ರೋಟರಿಯಿಂದ ಕಾಂಕ್ರಿಟ್ ಬೆಂಚ್‌ಗಳ ಕೊಡುಗೆ
Team Udayavani, Jul 23, 2017, 7:00 AM IST
ಶನಿವಾರಸಂತೆ: ಶನಿವಾರ ಸಂತೆ ರೋಟರಿ ಕ್ಲಬ್ ವತಿಯಿಂದ ಸಮಿಪದ ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ರೋಗಿಗಳು ಮತ್ತು ಸಾರ್ವಜನಿಕರು ಕುಳಿತುಕೊಳ್ಳುವ ಸಲುವಾಗಿ ಕಾಂಕ್ರಿಟ್ ಬೆಂಚ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು.
ಈ ಸಂದರ್ಭದಲ್ಲಿ ನಡೆದ ಸಮಾ ರಂಭದಲ್ಲಿ ಮಾತನಾಡಿದ ರೋಟರಿ ಕ್ಲಬ್ ಅಧ್ಯಕ್ಷ ಎಚ್.ವಿ. ದಿವಾಕರ್, ರೋಟರಿ ಸಂಸ್ಥೆ ಸರಕಾರಿ ಆಸ್ಪತ್ರೆ, ಸರಕಾರಿ ಶಾಲೆಗಳ ಅಭಿವೃದ್ದಿಗಾಗಿ ಪ್ರೋತ್ಸಾಹಿಸುವ ಕಾರ್ಯದ ಜತೆಯಲ್ಲಿ ಸಾರ್ವಜನಿಕ ಮತ್ತು ಸಮಾಜ ಸೇವೆಯನ್ನು ಮಾಡುತ್ತಿದೆ, ಸಾರ್ವಜನಿಕರಿಗೆ ಉಪಯೋಗವಾಗುವಂತೆ ಕೊಡು ಗೆಯನ್ನು ನೀಡುತ್ತಿದೆ, ರೋಟರಿ ಸಂಸ್ಥೆ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಮಾಜ ಮುಖೇನ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳಗುವುದು ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಸುಪರ್ಣ ಕೃಷ್ಣನಂದ್ ಮಾತನಾಡಿ, ರೋಟರಿ ಸಂಸ್ಥೆ ಸಮಾಜದಲ್ಲಿ ಜನರಿಗೆ ಸೇವಾ ಮನೋ ಭಾವನೆಯನ್ನು ಹೆಚ್ಚಿಸುವಂತಹ ಕಾರ್ಯವನ್ನು ಮಾಡುತ್ತಿರುವುದು ಶ್ಲಾಘನಿಯ ಎಂದರು.
ಸಾರ್ವಜನಿಕರಿಗೆ ಉಪಯೋಗ
ಸರಕಾರದ ಕಾರ್ಯಕ್ರಮಗಳಿಗೆ ರೋಟರಿ ಸಂಸ್ಥೆಯಿಂದ ಉದಾರ ಕೊಡುಗೆಯನ್ನು ನೀಡುವುದ ರಿಂದ ಸಾರ್ವಜನಿಕರಿಗೆ ಉಪಯೋಗವಾಗುತ್ತದೆ, ರೋಟರಿ ಸಂಸ್ಥೆಯ ಸಮಾಜ ಸೇವೆಯ ಧ್ಯೇಯೋದ್ದೇಶದಿಂದ ಸಮಾಜವೂ ಅಭಿವೃದ್ಧಿ ಹೊಂದುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಶನಿವಾರಸಂತೆ ರೋಟರಿ ವಲಯದ ಕಾರ್ಯದರ್ಶಿ ಅರವಿಂದ್, ರೋಟರಿ ಸಂಸ್ಥೆ ನಿರ್ದೇಶಕರಾದ ಮೋಹನ್‌ರಾಮ್, ವಸಂತ್‌ಕುಮಾರ್, ಪಿ. ನಾಗೇಶ್, ಆಸ್ಪತ್ರೆಯ ಆರೋಗ್ಯ ನಿರೀಕ್ಷಕ ಶಿವಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
Kasaragodu: ನಾಪತ್ತೆಯಾಗಿದ್ದ ಯುವಜೋಡಿ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.