Forest Department ಯಶಸ್ವಿ ಕಾರ್ಯಾಚರಣೆ : ಮಡಿಕೇರಿ: ಉಪಟಳ ನೀಡುತ್ತಿದ್ದ ಕಾಡಾನೆ ಸೆರೆ
Team Udayavani, Aug 16, 2023, 1:05 AM IST
ಮಡಿಕೇರಿ: ಅರೆಕಾಡು ಗ್ರಾಮದಲ್ಲಿ ನಿರಂತರ ಉಪಟಳ ನೀಡುತ್ತ ವ್ಯಕ್ತಿಯೊಬ್ಬರ ಜೀವಹಾನಿಗೆ ಕಾರಣವಾಗಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಗ್ರಾಮದ ಮದರ ಕುಪ್ಪೆಯಲ್ಲಿ ಪತ್ತೆಯಾದ ಸುಮಾರು 16 ವರ್ಷದ ಒಂಟಿ ಸಲಗವನ್ನು ಅರಿವಳಿಕೆ ನೀಡಿ ಸೆರೆ ಹಿಡಿದು ಲಾರಿ ಮೂಲಕ ದುಬಾರೆ ಸಾಕಾನೆ ಶಿಬಿರಕ್ಕೆ ಸಾಗಿಸಲಾಯಿತು. ಮತ್ತಿಗೋಡು ಸಾಕಾನೆ ಶಿಬಿರದ ಅಭಿಮನ್ಯು, ಭೀಮ, ದುಬಾರೆ ಸಾಕಾನೆ ಶಿಬಿರದ ಸುಗ್ರೀವ ಹಾಗೂ ಹರ್ಷನನ್ನು ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿತ್ತು.
ಅರಣ್ಯ ಅಧಿಕಾರಿಗಳಾದ ಕೂಡಕಂಡಿ ಸುಬ್ರಾಯ, ಗೋಪಾಲ, ಪೂವಯ್ಯ, ಬಾಷ, ಹನುಮಂತರಾಜು ಹಾಗೂ ಸಿಬಂದಿ ಪಾಲ್ಗೊಂಡಿದ್ದರು.
ಕೆಲವು ದಿನಗಳ ಹಿಂದೆ ಅರೆಕಾಡು ಪರಿಸರದಲ್ಲಿ ಟ್ರ್ಯಾಕ್ಟರ್ ಓಡಿಸುತ್ತಿದ್ದ ದೇವಪ್ಪ ಅವರು ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದರು. ಕಾಡಾನೆ ಹಾವಳಿ ತಡೆಗೆ ಅರಣ್ಯ ಇಲಾಖೆ ಕ್ರಮ ಕೈಗೊಂಡಿಲ್ಲವೆಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ ಬಳಿಕ ಕಳೆೆದ ಎರಡು ದಿನಗಳಿಂದ ಕಾರ್ಯಾಚರಣೆ ನಡೆಸಿದ ಇಲಾಖೆಯು ಆನೆಯೊಂದನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.
ಆ ಆನೆ ಇದಲ್ಲ!
ಸೆರೆ ಸಿಕ್ಕ ಆನೆಯು ದೇವಪ್ಪ ಅವರನ್ನು ಬಲಿ ಪಡೆದ ಆನೆ ಅಲ್ಲವೆಂದು ಗ್ರಾಮದ ಕೆಲವರು ಸಂಶಯ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿದ್ದ ಕಾಡಾನೆಯ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಅದಕ್ಕೆ ದೊಡ್ಡ ದಂತಗಳಿದ್ದವು, ಸೆರೆ ಸಿಕ್ಕ ಆನೆಯದ್ದು ಸಣ್ಣ ದಂತ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.