ಇಚ್ಛಾಶಕ್ತಿ ಇದ್ದಲ್ಲಿ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ: ರಂಜನ್
Team Udayavani, Jul 8, 2019, 5:41 AM IST
ಮಡಿಕೇರಿ:ಇಚ್ಛಾಶಕ್ತಿ ಮತ್ತು ಶ್ರದ್ಧೆ ಇದ್ದಲ್ಲಿ ಮಾತ್ರ ಐಬಿಪಿಎಸ್ (ಬ್ಯಾಂಕಿಂಗ್ ಸಿಬಂದಿ ಆಯ್ಕೆ ಸಂಸ್ಥೆ) ನಡೆಸುವ ಪರೀಕ್ಷೆಯನ್ನು ಸುಲಭವಾಗಿ ಎದುರಿಸಬಹುದು ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ತಿಳಿಸಿದ್ದಾರೆ.
ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ, ಸ್ಟಡಿ ಸರ್ಕಲ್ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಗರದ ಜೂನಿಯರ್ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆದ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸರಕಾರ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ನೇಮಕಾತಿಗೆ ನಡೆಯುವ ಪರೀಕ್ಷೆಗೆ ಕನ್ನಡ ಭಾಷೆಯಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದು, ಈ ವರ್ಷದಿಂದ ಜಾರಿಗೆ ಬರಲಿದೆ. ಈ ಅವಕಾಶವನ್ನು ಬಳಸಿಕೊಳ್ಳುವಂತೆ ಶಾಸಕರು ಹೇಳಿದರು.
ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಅವಕಾಶಗಳು ವಿಪುಲವಾಗಿದ್ದು, ಬೇಡಿಕೆಗೆ ತಕ್ಕಂತೆ ಅಧ್ಯಯನ ಮಾಡಬೇಕು. ಆ ನಿಟ್ಟಿನಲ್ಲಿ ವೃತ್ತಿ ಕೌಶಲ್ಯ ಬೆಳೆಸಿಕೊಳ್ಳು ವಂತಾಗಬೇಕು ಎಂದು ಅಪ್ಪಚ್ಚುರಂಜನ್ ಅವರು ಸಲಹೆ ಮಾಡಿದರು.
ಸಿಕ್ಕಿರುವ ಹುದ್ದೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಬೇಕು. ಜತೆಗೆ ಅದ ಕ್ಕಿಂತ ಉತ್ತಮ ಹುದ್ದೆಗಳನ್ನು ಪಡೆ ಯಲು ಪ್ರಯತ್ನಿಸಬೇಕು ಎಂದು ಶಾಸಕರು ಹೇಳಿದರು.
ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ.ಜಗನ್ನಾಥ್ ಅವರು ಮಾತನಾಡಿ ಸ್ಟಡಿ ಸರ್ಕಲ್ ವತಿಯಿಂದ ಕಳೆದ 2009 ರಿಂದ ವರ್ಷದಲ್ಲಿ 4-5 ಪರೀಕ್ಷೆಗಳಿಗೆ ತರಬೇತಿಯನ್ನು ಉಚಿತವಾಗಿ ನೀಡ ಲಾಗುತ್ತದೆ. ನಾಗರಿಕ ಸ್ಪರ್ಧಾತ್ಮಕ ಪರೀಕ್ಷೆಗೆ ಪದವಿ ಪಡೆದ ಪ್ರತಿಯೊಬ್ಬರೂ ಅರ್ಜಿ ಸಲ್ಲಿಸಲು ಮುಂದಾಗಬೇಕು ಎಂದರು.
ಇದೇ ವರ್ಷದಿಂದ ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶವಿದೆ. ಇದರ ಅವಕಾಶ ಬಳಸಿಕೊಳ್ಳಬೇಕು ಎಂದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಆರ್.ಕೆ.ಬಾಲಚಂದ್ರ ಅವರು ಬ್ಯಾಂಕಿಂಗ್ ಪರೀಕ್ಷೆ ಎದುರಿಸುವ ಬಗ್ಗೆ ಹಲವು ಮಾಹಿತಿ ನೀಡಿದರು.
ಸ. ಪ. ಪೂ. ಕಾಲೇಜಿನ ಪ್ರಾಂಶು ಪಾಲರಾದ ವಿಜಯ, ಉಪನ್ಯಾಸಕರಾದ ಚಿದಾನಂದ, ನಂದೀಶ್, ಬಿಸಿಎಂ ಇಲಾಖೆಯ ವ್ಯವಸ್ಥಾಪಕರಾದ ಪುಟ್ಟ ರಾಜು ಅವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.