ನ್ಯಾಯಬೆಲೆ ಅಂಗಡಿಯಲ್ಲಿ ಸರ್ವರ್‌ ಸಮಸ್ಯೆ: ಪರದಾಟ

Team Udayavani, May 1, 2019, 6:34 AM IST

Z-BETTAGERI-2

ಮಡಿಕೇರಿ: ಬೆಟ್ಟಗೇರಿ ಗ್ರಾಮ ಪಂಚಾಯತ್‌ ಪಕ್ಕದಲ್ಲಿರುವ ನ್ಯಾಯಬೆಲೆ ಅಂಗಡಿಯಲ್ಲಿ ಸರ್ವರ್‌ ಸಮಸ್ಯೆ ಕಾರಣ ಅನ್ನಭಾಗ್ಯ ಯೋಜನೆಯಡಿ ನೀಡುವ ಪಡಿತರ ಸಾಮಗ್ರಿ ಪಡೆಯಲು ಗ್ರಾಹಕರು ಪರದಾಡುವಂತಹ ಪರಿಸ್ಥಿತಿ ಸೋಮವಾರ ನಿರ್ಮಾಣವಾಯಿತು.

ಪಡಿತರ ಪಡೆಯಲು ಬಯೋ ಮೆಟ್ರಿಕ್‌ ಪದ್ಧತಿ ಅಳಡಿಸಲಾಗಿದ್ದು, ಸರ್ವರ್‌ ದೋಷದಿಂದ ಗ್ರಾಹಕರು ಬೆಳಿಗ್ಗೆಯಿಂದ ಸಂಜೆಯವರೆಗೆ ಸರದಿ ಸಾಲಿನಲ್ಲಿ ನಿಲ್ಲಬೇಕಾಯಿತು. ಅಲ್ಲದೆ ಬಹುತೇಕ ಮಂದಿ ಪಡಿತರ ಸಿಗದೆ ವಾಪಸಾದರು.

ವಯೋವೃದ್ಧರು, ಮಹಿಳೆಯರು ಸುಡು ಬಿಸಿಲಿನಲ್ಲಿ ಸರದಿಯಲ್ಲಿ ನಿಂತು ಬೇಸತ್ತು ಮನೆಗಳಿಗೆ ಮರಳಿದ ದೃಶ್ಯ ಕಂಡು ಬಂತು.ಬೆಟ್ಟಗೇರಿ, ಅವಂದೂರು, ಅರ್ವ ತ್ತೂಕ್ಲು, ಹೆರವನಾಡು, ಪಾಲೂರು ಗ್ರಾಮದ ನೂರಾರು ಕುಟುಂಬಗಳಿಗೆ ಇಲ್ಲಿ ಪಡಿತರ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ.

ಆದರೆ ಪ್ರತಿದಿನ ಒಂದಲ್ಲ ಒಂದು ಕಾರಣ ನೀಡಿ ಪಡಿತರ ಸಾಮಗ್ರಿಗಳನ್ನು ಸಿಬಂದಿಗಳು ನೀಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.

ಬೆಳಗ್ಗೆ 9 ಗಂಟೆಯಿಂದ ಸಂಜೆಯವರೆಗೆ ಕಾದರೂ ಸಾಮಗ್ರಿಗಳು ಸಿಗಲ್ಲ. ಪಡಿತರಕ್ಕಾಗಿ ಕಾಯಲು 2 ದಿನದ ಕೂಲಿ ವ್ಯರ್ಥವಾಗುತ್ತಿದೆ. ಆಯಾ ತಿಂಗಳ ಪಡಿತರ ಆಯಾ ತಿಂಗಳಲ್ಲಿಯೇ ಪಡೆಯಬೇಕು. ಇಲ್ಲದೆ ಹೋದಲ್ಲಿ ಪಡಿತರದಿಂದ ವಂಚಿತವಾಗಬೇಕಾಗುತ್ತದೆಎಂದು ಗ್ರಾಮಸ್ಥರು ಅಳಲು ತೋಡಿ ಕೊಂಡರು.

ಬೆಳಗ್ಗೆ 9.30ರ ಅನಂತರ ಪಡಿತರ ಸಾಮಗ್ರಿಗಳನ್ನು ನೀಡಲಾಗುತ್ತದೆ, ಆದರೆ ನ್ಯಾಯಬೆಲೆ ಅಂಗಡಿ ಸಿಬಂದಿ ಮಾತ್ರ ಸರ್ವರ್‌ ಸರಿ ಇಲ್ಲ, ಇಂಟರ್‌ನೆಟ್‌ ಇಲ್ಲ ಎಂದು ಹೇಳಿಕೊಂಡು ಪಕ್ಕದ ಬ್ಯಾಂಕ್‌ನಲ್ಲಿ ಕುಳಿತಿರುತ್ತಾರೆ. ಕೆಲವೊಮ್ಮೆ 5 ನಿಮಿಷ ಬಂದೆ ಎಂದು ಹೇಳಿ ಹೋದವರು ಮತ್ತೆ ಮರಳುತ್ತಿಲ್ಲ ಎಂದು ಹೆರವನಾಡು ಗ್ರಾಮಸ್ಥ ಗಣೇಶ್‌ ದೂರಿದರು.

ತತ್‌ಕ್ಷಣ ಆಹಾರ ಇಲಾಖೆಯ ಅಧಿಕಾ ರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-kodagu

Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್‌ ಮೇಜರ್‌

12

Madikeri: ಅರೆಸುಟ್ಟ ಮೃತದೇಹದ ಪ್ರಕರಣ; ಪೊಲೀಸರಿಂದ ತಪ್ಪಿಸಿಕೊಂಡಿದ್ದ ಅಂಕೂರ್‌ ರಾಣ ಬಂಧನ

Madikeri: ಚೆಂಬೆಬೆಳ್ಳೂರು; ಕಾಡಾನೆ ಹಾವಳಿಯಿಂದ ಕೃಷಿಗೆ ಹಾನಿ

Madikeri: ಚೆಂಬೆಬೆಳ್ಳೂರು; ಕಾಡಾನೆ ಹಾವಳಿಯಿಂದ ಕೃಷಿಗೆ ಹಾನಿ

Kodagu-SP

Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!

Madikeri: ತಲಕಾವೇರಿಯಲ್ಲಿ ಸ್ವಾಮೀಜಿಗಳಿಂದ ವಿಶೇಷ ಪೂಜೆ

Madikeri: ತಲಕಾವೇರಿಯಲ್ಲಿ ಸ್ವಾಮೀಜಿಗಳಿಂದ ವಿಶೇಷ ಪೂಜೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.