ಬಿಸಿಎಎಸ್ ಮುಖ್ಯಸ್ಥರಾಗಿ ಕೊಡಗಿನ ಗಣಪತಿ ನೇಮಕ
Team Udayavani, Oct 8, 2020, 11:06 PM IST
ಮಡಿಕೇರಿ: ಹಿರಿಯ ಐಪಿಎಸ್ ಅಧಿಕಾರಿ ಕೊಡಗಿನ ಮನೆಯಪಂಡ ಎ. ಗಣಪತಿ ಅವರನ್ನು ನಾಗರಿಕ ವಿಮಾನ ಯಾನದ ಭದ್ರತಾ ವಿಭಾಗ(ಬಿಸಿಎಎಸ್)ದ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
1986ನೇ ಸಾಲಿನ ಉತ್ತರಾಖಂಡ ಕೇಡರ್‌ನ ಹಿರಿಯ ಐಪಿಎಸ್ ಅಧಿಕಾರಿಯಾಗಿರುವ ಎಂ.ಎ. ಗಣಪತಿ ಅವರು ದಕ್ಷಿಣ ಕೊಡಗಿನ ಕುಂದಾ ಗ್ರಾಮದ ಮನೆಯಪಂಡ ಅಪ್ಪಯ್ಯ ಮತ್ತು ಪ್ರೇಮಲತಾ ದಂಪತಿಯ ಪುತ್ರರಾಗಿದ್ದಾರೆ. 2024ರ ಫೆಬ್ರವರಿಯಲ್ಲಿ ಅವರು ಸೇವಾ ನಿವೃತ್ತರಾಗಲಿದ್ದು, ಅಲ್ಲಿಯವರೆಗೆ ಬಿಸಿಎಎಸ್ ಮಹಾ ನಿರ್ದೇಶಕರಾಗಿ ಕರ್ತವ್ಯದಲ್ಲಿ ಮುಂದುವರಿಯಲಿದ್ದಾರೆ.
ಈ ಹಿಂದೆ ಬಿಸಿಎಎಸ್ ಮುಖ್ಯಸ್ಥರ ಹುದ್ದೆಯಲ್ಲಿದ್ದ ರಾಕೇಶ್ ಅಸ್ತಾನ ಅವರನ್ನು ಗಡಿ ಭದ್ರತಾ ಪಡೆಯ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಿದ ಬಳಿಕ ಈ ಹುದ್ದೆ ಖಾಲಿ ಉಳಿದಿತ್ತು. ಗೃಹ ಇಲಾಖೆಯ ವಕ್ತಾರರಾಗಿ ಸೇವೆ ಸಲ್ಲಿಸಿದ್ದಗಣಪತಿ ಅವರನ್ನು 2016ರಲ್ಲಿ ಉತ್ತರಾಖಂಡ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿತ್ತು. ಅವರು ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್)ಯ ವಿಶೇಷ ಮಹಾ ನಿರ್ದೇಶಕರಾಗಿ ಮತ್ತು ವಿಮಾನ ನಿಲ್ದಾಣದ ಮುಖ್ಯಸ್ಥರಾಗಿ ಕರ್ತವ್ಯದಲ್ಲಿದ್ದರು. 1999ರಲ್ಲಿ ಸಿಬಿಐಯಲ್ಲೂ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.