ಸುಗ್ಗಿಕಟ್ಟೆ: ಗ್ರಾಮ ದೇವತೆ ಸಬ್ಬಮ್ಮ ದೇವಿಗೆ ಸಾಂಪ್ರದಾಯಿಕ ಪೂಜೆ
Team Udayavani, May 1, 2019, 6:30 AM IST
ಸೋಮವಾರಪೇಟೆ : ಇಲ್ಲಿಗೆ ಸಮೀಪದ ಶಾಂತಳ್ಳಿ ಹೋಬಳಿಯ ನಗರಳ್ಳಿ ಗ್ರಾಮದ ಐತಿಹಾಸಿಕ ಕೂತಿ ನಾಡು ಸುಗ್ಗಿ ಹಬ್ಬ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಸೋಮವಾರ ಶ್ರದ್ಧಾ ಭಕ್ತಿಯಿಂದ ನೆರವೇರಿತು.
ಕೂತಿನಾಡಿಗೆ ಸೇರಿದ 18 ಗ್ರಾಮಗಳ ನಿವಾಸಿಗಳು ಸುಗ್ಗಿಕಟ್ಟೆಯಲ್ಲಿ ಸೇರಿ ಗ್ರಾಮ ದೇವತೆ ಸಬ್ಬಮ್ಮ ದೇವಿಗೆ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಗ್ರಾಮ ಸುಭಿರಕ್ಷೆಗೆ ಪೂಜೆ ಹಾಗೂ ಮಳೆ, ಬೆಳೆ ಸಮೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಭಕ್ತರ ಆಕರ್ಷಣೆಯ ಸುಗ್ಗಿ ದೇವರ ಬನದಲ್ಲಿ ಅಳವಡಿಸಲಾಗಿರುವ ಬೃಹತ್ ಕಲ್ಲಿನ ಕಂಬದಲ್ಲಿ 4 ಮಂದಿ ದೇವರ ಒಡೆಕಾರರನ್ನು ಬೆತ್ತದ ಉಯ್ನಾಲೆಯಲ್ಲಿ ತೂಗುವ ಮೂಲಕ ಸುಗ್ಗಿ ಉತ್ಸವಕ್ಕೆ ವಿಧ್ಯುಕ್ತ ತೆರೆ ಬಿದ್ದಿತು.
ಬೆಳ್ಳಿಗ್ಗೆ ಸುಗ್ಗಿಬನದ ಸಮೀಪವಿರುವ ಬಿಲ್ಲ ರಂಗದಲ್ಲಿ ಪೂರ್ವಜರ ಜೀವನ ಪದ್ಧತಿಯನ್ನು ಬಿಂಬಿಸುವ ನೃತ್ಯ ಪ್ರಾಕಾರ, ಬಿಲ್ಲುಬಾಣಗಳನ್ನು ಹಿಡಿದು ಸಾಂಕೇತಿಕವಾಗಿ ಬೇಟೆಯಾಡುವ ಪ್ರಸಂಗ, ಕಡವೆಯ ಪಾತ್ರಧಾರಿಯನ್ನು ಅಟ್ಟಿಸಿಕೊಂಡು ಹೋಗುವ ಬೇಟೆಗಾರರ ತಂಡದ ಸದಸ್ಯರಿಗೆ ಕಡವೆ ಒದೆಯುವ ದೃಶ್ಯ ಮನಮೋಹಕವಾಗಿತ್ತು. ಕೊನೆಯಲ್ಲಿ ಕಡವೆ ಕಾಡು ಸೇರುವ ಮೂಲಕ, ಬೇಟೆಗಾರರಿಂದ ಬಚಾವಾಗುವ ದೃಶ್ಯ, ಸಾಂಪ್ರದಾಯಿಕ ಬಿಳಿ ಕುಪ್ಪಸ ದಟ್ಟಿಯನ್ನು ಧರಿಸಿದ್ದ ಗ್ರಾಮದ ಹಿರಿಯರು, ಬಿಲ್ಲರಂಗದಲ್ಲಿ ಪ್ರದರ್ಶನ ಹಾಕುತ್ತ, ಮಲೆನಾಡು ಸುಗ್ಗಿ ಇತಿಹಾಸವನ್ನು ನೆರೆದಿದ್ದವರಿಗೆ ತಿಳಿಸುತ್ತಿದ್ದರು.
ಕೂತಿ ನಾಡು ವ್ಯಾಪ್ತಿಗೆ ಒಳಪಡುವ ಗ್ರಾಮಗಳಾದ ಕೂತಿ, ಯಡದಂಟೆ, ಕುಂದಳ್ಳಿ, ನಗರಳ್ಳಿ, ಹೆಮ್ಮನಗದ್ದೆ, ಕನ್ನಳ್ಳಿ, ಬೀಕಳ್ಳಿ, ಬೆಟ್ಟದಳ್ಳಿ, ಜಕ್ಕನಳ್ಳಿ, ಬೆಟ್ಟದಕೊಪ್ಪ, ಹಳ್ಳಿಯೂರು, ಕೊತ್ತನಳ್ಳಿ, ಇನಕನಹಳ್ಳಿ, ಬೆಂಕಳ್ಳಿ, ಕುಡಿಗಾಣ, ನಾಡ್ನಳ್ಳಿ, ತಡ್ಡಿಕೊಪ್ಪ, ಓಡಳ್ಳಿ ಗ್ರಾಮಗಳ ಮುಖ್ಯಸ್ಥರು ಗ್ರಾಮ ದೇವತೆಗೆ ಪಟ್ಟ ಒಪ್ಪಿಸಿ, ಸಾಮೂಹಿಕ ಪೂಜೆ ನೆರವೇರಿಸಿದರು.
ಕೂತಿನಾಡು ಶ್ರೀ ಸಬ್ಬಮ್ಮ ದೇವರ ಸಮಿತಿ ಅಧ್ಯಕ್ಷ ಕೆ.ಟಿ.ಜೋಯಪ್ಪ, ಉಪಾಧ್ಯಕ್ಷ ಎನ್.ಕೆ.ಪ್ರಕಾಶ್, ಕಾರ್ಯ ದರ್ಶಿ ಎನ್.ಬಿ.ರಾಘವೇಂದ್ರ. ಖಜಾಂಚಿ ಎಲ್.ಪಿ.ಈರಪ್ಪ, ಸಹಕಾರ್ಯದರ್ಶಿ ಎಚ್.ಆರ್. ಗೋಪಾಲ ಸುಗ್ಗಿಯ ಉಸ್ತುವಾರಿ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್ ಮೇಜರ್
Madikeri: ಅರೆಸುಟ್ಟ ಮೃತದೇಹದ ಪ್ರಕರಣ; ಪೊಲೀಸರಿಂದ ತಪ್ಪಿಸಿಕೊಂಡಿದ್ದ ಅಂಕೂರ್ ರಾಣ ಬಂಧನ
Madikeri: ಚೆಂಬೆಬೆಳ್ಳೂರು; ಕಾಡಾನೆ ಹಾವಳಿಯಿಂದ ಕೃಷಿಗೆ ಹಾನಿ
Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!
Madikeri: ತಲಕಾವೇರಿಯಲ್ಲಿ ಸ್ವಾಮೀಜಿಗಳಿಂದ ವಿಶೇಷ ಪೂಜೆ
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.