ರಾಜ್ಯಮಟ್ಟದ ಕೆಸರು ಗದ್ದೆ ಕ್ರೀಡಾಕೂಟ
Team Udayavani, Aug 14, 2017, 7:45 AM IST
ಮಡಿಕೇರಿ: ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದರಿಂದ ಪ್ರತಿಯೊಬ್ಬರೂ ಒಂದುಗೂಡಲು ಮತ್ತು ಬಾಂಧವ್ಯ ಬೆಸೆಯುವುದರ ಜೊತೆಗೆ ಮಾನಸಿಕ ಮತ್ತು ದೈಹಿಕ ವಿಕಸನಕ್ಕೆ ಸಹಕಾರಿಯಾಗಿದೆ ಎಂದು ಜಿ.ಪಂ. ಅಧ್ಯಕ್ಷರಾದ ಬಿ.ಎ. ಹರೀಶ್ ಅವರು ಅಭಿಪ್ರಾಯಪಟ್ಟರು.
ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಯೂತ್ ಹಾಸ್ಟೇಲ್ ಅಸೋಸಿಯೇಷನ್ ಆಫ್ ಇಂಡಿಯಾ, ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕು ಯುವ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಕಗ್ಗೊàಡ್ಲು ಗ್ರಾಮದ ದಿ| ಸಿ.ಡಿ. ಬೋಪಯ್ಯ ಅವರ ಗದ್ದೆಯಲ್ಲಿ ಶನಿವಾರ ನಡೆದ ರಾಜ್ಯ ಮಟ್ಟದ 26ನೇ ವರ್ಷದ ಕೆಸರು ಗದ್ದೆ ಕ್ರೀಡೋತ್ಸವದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಭತ್ತ ಬೆಳೆಯುವುದು ಕಡಿಮೆಯಾಗಿದೆ. ಆದ್ದರಿಂದ ಸರಕಾರ ಪ್ರತಿ ಹೆಕ್ಟೇರ್‌ಗೆ4 ಸಾವಿರ ರೂ ಸಹಾಯಧನ ನೀಡುತ್ತಿದ್ದು, ಇದನ್ನು ಬಳಸಿ ಕೊಳ್ಳು ವಂತಾಗಬೇಕು, ಈ ಸಹಾಯಧನವನ್ನು 10 ಸಾವಿರ ರೂ. ಗೆಹೆಚ್ಚಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿ.ಪಂ.ಅಧ್ಯಕ್ಷರು ಹೇಳಿದರು.
ಭತ್ತ ಬೆಳೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಭತ್ತಕ್ಕೆ ಇನ್ನಷ್ಟು ಹೆಚ್ಚಿನ ಬೆಂಬಲ ಬೆಲೆ ನೀಡುವಂತಾಗಬೇಕು. ಆ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆಯಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಇಂದಿನ ಯಾಂತ್ರೀಕೃತ ನಾಟಿ ಯಂತ್ರ ಬಳಸಿಕೊಂಡು ಭತ್ತ ಬೆಳೆಯುವಂತಾಗಬೇಕು. ಕೃಷಿ ಪದ್ಧತಿಯನ್ನು ಉಳಿಸಿಕೊಂಡು ಹೋಗಬೇಕಿದೆ. ಗ್ರಾಮೀಣ ಸೊಗಡಿನ ಕೆಸರುಗದ್ದೆ ಕ್ರೀಡಾಕೂಟಕ್ಕೆ ಮತ್ತಷ್ಟು ಉತ್ತೇಜನ ನೀಡಬೇಕಿದೆ ಎಂದು ಬಿ.ಎ. ಹರೀಶ್ ಅವರು ತಿಳಿಸಿದರು.
ತಾ.ಪಂ. ಸದಸ್ಯರಾದ ಕುಮುದ ರಶ್ಮಿ ಅವರು ಮಾತನಾಡಿ ಜಿಲ್ಲೆಯ ನಾನಾ ಭಾಗಗಲ್ಲಿ ಕೆಸರು ಗದ್ದೆ ಕ್ರೀಡಾಕೂಟ ಏರ್ಪಡಿಸಿ ಗ್ರಾಮೀಣರು ಒಂದೆಡೆ ಸೇರುವಂತಾಗಲು ಅವಕಾಶವಾಗಿದೆ. ಮಳೆಗಾಲದ ಅವಧಿಯಲ್ಲಿ ಗ್ರಾಮೀಣ ಕೆಸರು ಗದ್ದೆ ಕೀಡಾ ಕೂಟಗಳ ಸಂಭ್ರಮ ಒಂದು ರೀತಿ ಹಬ್ಬವಿದ್ದಂತೆ. ಆ ದಿಸೆಯಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಒತ್ತು ನೀಡುವುದು ಅಗತ್ಯವಾಗಿದೆ ಎಂದರು.
ಮೇಕೇರಿ ಗ್ರಾ.ಪಂ.ಉಪಾಧ್ಯಕ್ಷರಾದ ಕೆ.ಎಸ್.ಭೀಮಯ್ಯ, ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಕಾಂಗೀರ ಸತೀಶ್, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮೀ ಬಾಯಿ, ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷರಾದ ಮಂಡುವಂಡ ಬಿ. ಜೋಯಪ್ಪ, ಮಡಿಕೇರಿ ತಾಲೂಕು ಯುವ ಒಕ್ಕೂಟದ ಅಧ್ಯಕ್ಷರಾದ ನವೀನ್ ದೇರಳ, ಮಾಜಿ ಅಧ್ಯಕ್ಷರಾದ ಪಿ.ಪಿ. ಸುಕುಮಾರ್, ಸಾಬಾ ಸುಬ್ರಮಣಿ, ಇಂಧುಮತಿ, ಯುವ ಒಕ್ಕೂಟದ ಪದಾಧಿಕಾರಿಗಳು ಮತ್ತಿತರರು ಪಾಲ್ಗೊಂಡಿದ್ದರು.
ಭಗವತಿ ಯುವಕ ಸಂಘ, ನಿಸರ್ಗ ಯುವತಿ ಮಂಡಳಿ ಸೇರಿದಂತೆ ವಿವಿಧ ಕ್ರೀಡಾ ಸಂಘಗಳಿಗೆ 2016-17 ನೇ ಸಾಲಿನ ಕ್ರೀಡಾ ಸಾಮಗ್ರಿಗಳನ್ನು ಇದೇ ಸಂದರ್ಭದಲ್ಲಿ ವಿತರಣೆ ಮಾಡ ಲಾಯಿತು. ವಾಲಿಬಾಲ್, ಥ್ರೋಬಾಲ್, ಹಗ್ಗ ಜಗ್ಗಾಟ, ನಾಟಿ ಓಟ ಹೀಗೆ ನಾನಾ ಕೆಸರು ಗದ್ದೆ ಕ್ರೀಡಾಕೂಟ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.