‘ನಿರಾಶ್ರಿತರಿಗೆ ವಸತಿ ಕಲ್ಪಿಸಲು ತುರ್ತು ಕ್ರಮ ಕೈಗೊಳ್ಳಿ ‘
Team Udayavani, Jul 1, 2019, 5:43 AM IST
ಮಡಿಕೇರಿ:ಗ್ರಾಮ ಪಂಚಾಯತ್ ಮಟ್ಟದಲ್ಲಿ ಹಾಗೂ ನಗರ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ಅಗತ್ಯ ಜಾಗ ಗುರುತಿಸಿ ಅರ್ಹ ಫಲಾನುಭವಿಗಳಿಗೆ ವಸತಿ ಕಲ್ಪಿಸಲು ತುರ್ತು ಕ್ರಮ ಕೈಗೊಳ್ಳುವಂತೆ ವಸತಿ ಸಚಿವ ಎಂಟಿಬಿ ನಾಗರಾಜು ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಡಳಿತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜತೆ ನಡೆದ ಚರ್ಚೆಯಲ್ಲಿ ಮಾತನಾಡಿದ ಸಚಿವರು ನಿವೇಶನ ರಹಿತ ಹಾಗೂ ವಸತಿ ರಹಿತರಿಗೆ ಮನೆಗಳ ಆವಶ್ಯಕತೆಯಿದ್ದು, ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ವೈದ್ಯಕೀಯ ಕಾಲೇಜಿನ ಬಾಕಿ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.
ಶಾಸಕರಾದ ಅಪ್ಪಚ್ಚು ರಂಜನ್ ಅವರು ಮಾತನಾಡಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಅವಶ್ಯಕತೆಯಿದ್ದು, ಮಡಿಕೇರಿ ನಗರದ ಅರಣ್ಯ ಭವನ ಬಳಿ ಮೂರು ಎಕರೆ ಸರ್ಕಾರಿ ಜಾಗವಿದ್ದು ಈ ಜಾಗದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾದಲ್ಲಿ ಜಿಲ್ಲೆಯ ಜನತೆಗೆ ಅನುಕೂಲವಾಗಲಿದೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಚಿವರ ಗಮನಕ್ಕೆ ತಂದರು.
ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ ಹಾಗೂ ವೀಣಾ ಅಚ್ಚಯ್ಯ ಅವರು ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮಿನಿ ಬಸ್ಸು ಸೌಲಭ್ಯ ಕಲ್ಪಿಸಬೇಕು, ಇದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಸಚಿವರ ಗಮನಕ್ಕೆ ತಂದರು.
ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ, ಸಚಿವರ ಆಪ್ತ ಕಾರ್ಯದರ್ಶಿ ಜಗದೀಶ್, ಪುನರ್ ವಸತಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ಜವರೇಗೌಡ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶ್ರೀನಿವಾಸ್ ಉಪಸ್ಥಿತರಿದ್ದರು.
ಕೊಡಗಿನಲ್ಲಿ 9,976 ವಸತಿಗಳ ಬೇಡಿಕೆ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ನಿವೇಶನಕ್ಕೆ 16 ಸಾವಿರ ಹಾಗೂ ವಸತಿಗಾಗಿ 9,976 ಬೇಡಿಕೆ ಇದ್ದು, ನಿವೇಶನ ಹಾಗೂ ವಸತಿ ರಹಿತರಿಗೆ ಮನೆ ನಿರ್ಮಿಸಿಕೊಡಲು ಮೈತ್ರಿ ಸರಕಾರ ಪ್ರಯತ್ನಿಸುತ್ತಿದೆ ಎಂದು ವಸತಿ ಸಚಿವ ಎಂಟಿಬಿ ನಾಗರಾಜು ಅವರು ಹೇಳಿದರು.
ಪ್ರಕೃತಿ ವಿಕೋಪದಿಂದ ತೊಂದರೆಗೆ ಸಿಲುಕಿದ ನಿರಾಶ್ರಿತರ ಜತೆಗೆ, ಇತರರಿಗೂ ಬಸವ, ಅಂಬೇಡ್ಕರ್, ಡಿ.ದೇವರಾಜ ಅರಸು, ವಸತಿ ಯೋಜನೆ ಮತ್ತು ಪ್ರಧಾನಮಂತ್ರಿ ನಗರ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದರು. ಮನೆ ಕಳೆದುಕೊಂಡ ನಿರಾಶ್ರಿತರಿಗೆ 770 ಮನೆಗಳನ್ನು ವಿವಿಧ ಹಂತದಲ್ಲಿ ನಿರ್ಮಿಸಲಾಗುತ್ತಿದ್ದು, ಶೀಘ್ರ ಮನೆ ಹಸ್ತಾಂತರಿಸಲಾಗುವುದು ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್!
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.