ತಲಕಾವೇರಿ ಪ್ಲಾಸ್ಟಿಕ್ ಬಿಂದಿಗೆ, ಬಾಟಲಿ ಬಳಕೆ ನಿಷೇಧ : ಬೋಪಯ್ಯ
Team Udayavani, Oct 7, 2019, 5:06 AM IST
ಮಡಿಕೇರಿ: ಭಾಗಮಂಡಲ, ತಲಕಾವೇರಿ ದೇವಸ್ಥಾನ ಪ್ರದೇಶದ ವ್ಯಾಪ್ತಿಯಲ್ಲಿ ಮದ್ಯ ಸೇವನೆ ಸಂಪೂರ್ಣ ನಿಷೇಧವಾಗಿದ್ದು, ಇದನ್ನು ಉಲ್ಲಂ ಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಶಾಸಕ ಕೆ.ಜಿ. ಬೊಪಯ್ಯ ಅವರು ಸೂಚನೆ ನೀಡಿದ್ದಾರೆ.
ತಲಕಾವೇರಿ ತೀಥೋìದ್ಭವ ಜಾತ್ರೆ ಸಂಬಂಧ ಭಾಗಮಂಡಲದ ಮುಡಿ ಕಟ್ಟಡದಲ್ಲಿ ಶನಿವಾರ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾವೇರಿ ತೀಥೋìದ್ಭವ ಸಂದರ್ಭದಲ್ಲಿ ಕೊಳದಿಂದ ಪ್ಲಾಸ್ಟಿಕ್ ಬಿಂದಿಗೆ, ಪ್ಲಾಸ್ಟಿಕ್ ಬಾಟಲಿಗಳಿಂದ ತೀರ್ಥವನ್ನು ಶೇಖರಿಸಿಕೊಳ್ಳುವುದು ಸಂಪೂರ್ಣ ನಿಷೇಧಿಸಲಾಗಿದ್ದು ಇದನ್ನು ತಪ್ಪದೆ ಪಾಲನೆ ಮಾಡಬೇಕೆಂದು ಶಾಸಕರು ತಿಳಿಸಿದರು.
ತಲಕಾವೇರಿ ಜಾತ್ರೆ ಸಂಬಂಧ ಭಾಗಮಂಡಲ ಗ್ರಾಮ ಪಂಚಾಯಿತಿಗೆ ಸರ್ಕಾರವು 20 ಲಕ್ಷ ರೂ. ಬಿಡುಗಡೆ ಮಾಡಿದ್ದು, ಅಗತ್ಯ ತುರ್ತು ಕಾಮಗಾರಿಗೆ ಆದ್ಯತೆ ನೀಡಿ ಪೂರ್ಣ ಗೊಳಿಸಬೇಕು. ಜತೆಗೆ ಸ್ವತ್ಛತೆಗೆ ಹೆಚ್ಚು ಆದ್ಯತೆ ನೀಡುವಂತೆ ಸೂಚಿಸಿದರು. ಯಾವುದೇ ರೀತಿಯ ಲೋಪದೋಷಗಳು ಉಂಟಾಗದಂತೆ ಕಾರ್ಯ ನಿರ್ವಹಿಸಬೇಕೆಂದು ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರಿಗೆ ಇಲಾಖೆ ಹಾಗೂ ಕೆಎಸ್‌ಆರ್‌ಟಿಸಿ ವತಿಯಿಂದ ಜಿಲ್ಲೆಯ ವಿವಿಧ ಭಾಗಗಳಿಂದ ಜಾತ್ರೆ ಸಂದರ್ಭದಲ್ಲಿ ಹೆಚ್ಚುವರಿ ಬಸ್ಸುಗಳನ್ನು ನಿಯೋಜಿಸಬೇಕು ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಭಗಂಡೇಶ್ವರ ದೇವಸ್ಥಾನದ ತಕ್ಕ ಮುಖ್ಯಸ್ಥ ಮೋಟಯ್ಯ ಅ. 15ಕ್ಕೆ ಅಕ್ಷಯ ಪಾತ್ರೆ, ಭಂಡಾರ ಶಾಸ್ತ್ರ ನಡೆಯುತ್ತದೆ ಎಂದು ತಿಳಿಸುತ್ತ ದೇವತ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.
ರಾಧಾಕೃಷ್ಣ ನಾಯಕ್ ಭಗಂಡೇಶ್ವರ ದೇವಸ್ಥಾನದ ವ್ಯಾಪ್ತಿಯಲ್ಲಿರುವ ತಮ್ಮ ಎರಡುಎಕರೆ ಜಾಗವನ್ನು ದೇವಸ್ಥಾನಕ್ಕೆ ದಾನವಾಗಿ ನೀಡಿರುವ ಬಗ್ಗೆ ಕೆ.ಬೊಪಯ್ಯ ತಿಳಿಸಿದರು. 58 ಲಕ್ಷದ ಕಾಮಗಾರಿಗೆ ಶಾಸಕರು ಗುದ್ದಲಿ ಪೂಜೆ ಮಾಡಿದರು.
ಜಿ.ಪಂ.ಅಧ್ಯಕ್ಷ ಬಿ.ಎ. ಹರೀಶ್, ಜಿ.ಪಂ.ಸದಸ್ಯೆ ಕವಿತಾ ಪ್ರಭಾಕರ್, ತಾ.ಪಂ.ಅಧ್ಯಕ್ಷೆ ಶೋಭಾ ಮೋಹನ್ ಮಾತನಾಡಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು
ಮೂಲ ಸೌಲಭ್ಯ
ಜಾತ್ರೆ ಸಂದರ್ಭದಲ್ಲಿ ವಾಹನ ನಿಲುಗಡೆ, ಕುಡಿಯುವ ನೀರು, ಶೌಚಾಲಯ ಹೀಗೆ ಹಲವು ಮೂಲ ಸೌಲಭ್ಯ ಕಲ್ಪಿಸಬೇಕು. ಜತೆಗೆ ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಪ್ರತಿ ನೂರು ಮೀಟರ್ ವ್ಯಾಪ್ತಿಯಲ್ಲಿ ಕಸದ ಡಬ್ಬಗಳನ್ನು ಶಾಶ್ವತವಾಗಿ ಜೋಡಿಸುವಂತೆ ಕ್ರಮಕೈಗೊಳ್ಳಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಲೋಕೊಪಯೋಗಿಇಲಾಖೆ ಅಧಿಕಾರಿಗಳು ಬಾಗಮಂಡಲ- ತಲಕಾವೇರಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಗುಂಡಿಗಳನ್ನು ತುರ್ತಾಗಿ ಮುಚ್ಚಬೇಕು, ಜತೆಗೆ ರಸ್ತೆಬದಿಯ ಕಾಡನ್ನು ಸ್ವತ್ಛಗೋಳಿಸಿ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ವಹಿಸುವಂತೆ ಸಂಬಂಧಪಟ್ಟ ಎಂಜಿನಿಯರ್‌ಗೆ ಶಾಸಕರು ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.