![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 31, 2024, 12:12 AM IST
ಮಡಿಕೇರಿ: ಸುಂಟಿಕೊಪ್ಪ ಪಟ್ಟಣದಲ್ಲಿ ಶನಿವಾರ ತಡರಾತ್ರಿ ಸರಣಿ ಕಳ್ಳತನ ನಡೆದಿದ್ದು, 1 ಲಕ್ಷ ರೂ.ಗಳಿಗೂ ಅಧಿಕ ನಗದನ್ನು ಕಳ್ಳರು ಕದ್ದೊಯ್ದಿದ್ದಾರೆ. ಈ ಘಟನೆಯಿಂದ ವರ್ತಕರು ಹಾಗೂ ನಿವಾಸಿಗಳು ಆತಂಕಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಪಟ್ಟಣದ ಹೃದಯ ಭಾಗದಲ್ಲಿರುವ ಬಟ್ಟೆ ಅಂಗಡಿಯ ಮುಂಭಾಗದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು 1 ಲಕ್ಷ ರೂ. ನಗದು, ಕೆಲವು ಬಟ್ಟೆಗಳು ಮತ್ತು ಕನ್ನಡಕಗಳನ್ನು ಕಳ್ಳತನ ಮಾಡಿದ್ದಾರೆ.
ಇದಕ್ಕೂ ಮೊದಲು ಸುರೇಶ್ ಕುಶಾಲಪ್ಪ ಅವರಿಗೆ ಸೇರಿದ ಹೊಗೆ ನಿಯಂತ್ರಣ ಕೇಂದ್ರದಲ್ಲಿ ನಿಲ್ಲಿಸಿದ್ದ ಬೈಕನ್ನು ಚೋರರು ಕದ್ದೊಯ್ದಿದ್ದಾರೆ. ಅನಂತರ ಬಸ್ ನಿಲ್ದಾಣದಲ್ಲಿರುವ ಪೆಟ್ರೋಲ್ ಬಂಕ್‌ಗೆ ನುಗ್ಗಿ ಹಣ ಸಿಗದೇ ಇದ್ದಾಗ ಎರಡು ಪ್ಯಾಕೇಟ್ ವಾಹನದ ಆಯಿಲ್ ಅನ್ನು ತೆಗೆದುಕೊಂಡು ಹೋಗಿದ್ದಾರೆ. ಇಲ್ಲಿರುವ ಸಿಸಿ ಕೆಮರಾದಲ್ಲಿ ಕಳ್ಳತನದ ದೃಶ್ಯ ಸೆರೆಯಾಗಿದ್ದು, ಇಬ್ಬರು ಮುಸುಕುಧಾರಿಗಳು ಇರುವುದು ಕಂಡು ಬಂದಿದೆ. ಪಕ್ಕದಲ್ಲಿದ್ದ ಹಾಲಿನ ಡೈರಿಯ ಬೀಗ ಮುರಿದು ಒಳನುಗ್ಗಿದ ಕಳ್ಳರು 2 ಸಾವಿರ ರೂ.ಗಳನ್ನು ಕದ್ದೊಯ್ದಿದ್ದಾರೆ.
ಮೆಡಿಕಲ್ಸ್‌ವೊಂದರ ಮಾಲಕ ಕೆ.ಪಿ.ಜಗನ್ನಾಥ್ ಅವರ ಹಳೆಯ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಏನೂ ಸಿಗದೆ ಕಾಲ್ಕಿತ್ತಿದ್ದಾರೆ.
ಕಳ್ಳತನ ನಡೆದ ಸ್ಥಳಕ್ಕೆ ಅಪರಾಧ ಪತ್ತೆ ದಳದ ಪೊಲೀಸ್ ಅಧಿಕಾರಿ ಸ್ವಾಮಿ ಹಾಗೂ ಸಿಬಂದಿ, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಸುಕುಧಾರಿ ಚೋರರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.