ಕಾವೇರಿ ತೀಥೋìದ್ಭವ ಹಿನ್ನೆಲೆ: ತಲಕಾವೇರಿ-ಭಾಗಮಂಡಲ ಸ್ವತ್ಛತೆ
Team Udayavani, Oct 17, 2019, 5:13 AM IST
ಭಾಗಮಂಡಲ: ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿ ಕ್ಷೇತ್ರದಲ್ಲಿಅ.18 ರಂದು ಸಂಭವಿಸುವ ಪವಿತ್ರ ಕಾವೇರಿ ತೀಥೋìದ್ಭವ ಹಿನ್ನೆಲೆಯಲ್ಲಿ ಮಂಗಳವಾರ ಗ್ರೀನ್ ಸಿಟಿ ಫೋರಂ ಸಂಘಟನೆ ನೇತೃತ್ವದಲ್ಲಿ ತಲಕಾವೇರಿಯಿಂದ ಭಾಗಮಂಡಲದವರೆಗೆ ಸ್ವತ್ಛತಾ ಕಾರ್ಯ ನಡೆಯಿತು. ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ ವಿದ್ಯಾರ್ಥಿಗಳು, ಕ್ಲೀನ್ ಕೂರ್ಗ್ ಇನ್ಸೆಟಿವ್ (ಸಿಸಿಐ) ಸಂಘಟನೆ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ತಲಕಾವೇರಿ ಕ್ಷೇತ್ರದ ಪ್ರವೇಶದ್ವಾರದಿಂದ ಸ್ವತ್ಛತೆ ಪ್ರಾರಂಭಿಸಲಾಯಿತು. ರಸ್ತೆ ಎರಡು ಬದಿಯಲ್ಲಿದ್ದ ಬಾಟಲಿ, ಪ್ಲಾಸ್ಟಿಕ್ ವಸ್ತುಗಳನ್ನು ಹೆಕ್ಕುವುದರ ಮೂಲಕ ಸ್ವತ್ಛಗೊಳಿಸಲಾಯಿತು. ಈ ವೇಳೆ ವಾಹನಗಳಲ್ಲಿ ಆಗಮಿಸಿದ ಪ್ರವಾಸಿಗರಿಗೆ ಸ್ವತ್ಛತೆ ಕಾಪಾಡುವಂತೆ ಮನವಿ ಮಾಡಲಾಯಿತು. ದಕ್ಷಿಣ ಭಾರತದ ಜೀವನದಿ ಕಾವೇರಿ ಕ್ಷೇತ್ರವನ್ನು ಸ್ವತ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂಬ ಸಂದೇಶ ರವಾನಿಸಲಾಯಿತು. ನಾಲ್ಕು ವರ್ಷದಿಂದ ಕಾವೇರಿತೀಥೋìದ್ಭವಕ್ಕೆ ಮುನ್ನ ತಲಕಾವೇರಿಯಿಂದ ಭಾಗಮಂಡಲದವರೆಗೂ ಸ್ವತ್ಛತೆ ಮಾಡಲಾಗುತ್ತಿದೆ. ನಮ್ಮ ನಡೆ ಸ್ವತ್ಛತೆ ಕಡೆ ಎಂಬ ಸಂದೇಶವನ್ನು ರವಾನಿಸುವ ಉದ್ದೇಶದಿಂದ ಸ್ವತ್ಛತೆ ಮಾಡಲಾಗುತ್ತಿದೆ ಎಂದು ಗ್ರೀನ್ ಸಿಟಿ ಫೋರಂ ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಹೇಳಿದರು.
ಸ್ವತ್ಛತೆ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಪವಿತ್ರ ಕ್ಷೇತ್ರವನ್ನು ಸ್ವತ್ಛವಾಗಿಟ್ಟುಕೊಳ್ಳಲು ಪ್ರತಿಯೊಬ್ಬರು ಮುತುವರ್ಜಿ ವಹಿಸಬೇಕೆಂದು ಗ್ರೀನ್ ಸಿಟಿ ಫೋರಂ ಸ್ಥಾಪಕಾಧ್ಯಕ್ಷ ಚೈಯ್ಯಂಡ ಸತ್ಯ ಗಣಪತಿ ಹೇಳಿದರು.
ಪ್ರತಿಯೊಬ್ಬರ ಸಹಕಾರದಿಂದ ಸ್ವತ್ಛತೆ ಕಾಪಾಡಲು ಸಾಧ್ಯವಾಗಿದೆ. ಹಲವು ವರ್ಷಗಳಿಗೆ ಹೋಲಿಸಿದ್ದಲ್ಲಿ ಈಗ ಸ್ವತ್ಛತೆ ಬಗ್ಗೆ ಜಾಗೃತಿ ಮೂಡಿದೆ. ಪ್ರತಿಯೊಂದು ಸ್ಥಳದಲ್ಲಿಯೂ ಸ್ವತ್ಛತಾ ಕಾರ್ಯಕ್ರಮ ನಡೆಯುತ್ತಿದೆ ಎಂದು ಕ್ಲೀನ್ ಕೂರ್ಗ್ ಇನ್ಸೆಟಿವ್ ಪ್ರಮುಖರಾಡ ಬಡುವಂಡ ಅರುಣ್ ಅಪ್ಪಚ್ಚು ಹೇಳಿದರು. ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಉತ್ಪಾದನೆ ಮೊದಲು ನಿಲ್ಲಿಸಬೇಕು. ಸ್ನೇಹಿ ವಸ್ತುಗಳನ್ನು ಮಾತ್ರ ಬಳಸುವಂತಾಗಬೇಕು. ಎಂದು ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾ ಹರೀಶ್ ಹೇಳಿದರು.
ಇರಾನಿ ಪ್ರಜೆಸ್ವತ್ಛತೆ
ಒಂದು ತಿಂಗಳ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸಿರುವ ಇರಾನಿ ಪ್ರಜೆ ನಾದೀರ್ ಖಾನ್ ಸ್ವತ್ಛತೆಯಲ್ಲಿ ಪಾಲ್ಗೊಂಡಿದ್ದು ವಿಶೇಷ. ನಮ್ಮ ವಾತಾವರಣವನ್ನು ಸ್ವತ್ಛವಾಗಿಟ್ಟುಕೊಳ್ಳ ಬೇಕೆಂಬ ಆಸಕ್ತಿ ಪ್ರತಿಯೊಬ್ಬರಲ್ಲಿಯೂ ಇರಬೇಕು. ನಿರುಪಯುಕ್ತ ವಸ್ತುಗಳನ್ನು ಎಲ್ಲೆಂದರಲ್ಲಿ ಎಸೆಯುವುದು ಒಳ್ಳೆಯದಲ್ಲ. ಇಂತಹ ಮನಸ್ಥಿತಿ ಮೊದಲು ದೂರವಾಗಬೇಕೆಂದು ಖಾನ್ ಹೇಳಿದರು. ಸ್ವಯಂ ಸೇವಾ ಸಂಘಟನೆಗಳು, ವಿದ್ಯಾರ್ಥಿಗಳು ಸ್ವತ್ಛತೆ ಮಾಡುವುದರ ಮೂಲಕ ಜನಜಾಗೃತಿ ಮೂಡಿಸಲು ಮುಂದಾಗಿರುವುದು ಶ್ಲಾಘನೀಯ. ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.