ಶಂಕಿತ ನಕ್ಸಲ್‌ ಮುಖಂಡ ರೂಪೇಶ್‌ ಮಡಿಕೇರಿ ನ್ಯಾಯಾಲಯಕ್ಕೆ ಹಾಜರು

Team Udayavani, Apr 28, 2019, 10:39 AM IST

Z-NAXAL-ROOPESH

ಮಡಿಕೇರಿ: ಶಂಕಿತ ನಕ್ಸಲ್‌ ಮುಖಂಡ, 2010ರಲ್ಲಿ ಭಾಗ ಮಂಡಲ ವ್ಯಾಪ್ತಿಯ ಮುಂಡ್ರೋಟು ವಿನ ಮಾಂಗುಡಿಮಲೆಯಲ್ಲಿ ಗ್ರಾಮಸ್ಥರಿಗೆ ಬೆದರಿಕೆ ಒಡ್ಡಿರುವ ಆರೋಪ ಎದುರಿಸುತ್ತಿರುವ ರೂಪೇಶ್‌ನನ್ನು ಬಿಗಿ ಭದ್ರತೆಯಲ್ಲಿ ಮಡಿಕೇರಿಯ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಮಡಿಕೇರಿ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿಡಲಾಗಿದ್ದ ರೂಪೇಶ್‌ನನ್ನು ಕೇರಳ ಭಯೋತ್ಪಾದಕ ನಿಗ್ರಹ ದಳ, ಕೇರಳ ಪೊಲೀಸರು ಮತ್ತು ಕೊಡಗು ಪೊಲೀಸ್‌ ಕಮಾಂಡೋಗಳು ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆ ತಂದರು. ಪೊಲೀಸ್‌ ವಾಹನದಿಂದ ಕೆಳಗೆ ಇಳಿಯುತ್ತಿದ್ದಂತೆಯೇ “ನಕ್ಸಲ್‌ ಬಾರಿ ಜಿಂದಾಬಾದ್‌, ಮಾವೋವಾದಿಗಳು ಅಪರಾಧಿಗಳಲ್ಲ, ಹುತಾತ್ಮ ನಕ್ಸಲರು ಅಮರವಾಗಲಿ’ ಎಂದು ಘೋಷಣೆ ಕೂಗಿದ.

ಜಿಲ್ಲಾ ನ್ಯಾಯಾಲಯದ ನ್ಯಾಯಾ ಧೀಶರಾದ ವೀರಪ್ಪ ವಿ. ಮಲ್ಲಾಪುರ ಅವರು ರಜೆಯಲ್ಲಿರುವುದರಿಂದ 1ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪವನೇಶ್‌ ಮುಂದೆ ಹಾಜರುಪಡಿಸಲಾಯಿತು. ಶನಿವಾರ ಸರಕಾರಿ ವಕೀಲರು ಹಾಜರಿಲ್ಲವಾದ್ದರಿಂದ ಅವರಿಗೆ ಆಕ್ಷೇಪಣೆ ಸಲ್ಲಿಸಲು ದಿನಾಂಕ ನಿಗದಿಗೊಳಿಸಿ ವಿಚಾರಣೆಯನ್ನು ಮೇ 22ಕ್ಕೆ ಮುಂದೂಡಲಾಯಿತು.

ಪ್ರಕರಣದ ಹಿನ್ನೆಲೆ
ರೂಪೇಶ್‌ ವಿರುದ್ಧ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಆಂಧ್ರ ಪ್ರದೇಶದಲ್ಲಿ ನಕ್ಸಲ್‌ ಚಟುವಟಿಕೆ ಸಹಿತ ಒಟ್ಟು 38 ಪ್ರಕರಣಗಳಿವೆ. ಈತನ ವಿರುದ್ಧ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳೂ ದಾಖಲಾಗಿವೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ 2 ಪ್ರತ್ಯೇಕ ಪ್ರಕರಣದ ವಿಚಾರಣೆಗಾಗಿ ಈತನನ್ನು 6ನೇ ಬಾರಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ಬಳಿಕ ಆತನನ್ನು ಕೇರಳಕ್ಕೆ ಕರೆದೊಯ್ಯಲಾಯಿತು. ನ್ಯಾಯಾಲಯದ ಹೊರಭಾಗ ನಗರ ಠಾಣಾಧಿಕಾರಿ ಷಣ್ಮುಗ ನೇತೃತ್ವದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.

ಟಾಪ್ ನ್ಯೂಸ್

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.