Suntikoppa; ಸರಣಿ ಕಳ್ಳತನ ಆರೋಪಿ ಪುತ್ತೂರಿನ ವ್ಯಕ್ತಿಯ ಬಂಧನ
Team Udayavani, Feb 16, 2024, 11:56 PM IST
ಮಡಿಕೇರಿ: ಇತ್ತೀಚೆಗೆ ಸುಂಟಿಕೊಪ್ಪದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯನ್ನು ಬಂಧಿಸುವಲ್ಲಿ ಸುಂಟಿ ಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಚಿಕ್ಕಮುಟ್ನೂರು ಗ್ರಾಮದ ನಿವಾಸಿ ಮೊಹಮ್ಮದ್ ಅಶ್ರಫ್ (43) ಬಂಧಿತ ಆರೋಪಿ. ಆತನ ಬಳಿಯಿಂದ 15 ಸಾವಿರ ರೂ. ನಗದು, ವಾಚ್ ಮತ್ತು ಬಟ್ಟೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಫೆ. 28ರಂದು ಸುಂಟಿಕೊಪ್ಪದ ನಿವಾಸಿ ಕೆ.ಎಂ. ಹಸೈನಾರ್‌ಅವರ ಟಿನೇಜ್ ಕಲೆಕ್ಷನ್ಸ್ ಬಟ್ಟೆ ಅಂಗಡಿಯ ಬೀಗವನ್ನು ಮುರಿದು ಕ್ಯಾಶ್ ಟೇಬಲ್‌ನಲ್ಲಿದ್ದ 1ಲಕ್ಷ ರೂ. ನಗದು, ವಾಚ್ ಮತ್ತು ಬಟ್ಟೆಗಳನ್ನು ಕಳ್ಳತನ ಮಾಡಲಾಗಿತ್ತು. ಅಲ್ಲದೆ ಸುರೇಶ್ ಎಚ್.ಕೆ. ಅವರ ಎ.ಆರ್. ಕನ್ಸಲ್ಟಿಂಗ್ ಅಂಗಡಿಯ ಎದುರು ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನೂ ಕದ್ದೊಯ್ಯಲಾಗಿತ್ತು.
ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡ ಪೊಲೀಸರು ವಿಶೇಷ ತಂಡ ರಚಿಸಿ ಚೋರರ ಪತ್ತೆಗಾಗಿ ಕ್ರಮ ಕೈಗೊಂಡಿದ್ದರು. ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ. ಗಂಗಾಧರಪ್ಪ, ಕುಶಾಲನಗರ ವೃತ್ತದ ಸಿಪಿಐ ರಾಜೇಶ್ ಕೆ., ಸುಂಟಿಕೊಪ್ಪ ಠಾಣೆಯ ಪಿಎಸ್‌ಐಗಳಾದ ಶ್ರೀಧರ್‌ಎಂ.ಸಿ., ನಾಗರಾಜು ಹಾಗೂ ಸಿಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.