ಶ್ರೀಮಂಗಲ ರಾಮತೀರ್ಥ ಪ್ರವಾಹ : ಅಪಾರ ಕೃಷಿ ಹಾನಿ
Team Udayavani, Aug 15, 2019, 5:45 AM IST
ಮಡಿಕೇರಿ: ಶ್ರೀ ಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಕೂರು ಗ್ರಾಮದಲ್ಲಿ ಹರಿಯುತ್ತಿರುವ ರಾಮತೀರ್ಥ ನದಿಯಲ್ಲಿ ಉಂಟಾದ ಪ್ರವಾಹದಿಂದಾಗಿ ಕೋಟ್ರಂಗಡ ಕುಟುಂಬಸ್ಥರಿಗೆ ಸೇರಿದ ನೂರಾರು ಎಕರೆ ನಾಟಿ ಮಾಡಿದ ಗದ್ದೆ ಮುಳುಗಡೆಯಾಗಿ ಲಕ್ಷಾಂತರ ಮೌಲ್ಯದ ಕೃಷಿ ನಷ್ಟ ಉಂಟಾಗಿದೆ ಎಂದು ಕೆ.ಎಂ.ಚಿಣ್ಣಪ್ಪ ಅವರು ತಿಳಿಸಿದ್ದಾರೆ.
ಗದ್ದೆಯನ್ನು ಉಳುಮೆ ಮಾಡಿ ನಾಟಿ ಕಾರ್ಯ ಮುಗಿಸಲಾಗಿತ್ತು. ಮಳೆಯಿಂದಾಗಿ ರಾಮತೀರ್ಥ ಹೊಳೆಯಲ್ಲಿ ಪ್ರವಾಹ ಉಂಟಾಗಿ, ನಾಟಿ ಮಾಡಲಾದ ಗದ್ದೆಯಲ್ಲಿ ಮರಳು, ಹೂಳು ತುಂಬಿಕೊಂಡಿದೆ. ಭತ್ತದ ಸಸಿ ಕೊಳೆತು ಹೋಗುವ ಸ್ಥಿತಿಯಲ್ಲಿದ್ದು ಸುಮಾರು ರೂ.20 ಲಕ್ಷ ನಷ್ಟ ಸಂಭವಿಸಿದೆ ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗಿನ ವರ್ಷದಲ್ಲಿ ರೈತರು ಭತ್ತಕ್ಕೆ ಸೂಕ್ತ ಬೆಂಬಲ ಬೆಲೆ ದೊರಕದೆ, ಕಾಡು ಪ್ರಾಣಿಗಳ ಉಪಟಳ, ಕಾರ್ಮಿಕರ ಕೊರತೆಯಿಂದಾಗಿ ಭತ್ತದ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಈ ಹಂತದಲ್ಲಿ ಕೃಷಿ ಇಲಾಖೆ ಹಾಗೂ ರಾಜ್ಯ ಸರ್ಕಾರಗಳ ಉತ್ತೇಜನ ಅಗತ್ಯ. ಇದೀಗ ಭತ್ತದ ಗದ್ದೆಯಿಂದ ಮರಳನ್ನು ತೆಗೆಯುವದೇ ಪ್ರಯಾಸದ ಕೆಲಸವಾಗಿದೆ. ಈ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು ಅರಿತು ಪರಿಹಾರ ಕಲ್ಪಿಸಬೇಕು ಎಂದು ರೈತರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.