿಲು ಗ್ರಾಮದ ಕುಟುಂಬದಲ್ಲಿ ಅಡುಗೆ ಅನಿಲ ಹಾಗೂ ವಿದ್ಯುತ್ ಸಂಪರ್ಕ ಇಲ್ಲ ಎಂಬ ದೂರುಗಳು ಕೇಳಿ ಬರಬಾರದು ಎಂದು ಸೂಚಿಸಿದರು.
ಜಿ.ಪಂ.ಸಿಇಓ ಪ್ರಶಾಂತ್ ಕುಮಾರ್ ಮಿಶ್ರ ಮಾತನಾಡಿ ನಿಲುವಾಗಿಲು ಗ್ರಾಮದಲ್ಲಿ ಎಷ್ಟು ಕುಟುಂಬಗಳಿವೆ, ಜನಸಂಖ್ಯೆ ಎಷ್ಟು, ಮಹಿಳೆಯರು ಮತ್ತು ಪುರುಷರ ಸಂಖ್ಯೆ. ಈಗಾಗಲೇ ನೀಡಲಾಗಿರುವ ಫಲಾನುಭವಿಗಳ ಪಟ್ಟಿ, ಮುಂದೆ ಸೌಲಭ್ಯ ಕಲ್ಪಿಸಬೇಕಿರುವ ಫಲಾನುಭವಿಗಳ ಪಟ್ಟಿಯನ್ನು ಜುಲೈ, 25 ರೊಳಗೆ ತಲುಪಿಸುವಂತೆ ಬೆಸ್ಸೂರು ಗ್ರಾ.ಪಂ. ಪಿಡಿಒಗೆ ಸೂಚನೆ ನೀಡಿದರು.
ಭಾರತ ಸರ್ಕಾರದ ಕಾರ್ಯಕ್ರಮಗಳ ಜಿಲ್ಲಾ ನೋಡೆಲ್ ಅಧಿಕಾರಿ ಪದ್ಮನಾಭನ್ ಅವರು ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ಸಂಬಂಧ ಈಗಾಗಲೇ ಸೌಲಭ್ಯಗಳನ್ನು ಒದಗಿಸಲಾಗಿರುವ ಫಲಾನುಭವಿಗಳ ಪಟ್ಟಿ ಹಾಗೂ ಮುಂದೆ ಸೌಲಭ್ಯ ಒದಗಿಸಬೇಕಿರುವ ಫಲಾನು ಭವಿಗಳ ಪಟ್ಟಿ ಒದಗಿಸುವಂತೆ ತಿಳಿಸಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸೇರಿದಂತೆ ಸಾಮಾನ್ಯ ವರ್ಗದ ಬಡವರಿಗೂ ಅನಿಲ ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಅವರು ಸಲಹೆ ನೀಡಿದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಪುಟ್ಟಸ್ವಾಮಿ ಅವರು ಉಜ್ವಲ ಯೋಜನೆಯಡಿ ನಿಲುವಾಗಿಲು ಗ್ರಾಮದ ಎಲ್ಲಾ ಕುಟುಂಬಗಳಿಗೂ ಅನಿಲ ಸಂಪರ್ಕ ಒದಗಿಸಲಾಗುವುದು ಎಂದು ತಿಳಿಸಿದರು.
ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಸೋಮಶೇಖರ್ ಅವರು ಸೌಭಾಗ್ಯ ಯೋಜನೆಯಡಿ ನಿಲುವಾಗಿಲು ಗ್ರಾಮದ ಎಲ್ಲಾ ಕುಟುಂಬಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಾಜೇಶ್ ಅವರು ನಿಲುವಾಗಿಲು ಗ್ರಾಮದ ನಾಗರಿಕರಿಗೆ ಆರೋಗ್ಯ ಸೇವೆ ಒದಗಿಸುವ ಸಂಬಂಧ ಇಂದ್ರಧನುಷ್ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಬಂಗಾರು ಗುಪ್ತಾಜೀ ಅವರು ಜನಧನ ಯೋಜನೆ ಸೇರಿದಂತೆ ಹಲವು ಯೋಜನೆ ಗಳ ಮಾಹಿತಿ ಬಗ್ಗೆ ಮಾಹಿತಿ ನೀಡಿದರು.
ಬೆಸ್ಸೂರು ಗ್ರಾ.ಪಂ.ಪಿಡಿಒ ಯಾದವ ಅವರು ಗ್ರಾಮ ವಿಕಾಸ್ ಯೋಜನೆ ಅನುಷ್ಠಾನ ಸಂಬಂಧ ಈಗಾಗಲೇ ಗ್ರಾಮಸಭೆ ನಡೆಸಲಾಗಿದೆ. ಜತೆಗೆ ಸರ್ವೆ ಕಾರ್ಯವು ನಡೆದಿದೆ. ನಿಲುವಾಗಿಲು, ಅಗಳಿ, ಚಿಕ್ಕಭಂಡಾರ ವ್ಯಾಪ್ತಿಯಲ್ಲಿ 545 ಕುಟುಂಬಗಳಿದ್ದು, ಹಲವು ಸೌಲಭ್ಯಗಳನ್ನು ಕಲ್ಪಿಸಬೇಕಿದೆ ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್.ಸಿ.ಎಚ್. ಅಧಿಕಾರಿ ಡಾ| ನಿಲೇಶ್, ಕುಟುಂಬ ಕಲ್ಯಾಣಾಧಿಕಾರಿ ಡಾ| ಆನಂದ್ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್ ತೀರ್ಪು
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್
Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.
ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.