ವಿಶ್ವ ಸ್ತನ್ಯಪಾನ ಸಪ್ತಾಹ ಆರಂಭ
Team Udayavani, Aug 3, 2019, 5:38 AM IST
ಕಾಸರಗೋಡು: ವಿಶ್ವ ಎದೆಹಾಲುಣಿಸುವ ಸಪ್ತಾಹ ಕಾರ್ಯಕ್ರಮ ಜಿಲ್ಲೆ ಯಲ್ಲಿ ಆರಂಭಗೊಂಡಿತು.
ಜಿಲ್ಲಾ ಐ.ಸಿ.ಡಿ.ಎಸ್. ಪ್ರೋಗ್ರಾಂ ಕಚೇರಿಯ ನೇತೃತ್ವದಲ್ಲಿ ಸಪ್ತಾಹ ಆಯೋಜಿಸಲಾಗಿದ್ದು, ಇದರ ಅಂಗವಾಗಿ ಸಹಿ ಅಭಿಯಾನ ಜರಗಿತು. ಹೆತ್ತವರನ್ನು ಜಾಗೃತಿಗೊಳಿಸುವ ಮತ್ತು ಎದೆಹಾಲುಣಿಸುವಿಕೆಯನ್ನು ಪ್ರೋತ್ಸಾಹಿಸುವ ಸಂದೇಶದೊಂದಿಗೆ ಈ ಅಭಿಯಾನ ನಡೆಯಿತು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಮಾರಂಭಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ.ಜಿ.ಸಿ.ಬಶೀರ್ ಚಾಲನೆ ನೀಡಿದರು.ಐ.ಸಿ.ಡಿಎಸ್. ಪ್ರೋಗ್ರಾಂ ಆಫೀಸರ್ ಕವಿತಾ ರಾಣಿ ರಂಜಿತ್,ಜಿಲ್ಲಾ ಮಹಿಳಾ ಶಿಶು ಅಭಿವೃದ್ಧಿ ಅಧಿಕಾರಿ ಡೀನಾ ಭರತನ್,ಜಿಲ್ಲಾ ಶಿಶು ಸಂರಕ್ಷಣೆ ಅಧಿಕಾರಿ ಬಿಜು ಪಿ. ಮೊದಲಾದವರು ಉಪಸ್ಥಿತರಿದ್ದರು.
ಇದೇ ಸಮಾರಂಭದ ಅಂಗವಾಗಿ ವಿಚಾರಸಂಕಿರಣ ಮತ್ತು ಜನಜಾಗೃತಿ ಕಾರ್ಯಕ್ರಮ ಕಾಂಞಂಗಾಡ್ ಮೀನಾಪೀಸ್ ಪುರಭವನದಲ್ಲಿ ನಡೆಯಿತು. ಜಿಲ್ಲಾ ಐ.ಸಿ.ಡಿ.ಎಸ್. ಪ್ರೋಗ್ರಾಂ ಆಫೀಸ್, ಆರೋಗ್ಯ ಇಲಾಖೆ, ಇಂಡಿಯನ್ ಅಸೋಸಿಯೇಶನ್ ಆಫ್ ಪೀಡಿಯಾಟ್ರಿಕ್ಸ್ ಜಂಟಿ ವತಿಯಿಂದ ಈ ಕಾರ್ಯಕ್ರಮ ಜರಗಿತು. ಕಾಂಞಂಗಾಡ್ ನಗರಸಭೆ ಅಧ್ಯಕ್ಷ ವಿ.ವಿ. ರಮೇಶನ್ ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶಾಂತಮ್ಮಾ ಫಿಲಿಪ್ ಅಧ್ಯಕ್ಷತೆ ವಹಿಸಿದರು. ಜಿಲ್ಲಾ ವೈದ್ಯಾಧಿಕಾರಿ ಡಾ| ಎ.ಪಿ. ದಿನೇಶ್ ಕುಮಾರ್ ಸಪ್ತಾಹದ ಸಂದೇಶ ಸಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
Divorce Rumours: ಚಹಾಲ್ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?
Aranthodu: ವ್ಯಕ್ತಿಯ ಮೇಲೆ ಕಾಡಾನೆ ದಾಳಿ
Sandalwood: ಫಸ್ಟ್‌ಲುಕ್‌ನಲ್ಲಿ”ಕುಲದಲ್ಲಿ ಕೀಳ್ಯಾವುದೋ’
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.