Madikeri: ನಕಲಿ ಅಂಕಪಟ್ಟಿ ಸಲ್ಲಿಸಿ ಸರಕಾರಿ ಹುದ್ದೆ: ಜೈಲು ಶಿಕ್ಷೆ
Team Udayavani, Jan 13, 2025, 10:49 PM IST
ಮಡಿಕೇರಿ: ಅಂಚೆ ಇಲಾಖೆಯಲ್ಲಿ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆ ಪಡೆಯಲು ನಕಲಿ ಅಂಕ ಪಟ್ಟಿ ಸಲ್ಲಿಸಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನಿಗೆ ನ್ಯಾಯಾಲಯ 7 ವರ್ಷ ಕಠಿನ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿದೆ. ಮಡಿಕೇರಿ ತಾಲೂಕಿನ ಕಾರೆಕಾಡು ಗ್ರಾಮದ ಸಂದೇಶ ಎಂ.ಬಿ. ಶಿಕ್ಷೆಗೊಳಗಾದವರು.
2019ನೇ ಸಾಲಿನಲ್ಲಿ ಅಂಚೆ ಇಲಾಖೆಯ ನೇಮಕಾತಿಯಲ್ಲಿ ಆನ್ಲೈನ್ ಮೂಲಕ ಸಂದೇಶ ಅರ್ಜಿ ಸಲ್ಲಿಸಿದ್ದ. ದಾಖಲೆ ಪರಿಶೀಲನೆ ವೇಳೆ ನಕಲಿ ಅಂಕಪಟ್ಟಿ ಸಲ್ಲಿಸಿ ಅಂಚೆ ಇಲಾಖೆಯಲ್ಲಿ ನೌಕರಿ ಪಡೆದಿರುವುದು ಪತ್ತೆಯಾಗಿತ್ತು. ಈ ಕುರಿತು ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸ ಲಾಗಿತ್ತು. 2022ರ ಫೆ.25 ರಂದು ಸಂದೇಶನನ್ನು ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi: ಟ್ರಾಫಿಕ್ ಪೊಲೀಸ್ ಠಾಣಾ ಕಟ್ಟಡ ಪರಿಶೀಲಿಸಿದ ಎಸ್ಪಿ ನಾರಾಯಣ
Parvathy Movie: ಪಾರು ಪಾರ್ವತಿಯ ಕಾರ್ಬಾರು
Tulu Films: ʼಜೈʼ ಚಿತ್ರೀಕರಣಕ್ಕಾಗಿ ಮಂಗಳೂರಿಗೆ ಬಂದ ಬಾಲಿವುಡ್ ನಟ ಸುನೀಲ್ ಶೆಟ್ಟಿ
Team India: ಪತ್ನಿಯೊಂದಿಗೆ ವಿದೇಶಿ ಸರಣಿಯಲ್ಲಿ ಉಳಿಯುವಂತಿಲ್ಲ: ಬಿಸಿಸಿಐ ಕಠಿಣ ನಿಯಮ
Sirsi: ಸಂಸದ ಕಾಗೇರಿ ಮನೆ ಅಂಗಳದಲ್ಲಿ ಚಿರತೆ ಓಡಾಟ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.